Indian Navy Recruitment 2021: ಪಿಯುಸಿ ಪಾಸಾದವರಿಗೆ ಭಾರತೀಯ ನೌಕಾಸೇನೆಯಲ್ಲಿ ಉದ್ಯೋಗ

By Suvarna News  |  First Published Dec 12, 2021, 10:57 AM IST
  • ಭಾರತೀಯ ನೌಕಾಸೇನೆಯಲ್ಲಿ ಖಾಲಿ ಇರುವ ನಾವಿಕ ಹುದ್ದೆಗೆ ಅರ್ಜಿ ಆಹ್ವಾನ
  • ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 25 ಕೊನೆ ದಿನ
  • ಕ್ರೀಡಾ ಕೋಟದಲ್ಲಿ ಚಾಂಪಿಯನ್ ಮಾಡಿದವರಿಗೆ ಆದ್ಯತೆ
     

ಬೆಂಗಳೂರು(ಡಿ.12): ಭಾರತೀಯ ನೌಕಾಸೇನೆಯಲ್ಲಿ (Indian Navy) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 
 ಪಿಯುಸಿ (PUC)ಪಾಸಾಗಿರುವವರು ಕ್ರೀಡಾ ಕೋಟದ ಮೇಲೆ ನಾವಿಕ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಡಿಸೆಂಬರ್ 11ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್​ಲೈನ್ (Offline)​ ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 25 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್​ಸೈಟ್ www.indiannavy.nic.in ಗೆ ಭೇಟಿ ನೀಡಲು ಕೋರಲಾಗಿದೆ.

ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 21,700-43,100ರೂ ವೇತನ ನೀಡಲಾಗುತ್ತದೆ. 

Tap to resize

Latest Videos

undefined

ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪಿಯುಸಿ ಪಾಸಾಗಿರಬೇಕು. ಜೊತೆಗೆ ರಾಷ್ಟ್ರೀಯ/ ರಾಜ್ಯ/ ಅಖಿಲ ಭಾರತ ವಿಶ್ವವಿದ್ಯಾಲಯದ ಹಂತದಲ್ಲಿ ಕ್ರೀಡಾ ಕ್ಷೇತ್ರದಲ್ಲಿ  ಚಾಂಪಿಯನ್​​ಶಿಪ್​ ಮಾಡಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 17 ರಿಂದ 22 ವರ್ಷದೊಳಗಿರಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ನೀಡಲಾಗುತ್ತದೆ. 

ISEC Recruitment: ಬೆಂಗಳೂರಿನ ISEC ಸಂಸ್ಥೆಯಲ್ಲಿ ಸರಕಾರಿ ಉದ್ಯೋಗಕ್ಕೆ ಅರ್ಹರಿಂದ ಅರ್ಜಿ

ಆಯ್ಕೆ ಪ್ರಕ್ರಿಯೆ: ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ನಾವಿಕ ಹುದ್ದೆಗಳಿಗೆ ಶಾರ್ಟ್​​ಲಿಸ್ಟಿಂಗ್, ಮೆಡಿಕಲ್ ಪರೀಕ್ಷೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ, 
"ಕಾರ್ಯದರ್ಶಿಗಳು
ಭಾರತೀಯ ನೌಕಾದಳ ಸ್ಪೋರ್ಟ್ಸ್​ ಕಂಟ್ರೋಲ್​ ಬೋರ್ಡ್​
ಇಂಟಿಗ್ರೇಟೆಡ್​ ಹೆಡ್​​ಕ್ವಾರ್ಟರ್ಸ್​​ ಆಫ್​ ಮಿನಿಸ್ಟ್ರಿ ಆಫ್​ ಡಿಫೆನ್ಸ್​
7ನೇ ಮಹಡಿ, ಚಾಣಕ್ಯ ಭವನ
ನವದೆಹಲಿ-110021"
ಈ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ.

Railway Recruitment: ದಕ್ಷಿಣ ಮಧ್ಯ ರೈಲ್ವೆ ಮತ್ತು ಸೆಂಟ್ರಲ್ ರೈಲ್ವೆಯಲ್ಲಿ ಖಾಲಿ ಇರುವ

BSF ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ: ಗಡಿ ಭದ್ರತಾ ಪಡೆ (Border Security Force) ಖಾಲಿ ಇರುವ ವಿವಿಧ ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತಿ ಹೊಂದಿರುವವರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಭಾರತೀಯ ನಾಗರಿಕರ ನೇಮಕಾತಿಗಾಗಿ ಬಿಎಸ್ಎಫ್ ಈಗಾಗಲೇ ಅಧಿಸೂಚನೆಯನ್ನು ಹೊರಡಿಸಿದೆ. BSF ಗ್ರೂಪ್-'ಸಿ' ಕಾಂಬಟೈಸ್ಡ್ (ನಾನ್ ಗೆಜೆಟೆಡ್-ನಾನ್ ಮಿನಿಸ್ಟ್ರಿಯಲ್)ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಗಡಿ ಭದ್ರತಾ ಪಡೆ ಎಂಜಿನಿಯರಿಂಗ್ ಸೆಟಪ್‌ನಲ್ಲಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 29ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಆಸಕ್ತ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್- rectt.bsf.gov.in ನಲ್ಲಿ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಅರ್ಜಿ ಸಲ್ಲಿಸಲು  ಡಿಸೆಂಬರ್ 29ರವರೆಗೆ ಕಾಲಾವಕಾಶವಿದೆ. ಒಟ್ಟು 72 ಹುದ್ದೆಗಳನ್ನು ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ. ಹೆಚ್ಚಿನ ನವೀಕರಣಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪರಿಶೀಲಿಸಬಹುದು. ಎಎಸ್ಐ (ASI) - 01 ಹುದ್ದೆ, HC (Carpenter, Sewerman) - 06 ಹುದ್ದೆಗಳು, ಕಾನ್ಸ್ಟೇಬಲ್ (Generator Operator, Generator Mechanic, Linemen) - 65 ಹುದ್ದೆಗಳು ಸೇರಿ ಒಟ್ಟು 72 ಹುದ್ದೆಗಳನ್ನ ಈ ನೇಮಕಾತಿ ಡ್ರೈವ್ನಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. 

ಬಿಎಸ್ಎಫ್ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 29, 2021ಕ್ಕೆ ಅನ್ವಯವಾಗುವಂತೆ 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು. ಇನ್ನುಎಸ್ಎಸ್ಐ (ASI) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕೈಗಾರಿಕಾ ತರಬೇತಿ ಸಂಸ್ಥೆಯಿಂದ (ITI) ಡ್ರಾಫ್ಟ್ಸ್‌ಮನ್‌ಶಿಪ್ (ಸಿವಿಲ್) ನಲ್ಲಿ ಡಿಪ್ಲೊಮಾ ಪದವಿ ಜೊತೆಗೆ ಮೆಟ್ರಿಕ್ಯುಲೇಷನ್ ಪಡೆದಿರಬೇಕು. ಎಚ್‌ಸಿ ಮತ್ತು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಜೊತೆಗೆ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು. 

click me!