ವಿವಿಧ ಹುದ್ದೆ ನೇಮಕಾತಿಗೆ ಹೆವಿ ವಾಟರ್ ಬೋರ್ಡ್‌ ಅರ್ಜಿ ಆಹ್ವಾನ

By Suvarna News  |  First Published Jan 13, 2020, 3:21 PM IST

ಹೆವಿ ವಾಟರ್ ಬೋರ್ಡ್‌ನಲ್ಲಿ ಭಾರತದೆಲ್ಲೆಡೆ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.


ಬೆಂಗಳೂರು, (ಜ.13): ಹೆವಿ ವಾಟರ್ ಬೋರ್ಡ್(HWD)ನಲ್ಲಿ ಖಾಲಿ ಇರುವ 277 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಟೆಕ್ನಿಕಲ್ ಆಫೀಸರ್,  ನರ್ಸ್, ಸೈಂಟಿಫಿಕ್ ಅಸಿಸ್ಟೆಂಟ್, ಟೆಕ್ನಿಷಿಯನ್ ಸೇರಿದಂತೆ ಒಟ್ಟು 277 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ: 31.01. 2020ರೊಳಗೆ ಅರ್ಜಿ ಸಲ್ಲಿಸಬಹದು.

Tap to resize

Latest Videos

undefined

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ SSLC, HSC. ITI,ಡಿಪ್ಲೋಮಾ, ಇಂಜಿನಿಯರಿಂಗ್, ಪದವಿ ಪೂರ್ಣಗೊಳಿಸರಬೇಕು.

ವಯೋಮಿತಿ: ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಕರ್ಣಾಟಕ ಬ್ಯಾಂಕ್‌ನಲ್ಲಿ ನೇಮಕಾತಿ: ಅರ್ಜಿ ಹಾಕಿ

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂ. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಅಂಗವಿಕಲ,ಮಾಜಿ ಸೈನಿಕ ಅಥವಾ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ. 

3553 ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕ:
ಆನ್ ಲೈನಲ್ಲಿ ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 11-01-2020
ಆನ್ ಲೈನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31-01-2020

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಈ  ಬಗ್ಗೆ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!