IOCL Recruitment 2022: ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

By Suvarna News  |  First Published Jan 23, 2022, 9:52 PM IST

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31.


ಬೆಂಗಳೂರು(ಜ.23): ಕೇಂದ್ರ ಸರ್ಕಾರದ (Central Government) ಸ್ವಾಮ್ಯದಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (Indian Oil Corporation- IOCL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುತ್ತಿದೆ. ಐಒಸಿಎಲ್ (IOCL) ನಲ್ಲಿ ಒಟ್ಟು 626 ಟ್ರೇಡ್​ ಅಪ್ರೆಂಟಿಸ್ (Trade Apprentice), ಟೆಕ್ನಿಷಿಯನ್ (Technician) ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 31. ಹೆಚ್ಚಿನ ಮಾಹಿತಿಗಾಗಿ www.icol.com ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ.

ಇಲೆಕ್ಟ್ರಾನಿಕ್ಸ್‌, ಇನ್‌ಸ್ಟ್ರುಮೆಂಟ್‌, ಮೆಕ್ಯಾನಿಕ್‌, ಡಾಟಾ ಎಂಟ್ರಿ ಆಪರೇಟರ್‌, ಸಿವಿಲ್, ಫಿಟ್ಟರ್, ಇಲೆಕ್ಟ್ರಿಕ್ ಮತ್ತು ಇಲೆಕ್ಟ್ರಾನಿಕ್ಸ್‌ ವಿಭಾಗಗಳಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

Tap to resize

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಹುದ್ದೆಗೆ ಸಂಬಂಧಿಸಿ ಕಲಿತಿರಬೇಕು.

BMRCL Recruitment 2022: ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಟ್ರೇಡ್‌ ಅಪ್ರೆಂಟಿಸ್  : ಸಂಬಂಧಿತ ವಿಷಯದಲ್ಲಿ ಐಟಿಐ ಪಾಸ್ ಆಗಿರಬೇಕು.
ಟೆಕ್ನೀಷಿಯನ್‌ ಅಪ್ರೆಂಟಿಸ್: ಡಿಪ್ಲೋಮಾ ಮಾಡಿರಬೇಕು.

ಆಯ್ಕೆ ಪ್ರಕ್ರಿಯೆ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 100 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಸಂದರ್ಶನ ನಡೆಸಿ, ಮೆರಿಟ್‌ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಯಸ್ಸು 18 ರಿಂದ 24 ವರ್ಷದೊಳಗಿರಬೇಕು. SC/ ST/ OBC (NCL)/ PwBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 10,000 ದಿಂದ 14,000 ರೂ ವೇತನ ಸಿಗಲಿದೆ. 

IISc Recruitment 2022: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಭಾರತೀಯ ರೈಲ್ವೆ ಹಣಕಾಸು ನಿಗಮ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಿಂದಿ ಅನುವಾದಕ, ಅಸಿಸ್ಟೆಂಟ್(ಫೈನಾನ್ಸ್​), ಅಸಿಸ್ಟೆಂಟ್ (ಅಡ್ಮಿನಿಸ್ಟ್ರೇಷನ್) ಸೇರಿ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 28 ಆಗಿದೆ.  ಈಶಾನ್ಯ, ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಲಕ್ಷದ್ವೀಪದ ಅಭ್ಯರ್ಥಿಗಳಿಗೆ ಫೆಬ್ರವರಿ 1 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ವಿದ್ಯಾರ್ಹತೆ:ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​ನಿಂದ ಕಡ್ಡಾಯವಾಗಿ ಇಂಗ್ಲಿಷ್​ ಜೊತೆಗೆ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಖಾಲಿ ಇರುವ ಎರಡು ಸಹಾಯಕ (ಫೈನಾನ್ಸ್​) ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
ಸಹಾಯಕ (ಅಡ್ಮಿನಿಸ್ಟ್ರೇಷನ್): ಯಾವುದೇ ವಿಷಯದಲ್ಲಿ ಶೇ.55ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ಆಯ್ಕೆ ಪ್ರಕ್ರಿಯೆ: ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.  ಆಯ್ಕೆಯಾದವರು ನವದೆಹಲಿಯಲ್ಲಿ ಕೆಲಸ ಮಾಡಬೇಕಾಗುತ್ತದೆ.

click me!