IOCL Recruitment 2022: ತಂತ್ರಜ್ಞ  ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ

By Gowthami K  |  First Published Nov 6, 2022, 4:43 PM IST

ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಒಟ್ಟು 265 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್  12, ಕೊನೆಯ ದಿನವಾಗಿದೆ.


ಬೆಂಗಳೂರು (ನ.6): ಕೇಂದ್ರ ಸರ್ಕಾರ ಸ್ವಾಮ್ಯದಲ್ಲಿರುವ ಇಂಧನ ಸಂಸ್ಥೆಯಾದ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ಲಿಮಿಟೆಡ್‌ (ಐಒಸಿಎಲ್‌)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಆದೇಶವನ್ನು ಹೊರಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇಂಡಿಯನ್‌ ಆಯಿಲ್‌ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಕೂಡಲೆ ಅರ್ಜಿ ಸಲ್ಲಿಸುವಂತೆ ಸಂಸ್ಥೆಯು ತಿಳಿಸಿದ್ದು, ನೇಮಕಾತಿ ಮಾಹಿತಿಗಳಾದ ಆಯ್ಕೆ ಪ್ರಕ್ರಿಯೆ, ಬೇಕಾದ ದಾಖಲೆಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆ ಹೇಗೆ, ವಿದ್ಯಾರ್ಹತೆ ಹಾಗೂ ವಯೋಮಿತಿ ಮಾಹಿತಿಗಳನ್ನು ಮುಂದೆ ವಿವರಿಸಲಾಗಿದೆ.  ಈ ಬಾರಿ ಐಒಸಿಎಲ್‌ ತಂತ್ರಜ್ಞ  ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 265  ಹುದ್ದೆಗಳು ಭಾರತದಾದ್ಯಂತ ಲಭ್ಯವಿದೆ. IOCLನಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್  12, ಕೊನೆಯ ದಿನವಾಗಿದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ನ ಅಧಿಕೃತ ವೆಬ್‌ತಾಣ https://iocl.com/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. 

ಶೈಕ್ಷಣಿಕ ವಿದ್ಯಾರ್ಹತೆ: ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ   ತಂತ್ರಜ್ಞ  ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ 12ನೇ ತರಗತಿ, ಪದವಿ ಪಾಸಾಗಿರಬೇಕು. 

Tap to resize

Latest Videos

undefined

ವಯೋಮಿತಿ: ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ   ತಂತ್ರಜ್ಞ  ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 24 ವರ್ಷದ ಒಳಗಿನ ವಯೋಮಿತಿ ಹೊಂದಿರಬೇಕು.   SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ   ತಂತ್ರಜ್ಞ  ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ಮೆಡಿಕಲ್ ಟೆಸ್ಟ್ ಮೂಲಕ ಆಯ್ಕೆ ಮಾಡಲಾಗುತ್ತದೆ.

SAIL Recruitment 2022: ವಿವಿಧ 245 ಮ್ಯಾನೇಜ್ ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ

ಅರ್ಜಿ ಶುಲ್ಕ: ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ   ತಂತ್ರಜ್ಞ  ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ , ಓಬಿಸಿ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕ ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸುವಂತಿಲ್ಲ.

VSSC RECRUITMENT 2022: 194 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ವಾಕ್‌ ಇನ್ ಸಂದರ್ಶನ

ವೇತನ ವಿವರ: ಅಪ್ರೆಂಟಿಸ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಪಾವತಿಸಬೇಕಾದ ಸ್ಟೈಫಂಡ್ ದರವು ಅಪ್ರೆಂಟಿಸ್ ಕಾಯಿದೆ, 1961/1973/ ಅಪ್ರೆಂಟಿಸ್ ನಿಯಮಗಳು, 1992 (ತಿದ್ದುಪಡಿ ಮಾಡಿದಂತೆ) ಮತ್ತು ನಿಗಮದ ಮಾರ್ಗಸೂಚಿಗಳ ಅಡಿಯಲ್ಲಿ ನಿಗದಿಪಡಿಸಲಾಗಿದೆ.

click me!