HAL Recruitment 2021: ಹೆಚ್‌ಎಎಲ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ಡಿ.18 ಕೊನೆ ದಿನ

By Suvarna News  |  First Published Dec 16, 2021, 1:27 PM IST
  • ಹೆಚ್‌ಎಎಲ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.18 ಕೊನೆಯ ದಿನ
  • ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಕರೆ

ಬೆಂಗಳೂರು(ಡಿ.16): ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. (Hindustan Aeronautics Limited-HAL) ಕಂಪನಿಯು ಖಾಲಿ ಇರುವ ಗ್ರಾಜುಯೇಟ್ (Graduate) ಮತ್ತು ಡಿಪ್ಲೋಮಾ ಅಪ್ರೆಂಟಿಸ್ (Diploma Apprentice)ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ()ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಡಿಸೆಂಬರ್ 18, 2021ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಿ.  ಅಥವಾ http://59.89.119.210/trg/ ಗೆ ಭೇಟಿ ನೀಡಿ. ಆನ್‌ಲೈನ್ ಅರ್ಜಿ ಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು https://portal.mhrdnats.gov.in/boat/login/user_login.action ವೆಬ್‌ಸೈಟ್ ನಲ್ಲಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಿ, ನಂತರ ರಿಜಿಸ್ಟರ್ ನಂಬರ್ ಅನ್ನು ಸೇವ್ ಮಾಡಿಕೊಳ್ಳಿ.

HALನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಡಿಪ್ಲೋಮಾ/ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

Latest Videos

undefined

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಗರಿಷ್ಟ 26 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KPSC Exam : ರೈಲು ವಿಳಂಬದಿಂದ ವಂಚಿತರಿಗೆ ಮತ್ತೆ ಪರೀಕ್ಷೆ

ಸಾರ್ವಜನಿಕ ವಲಯದ ಪ್ರಮುಖ ಕಂಪನಿಯಾಗಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಕಂಪನಿಯು  ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿದ್ದು, 1940ರಲ್ಲಿ ಸ್ಥಾಪನೆಯಾಗಿದೆ. ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಾ ಬಂದಿದೆ. ಇಂಥ ಕಂಪನಿಯಲ್ಲಿ ಕೆಲಸ ಮಾಡುವುದು ಹೆಮ್ಮೆಯ ಸಂಗತಿಯಾಗಿದೆ. 

SBI PO Prelims Exam Result: ಎಸ್‌ಬಿಐ ನೇಮಕಾತಿಯ ಪ್ರಿಲಿಮ್ಸ್ ಪರೀಕ್ಷೆಯ ಫಲಿತಾಂಶ ಪ್ರಕಟ

ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹೆಚ್‌ಎಎಲ್ ಅಪ್ರೆಂಟಿಸ್ ನೇಮಕಾತಿ ನಿಯಮಾನುಸಾರ ಸ್ಟೈಫೆಂಡ್ ಅನ್ನು ನೀಡಲಾಗುವುದು.

SBI CBO Recruitment 2022: SBI ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಡಿಪ್ಲೋಮಾ ಅಥವಾ ಬಿ.ಇ/ಬಿ.ಟೆಕ್ ನಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ/ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.

TCS BPS Hiring: 2022ರಲ್ಲಿ ಪದವಿ ಪೂರೈಸುವವರನ್ನು ನೇಮಕ ಮಾಡಿಕೊಳ್ಳುತ್ತಿರುವ ಟಿಸಿಎಸ್

ಹೆಚ್‍ಎಎಲ್‍ ಅಪ್ರೆಂಟಿಶಿಪ್ ತರಬೇತಿ: ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಐಟಿಐ (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮನ್, ಎಲೆಕ್ಟ್ರೀಷಿಯನ್) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿಯನ್ನು ದಾವಣಗೆರೆಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪಡೆದುಕೊಂಡು, ಭರ್ತಿ ಮಾಡಿ ಸಲ್ಲಿಕೆ ಮಾಡಲು ಡಿಸೆಂಬರ್ 27ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

UPSC Recruitment 2021: ಬಿಇ, ಬಿ.ಟೆಕ್​ ಆದವರಿಗೆ ಲೋಕ ಸೇವಾ ಆಯೋಗದಲ್ಲಿ ಉದ್ಯೋಗ

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬಿ-ಬ್ಲಾಕ್, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಅಪ್ರೆಂಟಿಶಿಪ್ ವೆಬ್‍ಸೈಟ್‍ನಲ್ಲಿ (apprenticeshipindia.org/candidate-registration ನೋಂದಾಯಿಸಿ, ಕಡ್ಡಾಯವಾಗಿ ನೋಂದಣಿ ಸಂಖ್ಯೆಯನ್ನು ತರಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-259446.

click me!