HAL Recruitment 2022: ಬೆಂಗಳೂರಿನಲ್ಲಿ ಪ್ರಿನ್ಸಿಪಾಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ HAL

By Suvarna News  |  First Published Jan 7, 2022, 10:18 PM IST

ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.   ಕಂಪನಿಯು ಖಾಲಿ ಇರುವ ಎರಡು ಪ್ರಿನ್ಸಿಪಾಲ್  ಹುದ್ದೆಗಳನ್ನು ಭರ್ತಿ ಮಾಡಲು ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಜನವರಿ 29, 2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.


ಬೆಂಗಳೂರು(ಜ.7): ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. (Hindustan Aeronautics Limited-HAL) ಕಂಪನಿಯು ಖಾಲಿ ಇರುವ ಎರಡು ಪ್ರಿನ್ಸಿಪಾಲ್  ಹುದ್ದೆಗಳನ್ನು ಭರ್ತಿ ಮಾಡಲು ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 29, 2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ ಭೇಟಿ ನೀಡಬಹುದು. ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಶೈಕ್ಷಣಿಕ ವಿದ್ಯಾರ್ಹತೆ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಪ್ರಿನ್ಸಿಪಾಲ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

Latest Videos

undefined

ಅನುಭವ: ಅಭ್ಯರ್ಥಿಗಳು ಕನಿಷ್ಠ 15 ವರ್ಷಗಳ ಬೋಧನಾ ಅನುಭವವನ್ನು ಹೊಂದಿರಬೇಕು. ಅದರಲ್ಲಿ 5 ವರ್ಷಗಳ PGT ಯಾಗಿ ಬೋಧನಾ ಅನುಭವ ಮತ್ತು 3 ವರ್ಷಗಳ ಆಡಳಿತಾತ್ಮಕ ಅನುಭವ ಇರಬೇಕು. ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಉಪ-ಪ್ರಾಂಶುಪಾಲರು / ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರಬೇಕು.

KSCA RECRUITMENT 2022: ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಪ್ರಿನ್ಸಿಪಾಲ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ವೇತನ ಮತ್ತು ಉದ್ಯೋಗದ ಸ್ಥಳ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಪ್ರಿನ್ಸಿಪಾಲ್​ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ 78,800 ರೂ ವೇತನ ನೀಡಲಾಗುತ್ತದೆ. ಮತ್ತು ಪ್ರಿನ್ಸಿಪಾಲ್​ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ: ಪ್ರಿನ್ಸಿಪಾಲ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು 40-50 ವರ್ಷದೊಳಗಿರಬೇಕು. ಪ್ರಿನ್ಸಿಪಾಲ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಡಿಮ್ಯಾಂಡ್​ ಡ್ರಾಫ್ಟ್​ ಮೂಲಕ ಪಾವತಿಸಬೇಕು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದ ವಿಳಾಸ:
ಕಾರ್ಯದರ್ಶಿ
HAL ಶಿಕ್ಷಣ ಸಮಿತಿ
C o. HAL ಸೌಲಭ್ಯಗಳ ನಿರ್ವಹಣಾ ವಿಭಾಗ
ವಿಮಾನಪುರ ಅಂಚೆ
ಬೆಂಗಳೂರು - 560017

NCDIR Recruitment 2022: ಭಾರತೀಯ ವೈದ್ಯ ಸಂಶೋಧನಾ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆ ನಗರಸಭೆಯಲ್ಲಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ:  ಬಾಗಲಕೋಟೆ ನಗರಸಭೆಯು ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ (department of skill development entrepreneurship and livelihood) ದೀನದಯಾಳ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ (Community Resource Person) ಹುದ್ದೆಗೆ ಗೌರಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಒಟ್ಟು 2 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಬಾಗಲಕೋಟೆ (Bagalkote) ನಗರಸಭೆ ವ್ಯಾಪ್ತಿಯ ಸ್ವ-ಸಹಾಯ ಸಂಘದಲ್ಲಿ ಕನಿಷ್ಠ ಮೂರು ವರ್ಷದಿಂದ ಸದಸ್ಯರಾಗಿದ್ದು, ಪ್ರದೇಶ ಮಟ್ಟದ ಒಕ್ಕೂಟದ ಸದಸ್ಯರಾಗಿರುವವರು ಅರ್ಜಿ ಸಲ್ಲಿಸಬಹುದು. 18 ರಿಂದ 45 ವರ್ಷದೊಳಗಿರುವವರು ಅರ್ಜಿ ಸಲ್ಲಿಸುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ ನಗರಸಭೆ ಕಾರ್ಯಾಲಯ ಸಂಪರ್ಕಿಸಲು ಕೋರಲಾಗಿದೆ. ಆಯ್ಕೆಯಾದವರಿಗೆ ಮಾಸಿಕ ಗೌರಧನ 8 ಸಾವಿರ, ಟಿಎ ಗರಿಷ್ಟ 2 ಸಾವಿರ ನೀಡಲಾಗುತ್ತದೆ. 

click me!