Indian Navy MR Recruitment 2022: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರರು ನೇಮಕಾತಿ

Published : Dec 09, 2022, 03:56 PM IST
Indian Navy MR Recruitment 2022: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರರು ನೇಮಕಾತಿ

ಸಾರಾಂಶ

ಭಾರತೀಯ ನೌಕಾಪಡೆಯ ಎಮ್‌ಆರ್ ನೇಮಕಾತಿ 2022 ರ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು  ಅರ್ಜಿ ಸಲ್ಲಿಸಲು ಡಿಸೆಂಬರ್ 17 ಕೊನೆಯ ದಿನವಾಗಿದೆ.

ಬೆಂಗಳೂರು (ಡಿ.9): ಭಾರತೀಯ ನೌಕಾಪಡೆಯ ಎಮ್‌ಆರ್ ನೇಮಕಾತಿ 2022 ರ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈಗ ನೀವು ನೌಕಾಪಡೆಯ ಎಮ್‌ಆರ್ ನೇಮಕಾತಿ 2022 ರ ಅಡಿಯಲ್ಲಿ ನಿಮ್ಮ ಆನ್‌ಲೈನ್ ಅರ್ಜಿಯನ್ನು ಸಲ್ಲಿಬಹುದು ವಯಸ್ಸಿನ ಮಿತಿ ಶೈಕ್ಷಣಿಕ ಅರ್ಹತೆ ಮತ್ತು ಎಲ್ಲಾ ಇತರ  ಎಲ್ಲಾ ಅಗತ್ಯ ಅರ್ಹತೆಗಳು ಮತ್ತು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ https://www.joinindiannavy.gov.in/ ಗೆ ಭೇಟಿ ನೀಡಬಹುದು. ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 17 ಕೊನೆಯ ದಿನವಾಗಿದೆ.

ಒಟ್ಟು ಹುದ್ದೆಗಳ ಮಾಹಿತಿ ಇಂತಿದೆ
ಮಹಿಳೆಯರಿಗೆ- 20 ಹುದ್ದೆಗಳು
ಪುರುಷರಿಗೆ- 80 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಅದರಂತೆ ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು ಅಥವಾ ಎಸ್​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 1, 2002 ಮತ್ತು ಅಕ್ಟೋಬರ್ 31, 2005 ರ ನಡುವೆ ಹುಟ್ಟಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಪರೀಕ್ಷಾ ಶುಲ್ಕ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಪರೀಕ್ಷಾ ಶುಲ್ಕವಾಗಿ ರೂ. 550 ಪಾವತಿಸಬೇಕಾಗುತ್ತದೆ. ಶುಲ್ಕವನ್ನು ಪಾವತಿಸಿದ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷಾ ಪ್ರವೇಶ ಕಾರ್ಡ್‌ಗಳು ದೊರೆಯುತ್ತದೆ.

BEL Recruitment 2022: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ

ಆಯ್ಕೆ ಪ್ರಕ್ರಿಯೆ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ ನಡೆಸಿ ಶಾರ್ಟ್‌ಲಿಸ್ಟಿಂಗ್ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ  ಮೂಲಕ ಆಯ್ಕೆ ಮಾಡಲಾಗುತ್ತದೆ.

SOUTHERN RAILWAY RECRUITMENT 2022: ವಿವಿಧ 21 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ದಕ್ಷಿಣ ರೈಲ್ವೆ

ವೇತನ ವಿವರ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರ ರೂ. ನೀಡಲಾಗುತ್ತದೆ. ಇದರ ಜೊತೆಗೆ ಭತ್ಯೆಗಳು ಕೂಡ ಇರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
 

PREV
click me!

Recommended Stories

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಹೈಕ್ ನಿರೀಕ್ಷೆ, ಜನವರಿ ಸಂಬಳದಲ್ಲೇ ಸಿಗುತ್ತಾ ಏರಿಕೆ ಸ್ಯಾಲರಿ ?
ಕನ್ನಡದಲ್ಲೂ ರೈಲ್ವೆ ಪರೀಕ್ಷೆ ನಡೆಸಲು ಪ್ರಧಾನಿ ಮೋದಿ ಅಸ್ತು: ಸೋಮಣ್ಣ