HPSC Recruitment 2022: ಪದವೀಧರರಿಗೆ ಹರಿಯಾಣ ಲೋಕ ಸೇವಾ ಆಯೋಗದಲ್ಲಿ ಬಂಪರ್ ಉದ್ಯೋಗ

By Suvarna News  |  First Published Dec 30, 2021, 1:12 PM IST
  • ಖಾಲಿ ಇರುವ  ವಿವಿಧ ಹುದ್ದೆಗಳ ಭರ್ತಿಗೆ HPSC ಅರ್ಜಿ ಆಹ್ವಾನ
  • ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಗೆ ಅವಕಾಶ
  • ಅರ್ಜಿ ಸಲ್ಲಿಸಲು  ಜನವರಿ 13   ಕೊನೆಯ ದಿನ

ಬೆಂಗಳೂರು(ಡಿ.30): ಹರಿಯಾಣ ಲೋಕ ಸೇವಾ ಆಯೋಗ (Haryana Public Service Commission -HPSC) ಖಾಲಿ ಇರುವ  ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಫೋರ್​​ಮ್ಯಾನ್(Foreman), ಉಪನ್ಯಾಸಕ(Lecturer) ಹುದ್ದೆಗಳು ಖಾಲಿ ಇದ್ದು ಒಟ್ಟು  439 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದೆ.  ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು  ಜನವರಿ 13   ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್   hpsc.gov.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ: ಫೋರ್​​ಮ್ಯಾನ್, ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು.  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21-42 ವರ್ಷದೊಳಗಿರಬೇಕು.

Tap to resize

Latest Videos

undefined

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಫೋರ್​​ಮ್ಯಾನ್, ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ  44,900-1,42,400 ವೇತನ  ದೊರೆಯಲಿದೆ. ಮತ್ತು ಆಯ್ಕೆಯಾದ ಅಭ್ಯರ್ಥಿಗಳಿಗೆ ಹರಿಯಾಣದಲ್ಲಿ ಉದ್ಯೋಗ ನೀಡಲಾಗುತ್ತದೆ.

SBI RECRUITMENT 2022: ಮ್ಯಾನೇಜರ್ ಸೇರಿ ಹಲವು ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿವಿಧ ಹುದ್ದೆಗೆ ಡಿ.31ರಂದು ನೇರ ಸಂದರ್ಶನ: ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ (University of Agricultural Sciences Dharwad )ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಸಂಶೋಧನಾ ಸಹಾಯಕ (Research Associate), ಹಿರಿಯ ಸಂಶೋಧನಾ ಅಭ್ಯರ್ಥಿ(Senior Research Fellow) ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ (Graduate Assistant) ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://uasd.edu/ ಗೆ ಭೇಟಿ ನೀಡಿ. ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಡಿಸೆಂಬರ್ 31,2021ರಂದು  ನೇರ ಸಂದರ್ಶನ ನಡೆಯಲಿದೆ.

ವಯೋಮಿತಿ ಮತ್ತು ವೇತನ: ನೇರ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ  ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. ಸಂಶೋಧನಾ ಸಹಾಯಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 40,000/-ರೂ, ಹಿರಿಯ ಸಂಶೋಧನಾ ಅಭ್ಯರ್ಥಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 25,000/-ರೂ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ 14,000/-ರೂ ವೇತನವನ್ನು ನಿಗದಿಯಾಗಿದೆ.

Vijayapura Panchayat Recruitment 2022: ಪಂಚಾಯಿತ್ ಗ್ರಂಥಾಲಯದಲ್ಲಿ ಮೇಲ್ವಿಚಾರಕ

ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಂಶೋಧನಾ ಸಹಾಯಕ, ಹಿರಿಯ ಸಂಶೋಧನಾ ಅಭ್ಯರ್ಥಿ ಮತ್ತು ಗ್ರಾಜುಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆಯಿಂದ ಎಂ.ಎಸ್ಸಿ, ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಪಡೆದಿರಬೇಕು.

ಸಂದರ್ಶನದ ವಿವರ: ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಡಿಸೆಂಬರ್ 31,2021ರಂದು ಬೆಳಿಗ್ಗೆ 10:30 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನಕ್ಕೆ ಪಾಲ್ಗೊಳ್ಳಲು ಈ ಕೆಳಗಿನ ವಿಳಾಸದಲ್ಲಿ ಇರತಕ್ಕದ್ದು,
Office Of The Association,
Director of Research (HQ),
Krishinagar,
Dharwad -580 005,
Karnataka.
 

click me!