ಭಾರತೀಯ ಸೇನೆಯಲ್ಲಿ ಖಾಲಿ ಇರುವ 7 ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 11 ಕೊನೆಯ ದಿನವಾಗಿದೆ.
ಬೆಂಗಳೂರು(ಫೆ.26): ರಕ್ಷಣಾ ಸಚಿವಾಲಯದ (Ministry of Defence) ಅಡಿಯಲ್ಲಿ ಬರುವ ಭಾರತೀಯ ಸೇನೆಯಲ್ಲಿ (Indian Army) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 7 ಮಲ್ಟಿ ಟಾಸ್ಕಿಂಗ್ ಸ್ಟಾಫ್ (Multi Tasking Staff) ಸಫಾಯಿವಾಲ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಮಾರ್ಚ್ 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಭಾರತೀಯ ಸೇನೆಯ ಅಧಿಕೃತ ವೆಬ್ ತಾಣ joinindianarmy.nic.in ಗೆ ಭೇಟಿ ನೀಡಲು ಕೋರಲಾಗಿದೆ.
ವರ್ಗಾನುಸಾರ ಹುದ್ದೆಯ ಹಂಚಿಕೆ ವಿವರ ಹೀಗಿದೆ
ಸಾಮಾನ್ಯ ಅಭ್ಯರ್ಥಿಗಳು – 5 ಹುದ್ದೆಗಳು
OBC – 2 ಹುದ್ದೆಗಳು (ಒಂದು ಹುದ್ದೆ ಮಾಜಿ ಸೈನಿಕರಿಗೆ ಕಾಯ್ದಿರಿಸಲಾಗಿದೆ)
undefined
ಶೈಕ್ಷಣಿಕ ವಿದ್ಯಾಭ್ಯಾಸ: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸಫಾಯಿವಾಲ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ಅಥವಾ ಅದಕ್ಕೆ ಸಮಾನವಾದ ವಿದ್ಯಾಭ್ಯಾಸ ಮಾಡಿರಬೇಕು. ಮನೆ ಕೆಲಸದ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸಮರ್ಥರಾಗಿರಬೇಕು. ಅಲ್ಲದೆ, ಯಾವುದೇ ಸಿವಿಲ್ / ಸರಕಾರಿ ಕಚೇರಿಯಲ್ಲಿ ಆರು ತಿಂಗಳ ಕಾಲ ಕೆಲಸ ಮಾಡಿರುವ ಅನುಭವ ಹೊಂದಿರಬೇಕು.
ONGC RECRUITMENT 2022: ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ತೈಲ ಮತ್ತು ನೈಸರ್ಗಿಕ ಅನಿಲ ಕಂಪೆನಿ
ವಯೋಮಿತಿ: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸಫಾಯಿವಾಲ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 25 ವರ್ಷದೊಳಗಿನವರಾಗಿರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸಫಾಯಿವಾಲ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್ ,ಲಿಖಿತ ಪರೀಕ್ಷೆ, ಮೆಡಿಕಲ್ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸಫಾಯಿವಾಲ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 18000 ರೂ. ವೇತನ ದೊರೆಯಲಿದೆ.
BEL Recruitment 2022: ಬೆಂಗಳೂರಿನ BELನಲ್ಲಿ 360 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ವಿಧಾನ ಮತ್ತು ವಿಳಾಸ: ಭಾರತೀಯ ಸೇನೆಯಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಸಫಾಯಿವಾಲ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ವಯಸ್ಸು, ವಿದ್ಯಾರ್ಹತೆ, ಅನುಭವ, ವೃತ್ತಿ, ಜಾತಿ ಪ್ರಮಾಣಪತ್ರ, ವಾಸಸ್ಥಳ ಮತ್ತು ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಗೆಜೆಟೆಡ್ ಅಧಿಕಾರಿಯಿಂದ ದೃಢೀಕರಿಸಿದ ಪ್ರಮಾಣಪತ್ರ/ಪ್ರಮಾಣಪತ್ರದ ನಕಲು ಪ್ರತಿಗಳೊಂದಿಗೆ ಮಾರ್ಚ್ 11ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಬೇಕು.
HQ Mod (Army) Camp,
Rao Ram Marg,
NEW Delhi-110010
ನೌಕಾದಳದಲ್ಲಿ ಟ್ರೇಡ್ಸ್‌ಮ್ಯಾನ್ ಸ್ಕಿಲ್ಡ್ ಹುದ್ದೆಗೆ ಅರ್ಜಿ ಆಹ್ವಾನ: ಭಾರತೀಯ ನೌಕಾಸೇನೆಯಲ್ಲಿ (Indian Navy) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಲಾಗಿದೆ. ನೌಕಾಸೇನೆಯು ತನ್ನ ವಿವಿಧ ಪ್ರಧಾನ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣದಲ್ಲಿ ಖಾಲಿ ಇರುವ ಒಟ್ಟು 1531 ಟ್ರೇಡ್ಸ್‌ಮ್ಯಾನ್ ಸ್ಕಿಲ್ಡ್ (Tradesman Skilled) ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಫೆಬ್ರವರಿ 19ರಿಂದ ಮಾರ್ಚ್ 5ರೊಳಗೆ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್ಸೈಟ್ https://www.indiannavy.nic.in/ ಗೆ ಅಥವಾ https://www.joinindiannavy.gov.in/en ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ನೌಕಾಸೇನೆಯ ವಿವಿಧ ಪ್ರಧಾನ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣದಲ್ಲಿ ಖಾಲಿ ಇರುವ ಟ್ರೇಡ್ಸ್‌ಮ್ಯಾನ್ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ 10ನೇ ತರಗತಿ/ಐಟಿಐ ಉತ್ತೀರ್ಣರಾಗಿರಬೇಕು. ಅಥವಾ ಸಂಬಂಧಪಟ್ಟ ಟ್ರೇಡ್‌ನಲ್ಲಿ ಅಪ್ರೆಂಟಿಸ್ ತರಬೇತಿಯನ್ನು ಪೂರ್ಣಗೊಳಿಸಿರಬೇಕು.