Job Vacancy: ಎಚ್‌ಪಿಸಿಎಲ್‌ನಲ್ಲಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

By Suvarna NewsFirst Published Nov 26, 2021, 5:22 PM IST
Highlights

ದೇಶದ ಪ್ರಮುಖ ಕಂಪನಿಯಾಗಿರುವ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (Hindustan petroleum Corporation Limited- HPCL) ಕಂಪನಿಯು ಗ್ರಾಜುಯೆಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಎಂಜಿನಿಯರಿಂಗ್ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (Hindustan petroleum Corporation Limited- HPCL)  ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಈಗಾಗಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಮೇಲೆ ಆಯ್ಕೆ ಕ್ರಿಯೆಯು ಡಿಸೆಂಬರ್ 06 ರಂದು ಕೊನೆಗೊಳ್ಳುತ್ತದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆ ಪರಿಶೀಲಿಸಬಹುದು. ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶೇ.60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್, ಇನ್‌ಸ್ಟ್ರುಮೆಂಟೇಶನ್, ಕಂಪ್ಯೂಟರ್ ಸೈನ್ಸ್ (ಐಟಿ) ನಲ್ಲಿ  ಇಂಜಿನಿಯರಿಂಗ್ ಪದವಿ ಪೂರೈಸಿರಬೇಕು.   ಅಭ್ಯರ್ಥಿಗಳು ನವೆಂಬರ್ 22, 2021ಕ್ಕೆ ಅನ್ವಯವಾಗುವಂತೆ ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿ ಒಳಗಿನವರಾಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ. 

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರ ಮತ್ತು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ.  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ಸ್ಟೈಫೆಂಡ್ ನೀಡಲಾಗುವುದು. ದೇಶದ ಪ್ರಮುಖ ಕಂಪನಿಯಾಗಿರುವ ಎಚ್‌ಪಿಸಿಎಲ್‌ನಲ್ಲಿ ಈಗ ಅಪ್ರೆಂಟಿಸ್ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅ ಭ್ಯರ್ಥಿಗಳು ಶೇ.60 ಅಂಕಗಳೊಂದಿಗೆ ಎಂಜಿನಿಯರಿಂಗ್ ಪದವಿ ಪಡೆದುಕೊಂಡಿರಬೇಕು.

ECIL Recruitment: ತಾಂತ್ರಿಕ ಅಧಿಕಾರಿಗಳ ನೇಮಕ್ಕೆ ಅರ್ಜಿ ಆಹ್ವಾನ

ದೇಶಾದ್ಯಂತ ಯಾವುದೇ ನಗರ, ಶಾಖೆಯಲ್ಲಿ ಫುಲ್ ಟೈಮ್ ಆಧಾರದ ಮೇಲೆ ಕೆಲಸ ಮಾಡಲು ಅಭ್ಯರ್ಥಿಗಳು ಸಿದ್ಧರಿರಬೇಕು. ಆಯ್ಕೆಯಾದ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಕೆಲಸದಲ್ಲಿ ತೊಡಗಿಸಿಕೊಳ್ಳಲಾಗುತ್ತದೆ. ಆಯ್ಕೆಯಾದರೆ, ಪದವೀಧರ ಟ್ರೈನಿ ಅಪ್ರೆಂಟಿಸ್‌ಗಳು ಒಂದು ವರ್ಷದ ಅವಧಿಗೆ ಮಾಸಿಕ ರೂ 25,000 ಸ್ಟೈಫಂಡ್  ಪಡೆಯುತ್ತಾರೆ. ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಕೆಲಸದ ಅನುಭವ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಂತಿಲ್ಲ.

ಅಂತಿಮವಾಗಿ ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟೆಡ್ (HPCL) ಮಾನದಂಡಗಳ ಪ್ರಕಾರ, ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಅದಕ್ಕೂ ಮೊದಲು  ಅಭ್ಯರ್ಥಿಗಳು ಎಲ್ಲಾ ದಾಖಲೆಗಳು/ಪ್ರಮಾಣಪತ್ರಗಳನ್ನು ಸಲ್ಲಿಸಬೇಕಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಬವಾಗಿದ್ದು, ಡಿಸೆಂಬರ್ 6 ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನವಾಗಿದೆ. ಹಾಗಾಗಿ, ಅಭರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಂಪನಿಯ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

ಹಿಂದೂಸ್ಥಾನ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ (ಇಂಜಿನಿಯರಿಂಗ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http:/portal.mhrdnats.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಡಿಸೆಂಬರ್ 6 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಬಳಿಕ ಜನವರಿ ೨೦೨೨ರೊಳಗೆ ಸಂದರ್ಶನ ನಡೆಸುವ ಸಾಧ್ಯತೆಯಿದೆ.

Wipro Recruitment: ಎಂಜಿನಿಯರ್ ಪದವೀಧರರಿಗೆ ಉದ್ಯೋಗಾವಕಾಶ

click me!