IRCON Recruitment 2022: ಇಂಜಿನಿಯರ್ ಸೇರಿ ವಿವಿಧ ಹುದ್ದೆಗಳಿಗೆ ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ನೇಮಕಾತಿ

By Suvarna News  |  First Published Mar 6, 2022, 1:39 PM IST

ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್  ಖಾಲಿ ಇರುವ ವಿವಿಧ ಇಂಜಿನಿಯರ್ ಹುದ್ದೆಗಳು ಸೇರಿ ಒಟ್ಟು  29 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮಾರ್ಚ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.


ಬೆಂಗಳೂರು(ಮಾ.6): ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ (Indian Railway Construction Company Limited)​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಸೀನಿಯರ್ ವರ್ಕ್ಸ್ ಇಂಜಿನಿಯರ್ (senior Work Engineer), ವ್ಯವಸ್ಥಾಪಕ (Manager) ಸೇರಿ ಒಟ್ಟು  29 ಹುದ್ದೆಗಳು  ಖಾಲಿ ಇದ್ದು ಅರ್ಹ  ಮತ್ತು  ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಬಹುದು.  ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್​ 30 ,2022  ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ  ಇಲಾಖೆಯ ಅಧಿಕೃತ ವೆಬ್‌ ತಾಣ https://www.ircon.org ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 29  ಹುದ್ದೆಗಳ ಮಾಹಿತಿ:
ವ್ಯವಸ್ಥಾಪಕ/ಸೇತುವೆ :  4
ಮ್ಯಾನೇಜರ್/ಅರ್ತ್ ವರ್ಕ್ : 4
ಮ್ಯಾನೇಜರ್/ಸಿವಿಲ್ : 8
ಮ್ಯಾನೇಜರ್/ಜನರಲ್ : 1
ಮ್ಯಾನೇಜರ್/ಕಾನೂನು : 1
ಮ್ಯಾನೇಜರ್/ಎಸ್ & ಟಿ : 2
ಸೀನಿಯರ್ ವರ್ಕ್ ಇಂಜಿನಿಯರ್/ಸರ್ವೆ : 2 
ಸುರಕ್ಷತಾ ಇಂಜಿನಿಯರ್ : 2
ಸೀನಿಯರ್ ವರ್ಕ್ಸ್ ಇಂಜಿನಿಯರ್ / ಗುಣಮಟ್ಟ : 1 

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿದ LLB, ಡಿಪ್ಲೊಮಾ, PG ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಪಡೆದಿರಬೇಕು.

BHEL RECRUITMENT 2022: ಬಿಎಚ್‌ಇಎಲ್‌ ನಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ

ವಯೋಮಿತಿ: ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ  ಸೀನಿಯರ್ ವರ್ಕ್ ಇಂಜಿನಿಯರ್/ಸರ್ವೆ , ಸುರಕ್ಷತಾ ಇಂಜಿನಿಯರ್, ಸೀನಿಯರ್ ವರ್ಕ್ಸ್ ಇಂಜಿನಿಯರ್ / ಗುಣಮಟ್ಟ   ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ  35 ವರ್ಷಗಳ ಮಿತಿ ನಿಗದಿಪಡಿಸಲಾಗಿದೆ. ಮಿಕ್ಕ ಹುದ್ದೆಗಳಿಗೆ ಗರಿಷ್ಠ 50 ವರ್ಷಗಳು,  OBC ಅವರಿಗೆ ಗರಿಷ್ಠ 38 ವರ್ಷ, SC / ST ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ನೀಡಲಾಗಿದೆ. 

ಅರ್ಜಿ ಶುಲ್ಕ: ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ  ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ  ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

NWDA Recruitment 2022: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಇಂಜಿನಿಯರ್ ಹುದ್ದೆಗೆ ನೇಮಕಾತಿ

ವೇತನ ವಿವರ: ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಸೀನಿಯರ್ ವರ್ಕ್ ಇಂಜಿನಿಯರ್/ಸರ್ವೆ , ಸುರಕ್ಷತಾ ಇಂಜಿನಿಯರ್, ಸೀನಿಯರ್ ವರ್ಕ್ಸ್ ಇಂಜಿನಿಯರ್ / ಗುಣಮಟ್ಟ  ಹುದ್ದೆಗೆ  ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ₹40,000 ರೂ ವೇತನ ಸಿಗಲಿದೆ. ಮಿಕ್ಕ ಹುದ್ದೆಗಳಿಗೆ ₹60,000 ವರೆಗೆ  ಪಡೆಯಲಿದ್ದಾರೆ.  

ಅರ್ಜಿ ಸಲ್ಲಿಸುವ ವಿಧಾನ: ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ https://www.ircon.org/index.php?lang=en ಗೆ ಭೇಟಿ ನೀಡಿ. ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಮಾರ್ಚ್ 30 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. 

click me!