Indian Coast Guard Recruitment 2022: ವಿವಿಧ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Feb 18, 2022, 12:37 PM IST

ಭಾರತೀಯ ಕರಾವಳಿ ಭದ್ರತಾಪಡೆ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಫೆಬ್ರವರಿ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 


ಬೆಂಗಳೂರು(ಫೆ.18): ಭಾರತೀಯ ಕರಾವಳಿ ಭದ್ರತಾಪಡೆ (Indian Coast Guard - ICG) ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಒಟ್ಟು  65  ಸಹಾಯಕ ಕಮಾಂಡೆಂಟ್ ಹುದ್ದೆಗಳು ಖಾಲಿ ಇದ್ದು, ತ್ವರಿತವಾಗಿ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು  ಅಧಿಸೂಚನೆ ಹೊರಡಿಸಿದೆ.   ಫೆಬ್ರವರಿ 18 ರಿಂದ  ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ joinindiancoastguard.gov.in ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 65 ಹುದ್ದೆಗಳ ಮಾಹಿತಿ ಇಂತಿದೆ:
ಜನರಲ್ ಡ್ಯೂಟಿ/ CPL: 50 ಹುದ್ದೆಗಳು
ಟೆಕ್ (ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್): 15 ಪೋಸ್ಟ್ಗಳು

Tap to resize

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡೆಂಟ್ (Assistant Commandant) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಗುಣವಾಗಿ ಗಣಿತ (Mathematics), ಭೌತಶಾಸ್ತ್ರ (Physics ), ಇಂಜಿನಿಯರಿಂಗ್ ನಲ್ಲಿ ನೇವಲ್ ಆರ್ಕಿಟೆಕ್ಚರ್ (Naval Architecture ), ಮೆಕ್ಯಾನಿಕಲ್ (Mechanical), ಮೆರಿನ್ (Marine), ಆಟೋಮೋಟಿವ್ (Automotive), ಲೋಹಶಾಸ್ತ್ರ (Mechatronics), ಏರೋಸ್ಪೇಸ್ (Aerospace) ಕಲಿತಿರಬೇಕು.

Land Surveyor Recruitment 2022: ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೊಮ್ಮೆ ದಿನಾಂಕ ವಿಸ್ತರಣೆ, 1 ದಿನವಷ್ಟೇ ಬಾಕಿ

ಆಯ್ಕೆ ಪ್ರಕ್ರಿಯೆ: ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಖಿಲ ಭಾರತ ಅರ್ಹತೆಯ ಆದೇಶವನ್ನು ಆಧರಿಸಿ, ಐದು ಹಂತಗಳಲ್ಲಿ ಪರೀಕ್ಷೆ ನಡೆಸಿ ಅಭ್ಯರ್ಥಿಯ ಕಾರ್ಯಕ್ಷಮತೆಯನ್ನು ಆಧರಿಸಿ ಅಭ್ಯರ್ಥಿಯ ಆಯ್ಕೆ ನಡೆಯಲಿದೆ. ಯಾವುದೇ ಅರ್ಜಿದಾರರು ನೇಮಕಾತಿಗೆ ಅರ್ಹರಾಗಲು I ರಿಂದ V ವರೆಗಿನ ಪರೀಕ್ಷೆಯ ಎಲ್ಲಾ ಹಂತಗಳಲ್ಲಿ ಅರ್ಹತೆ ಪಡೆ ಯುವುದು ಕಡ್ಡಾಯವಾಗಿದೆ.

ಆಸಕ್ತ ಅಭ್ಯರ್ಥಿಗಳು ಕೇವಲ ಒಂದು ಹುದ್ದೆಗೆ ಮಾತ್ರ ಅರ್ಜಿ ಸಲ್ಲಿಸಬಹುದು. ಕಂಪ್ಯೂಟರ್ ಆಧಾರಿತ ಪರೀಕ್ಷೆ (Computer based Test), ಚಿತ್ರ ಗ್ರಹಿಕೆ (Picture Perception) ಮತ್ತು ಚರ್ಚೆ ಪರೀಕ್ಷೆ (Discussion Test ) , ದಾಖಲೆ ಪರಿಶೀಲನೆ, ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಗಳು ಆಯ್ಕೆ ಪ್ರಕ್ರಿಯೆಯಲ್ಲಿ ಸೇರಿವೆ.

NHAI Recruitment 2022: ಇಂಜಿನಿಯರಿಂಗ್‌ ಪದವೀಧರರಿಗೆ ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗವಕಾಶ!

ಪರೀಕ್ಷಾ ಶುಲ್ಕಗಳು: ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 250 ರೂ ಪರಿಕ್ಷಾ ಶುಲ್ಕ ಪಾವತಿಸಬೇಕು. SC/ST ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕವೇ ಪಾವತಿಸಬೇಕಾಗಿದೆ.

ವಯೋಮಿತಿ: ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಜನರಲ್ ಡ್ಯೂಟಿ/ CPL ಹುದ್ದೆಗಾದರೆ ಜುಲೈ 1, 1998 ರಿಂದ ಜೂನ್‌ 30, 2004ರ ಒಳಗೆ ಜನಿಸಿರಬೇಕು. ಉಳಿದಂತೆ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವವರು ಜುಲೈ 1, 1998 ರಿಂದ ಜೂನ್‌ 30, 2002ರ ಒಳಗೆ ಜನಿಸಿರಬೇಕು ಎಂದು ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

DRDO DFRL Recruitment 2022: ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಲ್ಲಿ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

click me!