ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ಖಾಲಿ ಇರುವ ವಿವಿಧ ಇಂಜಿನಿಯರ್ ಹುದ್ದೆಗಳು ಸೇರಿ ಒಟ್ಟು 389 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮಾರ್ಚ್ 12 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಫೆ.28): ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ (Indian Railway Construction Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಸೀನಿಯರ್ ವರ್ಕ್ಸ್ ಇಂಜಿನಿಯರ್, ಭೂವಿಜ್ಞಾನಿ ಸೇರಿ ಒಟ್ಟು 389 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 12 ,2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ ತಾಣ https://www.ircon.org ಗೆ ಭೇಟಿ ನೀಡಲು ಕೋರಲಾಗಿದೆ.
ಒಟ್ಟು 389 ಹುದ್ದೆಗಳ ಮಾಹಿತಿ:
ಸೀನಿಯರ್ ವರ್ಕ್ಸ್ ಇಂಜಿನಿಯರ್/ಸಿವಿಲ್ (Senior Works Engineer / Civil )-23 ಹುದ್ದೆಗಳು
ವರ್ಕ್ಸ್ ಇಂಜಿನಿಯರ್/ಸಿವಿಲ್ (Works Engineer / Civil )- 163 ಹುದ್ದೆಗಳು
ವರ್ಕ್ಸ್ ಇಂಜಿನಿಯರ್/ಸಿವಿಲ್ (Works Engineer / Civil )- 163 ಹುದ್ದೆಗಳು
ಸೈಟ್ ಸೂಪರ್‌ವೈಸರ್/ಸಿವಿಲ್ (Site Supervisor / Civil )-01 ಹುದ್ದೆಗಳು
ವರ್ಕ್ಸ್ ಇಂಜಿನಿಯರ್/ಎಲೆಕ್ಟ್ರಿಕಲ್ (Works Engineer/ Electrical) -09 ಹುದ್ದೆಗಳು
ಸೀನಿಯರ್ ವರ್ಕ್ಸ್ ಇಂಜಿನಿಯರ್/ಎಸ್ and ಟಿ (Senior Works Engineer / S and T) -08 ಹುದ್ದೆಗಳು
ವರ್ಕ್ಸ್ ಇಂಜಿನಿಯರ್/ಎಸ್&ಟಿ (Works Engineer/ S & T) -21 ಹುದ್ದೆಗಳು
ಭೂವಿಜ್ಞಾನಿ (Geologist) - 01 ಹುದ್ದೆ
undefined
INDIAN NAVY RECRUITMENT 2022: ನೌಕಾದಳದ SSC ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿದ ಹುದ್ದೆಗನುಸಾರ ವಿದ್ಯಾರ್ಹತೆ ಪಡೆದಿರಬೇಕು.
ವಿವಿಧ ಇಂಜಿನಿಯರಿಂಗ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಿವಿಲ್, ಎಲೆಕ್ಟ್ರಾನಿಕ್, ಎಲೆಕ್ಟ್ರಿಕಲ್, ಎಂಜಿನಿಯರಿಂಗ್ ನಲ್ಲಿ ಶೇ.60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ಭೂ ವಿಜ್ಞಾನಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಭೂ ವಿಜ್ಞಾನ ವಿಷಯದಲ್ಲಿ M.Sc/ M.Tech ಅಥವಾ ಭೂ ವಿಜ್ಞಾನ ಎಂಜಿನಿಯರಿಂಗ್ ಮಾಡಿರಬೇಕು. ಮಾತ್ರವಲ್ಲ ಶೇ.60ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯೋಮಿತಿ: ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ಮಿತಿ ನಿಗದಿಪಡಿಸಲಾಗಿದೆ. OBC ಅವರಿಗೆ ಗರಿಷ್ಠ 38 ವರ್ಷ, SC / ST ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ನೀಡಲಾಗಿದೆ.
ಅರ್ಜಿ ಶುಲ್ಕ: ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗೆ ಅನುಸಾರ ವೇತನ ₹25000 ದಿಂದ ₹40,000 ವರೆಗೆ ಪಡೆಯಲಿದ್ದಾರೆ.
ಅರ್ಜಿ ಸಲ್ಲಿಸುವ ವಿಧಾನ: ಭಾರತೀಯ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ https://www.ircon.org/index.php?lang=en ಗೆ ಭೇಟಿ ನೀಡಿ. ಅಗತ್ಯ ದಾಖಲೆಗಳೊಂದಿಗೆ ಆನ್‌ಲೈನ್ ಮೂಲಕ ಮಾರ್ಚ್ 12 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.