ಭಾರತೀಯ ಸೇನೆಯಲ್ಲಿ ಕೆಲಸ ಮಾಡುವವರಿಗೆ ಸುವರ್ಣಾವಕಾಶ

Published : Feb 06, 2021, 03:12 PM ISTUpdated : Feb 06, 2021, 03:45 PM IST
ಭಾರತೀಯ ಸೇನೆಯಲ್ಲಿ ಕೆಲಸ ಮಾಡುವವರಿಗೆ ಸುವರ್ಣಾವಕಾಶ

ಸಾರಾಂಶ

ಭಾರತೀಯ ಸೇನಾ ನೇಮಕಾತಿ 2021 : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಎದುರು ನೋಡುತ್ತಿರುವವರಿಗೆ ಸುವರ್ಣಾವಕಾಶವಿದೆ.  ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ನವದೆಹಲಿ, (ಫೆ.06): ಭಾರತೀಯ ಸೇನೆಯ  ತಾಂತ್ರಿಕ ಪ್ರವೇಶ ಯೋಜನೆ (ಟಿಇಎಸ್)ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

 90 ಖಾಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಪ್ರಕ್ರಿಯೆಯು ಫೆಬ್ರವರಿ 1 ರಿಂದ ಪ್ರಾರಂಭವಾಗಿದೆ. ಇನ್ನು ಮಾರ್ಚ್ 2 ರ ವರೆಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಪಿಸಿಎಂ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ) ವಿಷಯಗಳೊಂದಿಗೆ  10 + 2 ಪರೀಕ್ಷೆಯಲ್ಲಿ (12ನೇ ತರಗತಿ) ಉತ್ತೀರ್ಣರಾದ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.

ನೇಮಕಾತಿ ಪ್ರಕ್ರಿಯೆಯ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳು ನಾಲ್ಕು ವರ್ಷಗಳ ಕಾಲ ಮಿಲಿಟರಿ ತರಬೇತಿಯ ಹಾಗೂ ತಾಂತ್ರಿಕ ತರಬೇತಿಯ ನಂತರ ಸೇನೆಗೆ ಸೇರಲಿದ್ದಾರೆ.

ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ ಸೈಟ್ : joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

PREV
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್