ಕರ್ನಾಟಕ ಅಂಚೆ ಇಲಾಖೆಯಲ್ಲಿ 2637 ಹುದ್ದೆ, ಅರ್ಜಿ ಹಾಕಿ

By Web DeskFirst Published Aug 8, 2019, 3:37 PM IST
Highlights

ಭಾರತೀಯ ಅಂಚೆ ಇಲಾಖೆಯು ದೇಶಾದ್ಯಂತ ಸುಮಾರು 10 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಈ ಪೈಕಿ ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ  ಒಟ್ಟು 2637 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಯಾವ-ಯಾವ ಹುದ್ದೆ..? ಅರ್ಜಿ ಸಲ್ಲಿಸಲುಬೇಕಾದ ಅರ್ಹತೆಗಳೇನು..? ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು, (ಆ.8): ಕರ್ನಾಟಕ ಪೋಸ್ಟಲ್ ಸರ್ಕಲ್ ನಲ್ಲಿ ಖಾಲಿ ಇರುವ  ಒಟ್ಟು 2637 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 

ಪೋಸ್ಟ್‌ ಮಾಸ್ಟರ್‌, ಅಸಿಸ್ಟೆಂಟ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಂಚೆ ಸೇವಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು  ನಿಗದಿತ ದಿನಾಂಕ ಸೆಪ್ಟೆಂಬರ್ 4, 2019ರೊಳಗೆ ಸಲ್ಲಿಸಬಹುದು. 

ಜಾಬ್ಸ್ ಸುದ್ದಿಗಳಿಗೆಗಾಗಿ ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ: ಕನಿಷ್ಠ 18 ರಿಂದ ಗರಿಷ್ಠ ವಯೋಮಿತಿ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ+ಓಬಿಸಿ ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಅಂಗವಿಕಲ + ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಎಸ್‌ಎಸ್‌ಎಲ್‌ಸಿಯಲ್ಲಿ ಗಣಿತ ಮತ್ತು ಇಂಗ್ಲಿಷ್‌ ಭಾಷೆಯನ್ನು ಒಂದು ವಿಷಯನ್ನಾಗಿ ಅಧ್ಯಯನ ಮಾಡಿರುವುದು ಕಡ್ಡಾಯವಾಗಿದೆ. ಅಷ್ಟೇ ಅಲ್ಲದೆ ಅಭ್ಯರ್ಥಿಗಳು ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲಿಯೇ ನಿಗದಿತ ವಿದ್ಯಾರ್ಹತೆ ಹೊಂದಿರಬೇಕು.

 ಅಂದರೆ ರಾಜ್ಯದ ಅಭ್ಯರ್ಥಿಗಳು ಕನ್ನಡದಲ್ಲಿಯೇ ವ್ಯಾಸಂಗ ಮಾಡಿರಬೇಕು ಹಾಗೂ 60 ದಿನಗಳ ಕಂಪ್ಯೂಟರ್‌ ತರಬೇತಿ ಕೋರ್ಸ್‌ ಸರ್ಟಿಫಿಕೇಟ್‌ ಅನ್ನು ಹೊಂದಿರಬೇಕು.

ಅಭ್ಯರ್ಥಿಯು ಒಂದು ವೇಳೆ ಕಂಪ್ಯೂಟರ್‌ ಅನ್ನು ಒಂದು ವಿಷಯವಾಗಿ ಓದಿದ್ದರೆ ಈ ಸರ್ಟಿಫಿಕೇಟ್‌ನ ಅವಶ್ಯಕತೆ ಇರುವುದಿಲ್ಲ. ಇದರೊಂದಿಗೆ ಅಭ್ಯರ್ಥಿಗಳು ದ್ವಿಚಕ್ರ ವಾಹನ ಚಾಲನೆಯನ್ನು ತಿಳಿದಿರಬೇಕಿರುತ್ತದೆ.

ವೇತನ ಶ್ರೇಣಿ: ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆಗೆ ತಿಂಗಳಿಗೆ 12,000 ರಿಂದ 14,500 ರು. ಮತ್ತು ಅಸಿಸ್ಟೆಂಟ್‌ ಬ್ರಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಂಚೆ ಸೇವಕ ಹುದೆಗಳಿಗೆ 10,000 ರಿಂದ 12,000 ರು. ವೇತನವನ್ನು ನೀಗದಿಪಡಿಸಲಾಗಿದೆ.

ಅರ್ಜಿ ಶುಲ್ಕ: ಸಾಮಾನ್ಯ, ಆರ್ಥಿಕ ದುರ್ಬಲ ವರ್ಗ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 100 ರು. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಈ ಹುದ್ದೆಗಳ ಬಗ್ಗೆ ಮತ್ತಷ್ಟು ಮಾಹಿತಿ ತಿಳಿದುಕೊಳ್ಳಲು ವೆಬ್ ವಿಳಾಸಕ್ಕೆ ಇಲ್ಲಿ ಕ್ಲಿಕ್ ಮಾಡಿ.

click me!