IOCL Recruitment 2021: 300 ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ ಇಂಡಿಯನ್ ಆಯಿಲ್

By Suvarna News  |  First Published Dec 10, 2021, 8:03 PM IST
  • IOCL ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
  • ಒಟ್ಟು 300 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ
  • ಡಿಸೆಂಬರ್ 27 ಅರ್ಜಿ ಸಲ್ಲಿಸಲು ಕೊನೆಯ ದಿನ

ಬೆಂಗಳೂರು(ಡಿ.10): ಕೇಂದ್ರ ಸರ್ಕಾರ (Central Government) ದ ಸ್ವಾಮ್ಯದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (Indian Oil Corporation- IOCL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಐಒಸಿಎಲ್ (IOCL)  ನಲ್ಲಿ ಒಟ್ಟು 300 ಟ್ರೇಡ್​ ಅಪ್ರೆಂಟಿಸ್ (Trade Apprentice), ಟೆಕ್ನಿಷಿಯನ್ ಅಪ್ರೆಂಟಿಸ್ (Technician Apprentice) ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಐಟಿಐ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು,   ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡನ ಅಧಿಕೃತ ವೆಬ್ಸೈಟ್  www.icol.com ನಲ್ಲಿ ಡಿಸೆಂಬರ್ 10ರಿಂದ  ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 27 . ಹೆಚ್ಚಿನ ಮಾಹಿತಿಗಾಗಿ www.icol.com ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನಿಗದಿಯಾಗಿದೆ. ಟ್ರೇಡ್​ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-24 ವರ್ಷದೊಳಗಿರಬೇಕು.

Latest Videos

undefined

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರನ್ನು ಅಮರಾವತಿ, ಬೆಂಗಳೂರು, ಚೆನ್ನೈ, ಹೈದ್ರಾಬಾದ್​, ಪಾಂಡಿಚೇರಿ, ತಿರುವನಂತಪುರಂ ಗೆ ಪೋಸ್ಟಿಂಗ್ ಮಾಡಲಾಗುತ್ತದೆ.

Guest Teacher Recruitment: ತಾತ್ಕಾಲಿಕ ಅತಿಥಿ ಶಿಕ್ಷಕರ ನೇಮಕಾತಿ

ಎಸ್‌ಬಿಐನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ: ಭಾರತೀಯ ಸ್ಟೇಟ್ ಬ್ಯಾಂಕ್‌ ನಲ್ಲಿ (State Bank of India) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನಾಂಕವಾಗಿದೆ. ಒಟ್ಟು 1226 ಸರ್ಕಲ್ ಬೇಸ್ಡ್​ ಆಫೀಸರ್ (Circle Based Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಪದವೀಧರರು ಇದಕ್ಕೆ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಉದ್ಯೋಗ ಪಡೆಯಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗಾಗಿ ಎಸ್​ಬಿಐನ ಅಧಿಕೃತ ವೆಬ್​ಸೈಟ್​ sbi.co.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

WFH Employees: ಮನೆಯಿಂದ ಕೆಲಸ ಮಾಡುತ್ತಿರುವವರಿಗೆ ಗುಡ್ ನ್ಯೂಸ್

ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಬಗ್ಗೆ ಮಾಹಿತಿ ತಿಳಿಯುವುದು ಬಹುಮುಖ್ಯವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳ ವೇತನ  36,000 ರಿಂದ 63,840 ಇರಲಿದೆ. 

Indian Army: ಭಾರತೀಯ ಸೇನೆಯ 1 ಲಕ್ಷಕ್ಕೂ ಅಧಿಕ ಹುದ್ದೆಗಳು ಖಾಲಿ!

ಅರ್ಜಿ ಶುಲ್ಕ ಮತ್ತು ವಿದ್ಯಾರ್ಹತೆ: ಸಾಮಾನ್ಯ/ಒಬಿಸಿ/EWS- 750 ರೂ. ಅರ್ಜಿ ಶುಲ್ಕ ಇರಲಿದೆ. SC/ST/ PWD ಅವರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಸರ್ಕಲ್ ಬೇಸ್ಡ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.  ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು. ಆನ್​ಲೈನ್​ ಟೆಸ್ಟ್, ಸ್ಕ್ರೀನಿಂಗ್, ವೈಯಕ್ತಿಕ ಸಂದರ್ಶನದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ಕಡೆಗಳಲ್ಲಿ ಉದ್ಯೋಗ ಮಾಡಲು ತಯಾರಿರಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.

click me!