IFFCO Recruitment 2022: ಇಫ್ಕೊನಲ್ಲಿ ಬಿಸಿಎ ಪಾಸಾದವರಿಗೆ ಉದ್ಯೋಗವಕಾಶ

By Suvarna News  |  First Published Jan 21, 2022, 2:24 PM IST

ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮದಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಜನವರಿ 31 ಅರ್ಜಿ ಸಲದಲಿಸಲು ಕೊನೆಯ ದಿನವಾಗಿದೆ.


ಬೆಂಗಳೂರು(ಜ.21): ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ - ಇಫ್ಕೊ (Indian Farmers Fertiliser Cooperative Limited -IFFCO) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಹಲವು ಟ್ರೇನಿ ಹುದ್ದೆಗಳು (Trainee Posts) ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜನವರಿ 31ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್​​  iffco.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ಅರ್ಹತೆ: ಇಫ್ಕೊನಲ್ಲಿ ಖಾಲಿ ಇರುವ ಟ್ರೇನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಸಿಎ ಓದಿರಬೇಕು.

Latest Videos

undefined

ವಯೋಮಿತಿ: ಇಫ್ಕೊನಲ್ಲಿ ಖಾಲಿ ಇರುವ ಟ್ರೇನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2022ಕ್ಕೆ 30 ವರ್ಷ ಮೀರಿರಬಾರದು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

Central Railway Apprentice Recruitment 2022: 2422 ಅಪ್ರೆಂಟಿಸ್ ಹುದ್ದೆ

ಅರ್ಜಿ ಶುಲ್ಕ ಮತ್ತು ವೇತನ: ಇಫ್ಕೊನಲ್ಲಿ ಖಾಲಿ ಇರುವ ಟ್ರೇನಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಆಯ್ಕೆಯಾದ ಅಭ್ಯರ್ಥಿಗಳಿಗೆ  ಮಾಸಿಕ  ₹28,400 ವೇತನ ನಿಗದಿಯಾಗಿದೆ.

ಆಯ್ಕೆ ಪ್ರಕ್ರಿಯೆ: ಆನ್​ಲೈನ್​ ಪರೀಕ್ಷೆ, ಸಂದರ್ಶನ ಮತ್ತು ಮೆಡಿಕಲ್ ಚೆಕ್-ಅಪ್ ಮೂಲಕ ಟ್ರೇನಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಉದ್ಯೋಗದ ಸ್ಥಳ:  ಇಫ್ಕೊನಲ್ಲಿ ಖಾಲಿ ಇರುವ ಟ್ರೇನಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ದೊರೆಯಲಿದೆ.

HCL Recruitment 2022: ಈ ತ್ರೈಮಾಸಿಕ ವರ್ಷದಲ್ಲಿ 22 ಸಾವಿರ ಫ್ರೆಶರ್‌ ಗಳ ನೇಮಕ

ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ, 1ಲಕ್ಷ ರೂ ವೇತನ: ರಸಗೊಬ್ಬರ ಮತ್ತು  ರಾಸಾಯನಿಕ ಟ್ರಾವಂಕೂರ್ ಲಿಮಿಟೆಡ್ (Fertilizers and Chemicals Travancore Limited) ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಡೈರೆಕ್ಟರ್ (Director) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್​/ ಆಫ್‌ಲೈನ್ ಎರಡು ಪ್ರಕಾರದ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್‌ 17 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ fact.co.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:  ರಸಗೊಬ್ಬರ ಮತ್ತು ರಾಸಾಯನಿಕ ಟ್ರಾವಂಕೂರ್ (Travancore) ಲಿಮಿಟೆಡ್ ನಲ್ಲಿರುವ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​​ನಿಂದ ಕಡ್ಡಾಯವಾಗಿ ಎಂಜಿನಿಯರಿಂಗ್ (Engineering ), ಎಂಬಿಎ (MBA), ಸ್ನಾತಕೋತ್ತರ ಪದವಿ (Post Graduate) ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ: ರಸಗೊಬ್ಬರ ಮತ್ತು ರಾಸಾಯನಿಕ ಟ್ರಾವಂಕೂರ್ ಲಿಮಿಟೆಡ್ ನಲ್ಲಿರುವ ಡೈರೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  fact.co.in ಗೆ ಭೇಟಿ ನೀಡಿ ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲವಾದರೆ ಆಫ್​ಲೈನ್ (Offline)​ ಮೂಲಕ ಅರ್ಜಿ ಸಲ್ಲಿಸಬಹುದು. ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವಿಳಾಸ 
ಶ್ರೀಮತಿ ಕಿಂಬುವಾಂಗ್ ಕಿಪ್ಜೆನ್ ಕಾರ್ಯದರ್ಶಿ
ಸಾರ್ವಜನಿಕ ಉದ್ಯಮಗಳ ಆಯ್ಕೆ ಮಂಡಳಿ
ಸಾರ್ವಜನಿಕ ಉದ್ಯಮಗಳ ಭವನ
ಬ್ಲಾಕ್ ಸಂಖ್ಯೆ 14
CGO ಕಾಂಪ್ಲೆಕ್ಸ್
ಲೋಧಿ ರಸ್ತೆ
ನವದೆಹಲಿ - 110003

Smt Kimbuong Kipgen
Secretary
Public Enterprises Selection Board
Public Enterprises Bhawan
BlockNo. 14
CGO Complex
Lodhi Road
New Delhi-110003.

click me!