ಭಾರತೀಯ ರೈಲ್ವೆ ಇಲಾಖೆಯ ಭರ್ಜರಿ ಉದ್ಯೋಗ, ಬರೋಬ್ಬರಿ 22,000 ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

Published : Jan 22, 2026, 07:11 PM IST
Indian Railway

ಸಾರಾಂಶ

ಭಾರತೀಯ ರೈಲ್ವೆ ಇಲಾಖೆಯು ದೇಶಾದ್ಯಂತ 22,000 ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಅಥವಾ BE/B.Tech ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯು ಅಖಿಲ ಭಾರತ ಮಟ್ಟದಲ್ಲಿ ನಡೆಯಲಿದೆ.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಆಸಕ್ತರಾದ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ ಒದಗಿ ಬಂದಿದೆ. ಭಾರತೀಯ ರೈಲ್ವೆ ಇಲಾಖೆ ದೇಶವ್ಯಾಪಿಯಾಗಿ 22,000 ಸಹಾಯಕ (Assistant) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ ಪ್ರಕ್ರಿಯೆ ಅಖಿಲ ಭಾರತ ಮಟ್ಟದಲ್ಲಿ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ವೇತನ ಮತ್ತು ಸೌಲಭ್ಯಗಳು ಲಭ್ಯವಾಗಲಿವೆ.

ಹುದ್ದೆಗಳ ವಿವರ

ಹುದ್ದೆಯ ಹೆಸರು: ಸಹಾಯಕ (Assistant)

ಒಟ್ಟು ಹುದ್ದೆಗಳ ಸಂಖ್ಯೆ: 22,000

ಉದ್ಯೋಗ ಸ್ಥಳ: ಅಖಿಲ ಭಾರತ

ಅರ್ಜಿ ಸಲ್ಲಿಕೆ ದಿನಾಂಕಗಳು

ಅರ್ಜಿ ಪ್ರಾರಂಭ ದಿನಾಂಕ: 31-01-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-03-2026

ವಿದ್ಯಾರ್ಹತೆ

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ

ಯಾವುದೇ ಪದವಿ

ಅಥವಾ

BE / B.Tech ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ

01-01-2026ರಂತೆ ಅಭ್ಯರ್ಥಿಯ

ಕನಿಷ್ಠ ವಯಸ್ಸು: 18 ವರ್ಷ

ಗರಿಷ್ಠ ವಯಸ್ಸು: 33 ವರ್ಷ

(ಸರ್ಕಾರದ ನಿಯಮಾವಳಿಗಳ ಪ್ರಕಾರ ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗಲಿದೆ.)

ಅರ್ಜಿ ಶುಲ್ಕ

ಅಭ್ಯರ್ಥಿಗಳಿಗೆ ವಿಧಿಸಲಾಗುವ ಅರ್ಜಿ ಶುಲ್ಕವನ್ನು ಅಧಿಕೃತ ಅಧಿಸೂಚನೆಯಲ್ಲಿ ವಿವರಿಸಲಾಗಿದ್ದು, ವರ್ಗವಾರು ಶುಲ್ಕ ಅನ್ವಯವಾಗುತ್ತದೆ.

ವೇತನ ಶ್ರೇಣಿ

ಆಯ್ಕೆಯಾದ ಅಭ್ಯರ್ಥಿಗಳಿಗೆ

ಮಾಸಿಕ ವೇತನ: ₹18,000/-

ಇದರ ಜೊತೆಗೆ ಕೇಂದ್ರ ಸರ್ಕಾರದ ನಿಯಮಾನುಸಾರ ಇತರೆ ಭತ್ಯೆಗಳು ಲಭ್ಯವಿರುತ್ತವೆ.

ಆಯ್ಕೆ ವಿಧಾನ

ಅಭ್ಯರ್ಥಿಗಳ ಆಯ್ಕೆ ಕೆಳಗಿನ ಹಂತಗಳ ಮೂಲಕ ನಡೆಯಲಿದೆ:

ಲಿಖಿತ ಪರೀಕ್ಷೆ

ಸಂದರ್ಶನ

ಪ್ರತಿ ಹಂತದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನೇ ಮುಂದಿನ ಹಂತಕ್ಕೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಕೆಳಗಿನ ಕ್ರಮವನ್ನು ಅನುಸರಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು:

ಅಧಿಕೃತ ವೆಬ್‌ಸೈಟ್ https://indianrailways.gov.in/ ಗೆ ಭೇಟಿ ನೀಡಿ.

ನಿಮಗೆ ಸಂಬಂಧಿಸಿದ RRB ವಿಭಾಗವನ್ನು ಆಯ್ಕೆಮಾಡಿ.

ಸಹಾಯಕ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.

ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್‌ ತೆರೆಯಿರಿ.

ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.

ಶುಲ್ಕ ಪಾವತಿ ಮಾಡಿ. ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

PREV
Read more Articles on
click me!

Recommended Stories

ವೃತ್ತಿಜೀವನಕ್ಕೆ ಹೊಸ ತಿರುವು, ಪ್ರಸಾರ ಭಾರತಿಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿ, 50000 ರೂ ವರೆಗೆ ವೇತನ!
ದೇಶದ ನಂಬರ್ 1 ಶಿಕ್ಷಣ ಸಂಸ್ಥೆ IISc ನಲ್ಲಿ ಭದ್ರತಾ ಹುದ್ದೆ, SSLC ಪಾಸಾದವರಿಗೆ ಸುವರ್ಣಾವಕಾಶ!