ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ಖಾಲಿ ಇರುವ 1 ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನವಾಗಿದೆ.
ಬೆಂಗಳೂರು(ಜ.23): ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science)ಬೆಂಗಳೂರಿನಲ್ಲಿ ಖಾಲಿ ಇರುವ 1 ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ (Project Engineer and Estate Officer) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಜನವರಿ 13ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್ಸೈಟ್ www.iisc.ac.in ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ 15 ವರ್ಷ ಅನುಭವ ಹೊಂದಿರಬೇಕು.
undefined
ವಯೋಮಿತಿ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 4, 2022ಕ್ಕೆ 55 ವರ್ಷ ಮೀರಿರಬಾರದು.
UPSC Recruitment 2022: ಸಹಾಯಕ ಪ್ರಾಧ್ಯಾಪಕ ಸೇರಿ 14 ಹುದ್ದೆಗಳ ನೇಮಕಕ್ಕೆ ಯುಪಿಎಸ್‌ಸಿ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,23,100 ರಿಂದ 2,15,900 ರೂ ವೇತನ ಸಿಗಲಿದೆ.
BMRCL Recruitment 2022: ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಭಾರತೀಯ ರೈಲ್ವೆ ಹಣಕಾಸು ನಿಗಮ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಿಂದಿ ಅನುವಾದಕ, ಅಸಿಸ್ಟೆಂಟ್(ಫೈನಾನ್ಸ್), ಅಸಿಸ್ಟೆಂಟ್ (ಅಡ್ಮಿನಿಸ್ಟ್ರೇಷನ್) ಸೇರಿ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 28 ಆಗಿದೆ. ಈಶಾನ್ಯ, ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಲಕ್ಷದ್ವೀಪದ ಅಭ್ಯರ್ಥಿಗಳಿಗೆ ಫೆಬ್ರವರಿ 1 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ವಿದ್ಯಾರ್ಹತೆ:ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ನಿಂದ ಕಡ್ಡಾಯವಾಗಿ ಇಂಗ್ಲಿಷ್ ಜೊತೆಗೆ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಖಾಲಿ ಇರುವ ಎರಡು ಸಹಾಯಕ (ಫೈನಾನ್ಸ್) ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
ಸಹಾಯಕ (ಅಡ್ಮಿನಿಸ್ಟ್ರೇಷನ್): ಯಾವುದೇ ವಿಷಯದಲ್ಲಿ ಶೇ.55ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ: ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರು ನವದೆಹಲಿಯಲ್ಲಿ ಕೆಲಸ ಮಾಡಬೇಕಾಗುತ್ತದೆ.