IOCL Recruitment 2022: ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Published : Jan 29, 2022, 09:14 PM IST
IOCL Recruitment 2022: ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಾರಾಂಶ

ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 18 ಅಗಿದೆ.

ಬೆಂಗಳೂರು(ಜ.23): ಕೇಂದ್ರ ಸರ್ಕಾರದ (Central Government) ಸ್ವಾಮ್ಯದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (Indian Oil Corporation- IOCL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಐಒಸಿಎಲ್ (IOCL) ನಲ್ಲಿ ಒಟ್ಟು 137 ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್  ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 18,  ಹೆಚ್ಚಿನ ಮಾಹಿತಿಗಾಗಿ www.icol.com ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು  10ನೇ ತರಗತಿ/ಮೆಟ್ರಿಕ್ಯುಲೇಶನ್ ಜೊತೆಗೆ ಐಟಿಐ ; ಪದವಿ; ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ  ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕೌಶಲ್ಯ ಪರೀಕ್ಷೆ/ದೈಹಿಕ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.

RAMANAGARA ANGANWADI RECRUITMENT 2022: ರಾಮನಗರದಲ್ಲಿ 219 ಅಂಗನವಾಡಿ ಹುದ್ದೆಗಳು ಖಾಲಿ, ಇಂದೇ ಅರ್ಜಿ ಸಲ್ಲಿಸಿ

ವಯೋಮಿತಿ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಯಸ್ಸು 18 ರಿಂದ 26 ವರ್ಷದೊಳಗಿರಬೇಕು. SC/ ST/ OBC (NCL)/ PwBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25000/- ರಿಂದ Rs. 1,05,000/-ರೂಗಳ ವರೆಗೆ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23000/- ರಿಂದ 78,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಭಾರತೀಯ ತೈಲ ನಿಗಮ ನಿಯಮಿತ (IOCL) ನೇಮಕಾತಿಯ ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ: ಭಾರತೀಯ ತೈಲ ನಿಗಮ ನಿಯಮಿತ ನೇಮಕಾತಿಯ ನಾನ್ ಎಕ್ಸಿಕ್ಯುಟಿವ್ ಇಂಜಿನಿಯರಿಂಗ್ ಅಸಿಸ್ಟೆಂಟ್ ಮತ್ತು ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://iocl.com/latest-job-opening ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 24,2022 ರಿಂದ ಫೆಬ್ರವರಿ 18, 2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ: ಕೇಂದ್ರ ಸರ್ಕಾರದ (Central Government) ಸ್ವಾಮ್ಯದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (Indian Oil Corporation- IOCL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಐಒಸಿಎಲ್ (IOCL) ನಲ್ಲಿ ಒಟ್ಟು 626 ಟ್ರೇಡ್​ ಅಪ್ರೆಂಟಿಸ್ (Trade Apprentice), ಟೆಕ್ನಿಷಿಯನ್ (Technician) ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31. ಹೆಚ್ಚಿನ ಮಾಹಿತಿಗಾಗಿ www.icol.com ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ.ಇಲೆಕ್ಟ್ರಾನಿಕ್ಸ್‌, ಇನ್‌ಸ್ಟ್ರುಮೆಂಟ್‌, ಮೆಕ್ಯಾನಿಕ್‌, ಡಾಟಾ ಎಂಟ್ರಿ ಆಪರೇಟರ್‌, ಸಿವಿಲ್, ಫಿಟ್ಟರ್, ಇಲೆಕ್ಟ್ರಿಕ್ ಮತ್ತು ಇಲೆಕ್ಟ್ರಾನಿಕ್ಸ್‌ ವಿಭಾಗಗಳಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

PREV
Read more Articles on
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್