ಕಣಿವೆ ರಾಜ್ಯದ ಯುವಕರಿಗಾಗಿ 50 ಸಾವಿರ ಉದ್ಯೋಗ ಸೃಷ್ಟಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹತ್ವದ ಘೋಷಣೆಯೊಂದನ್ನು ಮಾಡಿದೆ.
ಶ್ರೀನಗರ, [ಆ.28]: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ.
ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು.
undefined
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3 ತಿಂಗಳುಗಳಲ್ಲಿ ಯುವಕರಿಗೆ ಉದ್ಯೋಗ ಭರ್ತಿ ಕಾರ್ಯ ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ಯುವಕರು ಹೆಚ್ಚಿನ ಮಟ್ಟದಲ್ಲಿ ಪಾಲ್ಗೊಂಡು ಅರ್ಹರು ಉದ್ಯೋಗ ಪಡೆಯಬೇಕು ಎಂದು ರಾಜ್ಯಪಾಲರು ಮನವಿ ಮಾಡಿಕೊಂಡರು.
ಆರ್ಟಿಕಲ್ 370 ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರವನ್ನು ತನ್ನ ಆಡಳಿತಕ್ಕೆ ತೆಗೆದುಕೊಂಡಿರುವ ಕೇಂದ್ರ ಸರ್ಕಾರ, ಅಲ್ಲಿನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಅದಕ್ಕೂ ಮುನ್ನ ಮೋದಿ ಸರ್ಕಾರ ಉದ್ಯೋಗಕ್ಕೆ ಆಧ್ಯತೆ ನೀಡಿದೆ.