ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವಂತ ಗ್ರಾಮೀಣ ದಕ್ ಸೇವಕ್ ನ 2,443 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.
ಬೆಂಗಳೂರು, (ಡಿ.22): ಕರ್ನಾಟಕ ಪೋಸ್ಟಲ್ ಸರ್ಕಲ್ 2443 ಗ್ರಾಮೀಣ ದಖ್ ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.
ಆನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ 20-01-2021ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
undefined
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಹತೆ: ಗ್ರಾಮೀಣ ದಖ್ ಸೇವಕ ಹುದ್ದೆಗಳಿಗೆ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.
ವಯೋಮಿತಿ: ಈ ಹುದ್ದೆಗಳಿಗೆ ಡಿಸೆಂಬರ್ 21,2020ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ ಶ್ರೇಣಿ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,000 ರಿಂದ 14,500 ರೂ. ವೇತನವನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ನೇರ ಸಂದರ್ಶನ ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಶುಲ್ಕ: ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿ ನೀಡಲಾಗಿದೆ.
ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ