ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 18 ಕೊನೆಯ ದಿನವಾಗಿದೆ.
ಬೆಂಗಳೂರು(ಮಾ.6): ಆದಾಯ ತೆರಿಗೆ ಇಲಾಖೆಯಲ್ಲಿ (Income Tax Department) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮಲ್ಟಿ ಟಾಸ್ಕಿಂಗ್ ಸ್ಟಾಫ್, ಟ್ಯಾಕ್ಸ್ ಅಸಿಸ್ಟೆಂಟ್ ಸೇರಿ ಒಟ್ಟು 24 ವಿವಿಧ ಹುದ್ದೆಗಳು ಖಾಲಿ ಇದ್ದು , ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 18 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ https://incometaxindia.gov.in/ ಗೆ ಭೇಟಿ ನೀಡಲು ಕೋರಲಾಗಿದೆ.
ಒಟ್ಟು 24 ಹುದ್ದೆಗಳ ಮಾಹಿತಿ ಇಂತಿದೆ
ಆದಾಯ ತೆರಿಗೆ ಇನ್ಸ್ಪೆಕ್ಟರ್ (Income Tax Inspector)-01
ತೆರಿಗೆ ಸಹಾಯಕ (Tax Assistant) -05
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ (Multi-Tasking Staff) -18
ಶೈಕ್ಷಣಿಕ ಅರ್ಹತೆ: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು.
ಆದಾಯ ತೆರಿಗೆ ಇನ್ಸ್ಪೆಕ್ಟರ್ ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ
ತೆರಿಗೆ ಸಹಾಯಕ ಹುದ್ದೆಗೆ ಪದವಿ ವಿದ್ಯಾರ್ಹತೆ ಅಥವಾ ಅದಕ್ಕೆ ಸಮನಾದ ತತ್ಸಮಾನ. ಗಂಟೆಗೆ 8000 ಕೀ ಡೇಟಾ ಎಂಟ್ರಿ ವೇಗವನ್ನು ಹೊಂದಿರಬೇಕು.
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಹುದ್ದೆಗೆ 10 ನೇ ತರಗತಿ, ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪಾಸಾಗಿರಬೇಕು.
ವಯೋಮಿತಿ: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ.
ಆದಾಯ ತೆರಿಗೆ ಇನ್ಸ್ಪೆಕ್ಟರ್: 18-30 ವರ್ಷ
ತೆರಿಗೆ ಸಹಾಯಕ: 18-27 ವರ್ಷ
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ: 18-25 ವರ್ಷ
ಆಯ್ಕೆ ಪ್ರಕ್ರಿಯೆ: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟಿಂಗ್, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ವೇತನ ನಿಗದಿಪಡಿಸಲಾಗಿದೆ.
ಆದಾಯ ತೆರಿಗೆ ಇನ್ಸ್ಪೆಕ್ಟರ್: ₹ 34,800
ತೆರಿಗೆ ಸಹಾಯಕ: ₹ 20,200
ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ: ₹ 20,200
NWDA Recruitment 2022: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಇಂಜಿನಿಯರ್ ಹುದ್ದೆಗೆ ನೇಮಕಾತಿ
ಅರ್ಜಿ ಸಲ್ಲಿಸಬೇಕಾದ ವಿಳಾಸ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣದಿಂದ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆದಾಯ ತೆರಿಗೆಯ ಹೆಚ್ಚುವರಿ ಆಯುಕ್ತರು
ಮುಖ್ಯ ಕಚೇರಿ
ಮೊದಲ ಮಹಡಿ, ಕೊಠಡಿ ಸಂಖ್ಯೆ 14
ಆಯಕಾರ್ ಭವನ್, ಪಿ-7
ಚೌರಿಂಘೀ ಸ್ಕ್ವೇರ್
ಕೊಲ್ಕತ್ತಾ-700069
Additional Commissioner of Income Tax,
Headquarters (Personnel & Establishment),
1st Floor, Room No. 14, Aayakar Bhawan,
P-7, Chowringhee Square, Kolkata-700069.
SIDBI Recruitment 2022 : ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗ ನೇಮಕಾತಿ