IIIT Bengaluru Recruitment 2022: ಲ್ಯಾಬ್ ಇನ್‌ ಚಾರ್ಜ್ ಹುದ್ದೆಗೆ ಅರ್ಜಿ ಆಹ್ವಾನ

By Suvarna News  |  First Published Jan 5, 2022, 8:57 PM IST

ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರಿನಲ್ಲಿ ಲ್ಯಾಬ್-ಇನ್‌-ಚಾರ್ಜ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಜನವರಿ 31,2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಬೆಂಗಳೂರು: ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (International Institute of Information Technology-IIIT) ಬೆಂಗಳೂರಿನಲ್ಲಿ ಲ್ಯಾಬ್ ಇನ್‌ ಚಾರ್ಜ್ (Lab Incharge) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ opportunities@iiitb.ac.in ವಿಳಾಸಕ್ಕೆ ಈಮೇಲ್ ಮಾಡುವ ಮೂಲಕ ಜನವರಿ 31,2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ https://www.iiitb.ac.in/ ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರು  ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಎಲೆಕ್ಟ್ರಾನಿಕ್‌ ನಲ್ಲಿ ಬಿಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

Latest Videos

undefined

ವಯೋಮಿತಿ : ಐಐಐಟಿ (IIIT) ಬೆಂಗಳೂರಿನ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಆಯ್ಕೆ ಪ್ರಕ್ರಿಯೆ: ಐಐಐಟಿ ಬೆಂಗಳೂರಿನ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

CNP Recruitment 2022: ನೋಟು ಮುದ್ರಣಾಲಯದಲ್ಲಿ 1 ಲಕ್ಷದವರೆಗೆ ವೇತನ

ವೇತನ: ಐಐಐಟಿ ಬೆಂಗಳೂರಿನ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನ ನಿಗದಿಯಾಗಿದೆ.

ಅರ್ಜಿ ಶುಲ್ಕ: ಐಐಐಟಿ ಬೆಂಗಳೂರಿನ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ  ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

ಅರ್ಜಿ ಸಲ್ಲಿಕೆ : ಐಐಐಟಿ ಬೆಂಗಳೂರಿನ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.iiitb.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆ ಓದಿಕೊಂಡು ನಂತರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ opportunities@iiitb.ac.in ವಿಳಾಸಕ್ಕೆ ಈ ಮೇಲ್ ಮಾಡುವ ಮೂಲಕ ಜನವರಿ 31,2022ರೊಳಗೆ ಅರ್ಜಿಯನ್ನು ಕಳುಹಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಧಿಸೂಚನೆಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ https://www.iiitb.ac.in/staff-openings

NIMHANS Recruitment 2022: ಸೀನಿಯರ್ ರೆಸಿಡೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ನಿಮ್ಹಾನ್ಸ್

CVRDE ವಿಭಾಗದಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಅರ್ಜಿ ಆಹ್ವಾನಿಸಿದ DRDO: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation-DRDO) - ಯುದ್ಧ ವಾಹನಗಳ ಸಂಶೋಧನೆ ಮತ್ತು ಅಭಿವೃದ್ಧಿ ಸ್ಥಾಪನೆ (Combat Vehicles Research & Development Establishment-CVRDE) ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ.  ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಈ ಜಾಹೀರಾತನ್ನು ಪ್ರಕಟಿಸಿದ ದಿನಾಂಕದಿಂದ 30 ದಿನಗಳ ಒಳಗೆ (ಜನವರಿ 27, 2022) ಒಳಗೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ನಿಗದಿತ ನಮೂನೆಯ ಮೂಲಕ ಕಳುಹಿಸಬಹುದು. ಹೆಚ್ಚಿನ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rac.gov.in ಭೇಟಿ ನೀಡಬಹುದು.  ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

click me!