IISC Recruitment 2022 : ಸೌಲಭ್ಯ ನಿರ್ವಾಹಕ ಹುದ್ದೆಗೆ ನೇಮಕಾತಿ

Published : Mar 26, 2022, 10:47 AM IST
IISC Recruitment 2022 :  ಸೌಲಭ್ಯ ನಿರ್ವಾಹಕ ಹುದ್ದೆಗೆ ನೇಮಕಾತಿ

ಸಾರಾಂಶ

ಭಾರತೀಯ ವಿಜ್ಞಾನ ಸಂಸ್ಥೆ  ಖಾಲಿ ಇರುವ ವಿವಿಧ ಸೌಲಭ್ಯ ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.  ಏಪ್ರಿಲ್ 18 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.  

ಬೆಂಗಳೂರು(ಮಾ.26): ಭಾರತೀಯ ವಿಜ್ಞಾನ ಸಂಸ್ಥೆ (Indian Institute of Science -IISC) ಖಾಲಿ ಇರುವ  ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ವಿವಿಧ ಸೌಲಭ್ಯ ನಿರ್ವಾಹಕ ( Facility Manager) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 18ರ ಒಳಗೆ ಇ-ಮೇಲ್​ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ https://iisc.ac.in/ ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ  ಖಾಲಿ ಇರುವ ವಿವಿಧ ಸೌಲಭ್ಯ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಸಂಸ್ಥೆಯಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ BTech ಮಾಡಿರಬೇಕು. 

ಕೆಲಸದ ಅನುಭವ: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ  ಖಾಲಿ ಇರುವ ವಿವಿಧ ಸೌಲಭ್ಯ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 10 ವರ್ಷಗಳ ಅನುಭವದೊಂದಿಗೆ ಎಲೆಕ್ಟ್ರೋ-ಮೆಕ್ಯಾನಿಕಲ್ ಸಾಧನಗಳು, ಉಪಕರಣಗಳು, ದ್ಯುತಿವಿದ್ಯುಜ್ಜನಕ ಕ್ಷೇತ್ರ, ಲೇಸರ್ ಹೀಗೆ ಅತ್ಯಾಧುನಿಕ ತಂತ್ರಜ್ಞಾನಗಳ ಪರಿಣಿತಿ ಇರಬೇಕು.

KPSC RECRUITMENT 2022: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ನೇಮಕಾತಿ

ವಯೋಮಿತಿ: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ  ಖಾಲಿ ಇರುವ ವಿವಿಧ ಸೌಲಭ್ಯ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 60 ವರ್ಷದೊಳಗಿರಬೇಕು. ವರ್ಗಾನುಸಾರ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ  ಖಾಲಿ ಇರುವ ವಿವಿಧ ಸೌಲಭ್ಯ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ  ಖಾಲಿ ಇರುವ ವಿವಿಧ ಸೌಲಭ್ಯ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹100000 ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ  ಖಾಲಿ ಇರುವ ವಿವಿಧ ಸೌಲಭ್ಯ ನಿರ್ವಾಹಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿತ ಅರ್ಜಿ  ನಮೂನೆಯನ್ನು  ಭರ್ತಿ ಮಾಡಿ chair@iisc.ac.in  ಈ ಮೇಲ್ ವಿಳಾಸಕ್ಕೆ ಕಳುಹಿಸಿಬೇಕು. ಜೊತೆಗೆ  office.icer@iisc.ac.in ಗೆ  ಕೂಡ ಮೇಲ್‌ ಪ್ರತಿ ಕಳಿಸಿರಬೇಕು.
CSIR NAL RECRUITMENT 2022: ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ 

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ನೇಮಕಾತಿ: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.  ಒಟ್ಟು 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (Assistant Conservator of Forest) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್ 30 ರಿಂದ ಎಪ್ರಿಲ್ 16ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್  https://kpsc.kar.nic.in/ ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ  ಅರಣ್ಯಶಾಸ್ತ್ರದಲ್ಲಿ B.Sc ಪದವಿ ಮಾಡಿರಬೇಕು.

ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕಟಣೆ ಪ್ರಕಾರ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು.

PREV
Read more Articles on
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್