IISC Recruitment 2022: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Feb 9, 2022, 6:21 PM IST

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ  ತಾಂತ್ರಿಕ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿದೆ.


ಬೆಂಗಳೂರು(ಫೆ.9): ಭಾರತೀಯ ವಿಜ್ಞಾನ ಸಂಸ್ಥೆ (Indian Institute of Science) ಖಾಲಿ ಇರುವ 100 ತಾಂತ್ರಿಕ ಸಹಾಯಕ (Technical Assistant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜನವರಿ 13ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ ​(Online) ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿದೆ.  ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್​ಸೈಟ್​​ www.iisc.ac.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಬಿ.ಇ, ಬಿ.ಟೆಕ್, ಬಿ.ಆರ್ಕಿ, ಬಿ.ಎಸ್ಸಿ, ಬಿಸಿಎ, ಬಿ.ವಿಎಸ್ಸಿ ವಿದ್ಯಾರ್ಹತೆಯನ್ನು ಶೇ.55ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. 

Tap to resize

Latest Videos

undefined

ವಯೋಮಿತಿ: ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 28,2022ರ ಅನ್ವಯ ಗರಿಷ್ಟ 26 ವರ್ಷ ವಾಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

NMDC Recruitment 2022: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ: ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ತಾಂತ್ರಿಕ ಸಹಾಯಕ  ಹುದ್ದೆಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ಮೂಲಕ ಆಯ್ಕೆ   ಮಾಡಲಾಗುತ್ತದೆ.

ವೇತನ ವಿವರ: ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ತಾಂತ್ರಿಕ ಸಹಾಯಕ  ಹುದ್ದೆಗೆ  ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,700 ರೂ ವೇತನ ಸಿಗಲಿದೆ. 

ಅರ್ಜಿ ಶುಲ್ಕ : ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ತಾಂತ್ರಿಕ ಸಹಾಯಕ  ಹುದ್ದೆಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ, ಒಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಟ್ರಾನ್ಸ್‌ಜೆಂಡರ್ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.

ಅರ್ಜಿ ಸಲ್ಲಿಸುವ ವಿಧಾನ: ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ತಾಂತ್ರಿಕ ಸಹಾಯಕ  ಹುದ್ದೆಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ವೆಬ್‌ಸೈಟ್ https://iisc.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 28,2022ರೊಳಗೆ ಅರ್ಜಿ ಸಲ್ಲಿಸಬೇಕು.

IIIT BANGALORE RECRUITMENT 2022: ಸಂಶೋಧನಾ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಕಾರ್ಮಿಕ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗವಿದೆ: ರಾಜ್ಯ ನೌಕರರ ವಿಮಾ ನಿಗಮ (Employees State Insurance Corporation - ESIC) ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ನಿಗಮವು ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹೀಗೆ ಒಟ್ಟು 3865 ಹುದ್ದೆಗಳನ್ನು ಭರ್ತಿ ಮಾಡಲು ದೇಶದ ಹಲವು ರಾಜ್ಯಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲೂ ಅಪ್ಪರ್ ಡಿವಿಷನ್‌ ಕ್ಲರ್ಕ್ (Upper Divison Clerk)‌, ಸ್ಟೆನೋಗ್ರಾಫರ್ (Stenographer), ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (Multi Tasking Staff) ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್  http://www.esic.nic.in/ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.  ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಜನವರಿ 15, 2022 ರಿಂದ ಪ್ರಾರಂಭವಾಗಿ ಫೆಬ್ರವರಿ 15, 2022 ರಂದು ಕೊನೆಗೊಳ್ಳಲಿದೆ. ಕರ್ನಾಟಕದಲ್ಲಿ (Karnataka) ಅಪ್ಪರ್ ಡಿವಿಷನ್‌ ಕ್ಲರ್ಕ್  199 ಹುದ್ದೆ, ಸ್ಟೆನೋಗ್ರಾಫರ್ 18 ಹುದ್ದೆ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್‌  65 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

click me!