ಕರ್ನಾಟಕ ಅಂಚೆ ವೃತ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

By Suvarna NewsFirst Published Nov 24, 2020, 3:18 PM IST
Highlights

ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರು, (ನ.24): ಕರ್ನಾಟಕ ಅಂಚೆ ವೃತ್ತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ನವೆಂಬರ್ 30ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಪೋಸ್ಟಲ್ ಅಸಿಸ್ಟೆಂಟ್, ಸ್ಟೋರಿಂಗ್ ಅಸಿಸ್ಟೆಂಟ್ ಸೇರಿದಂತೆ ಒಟ್ಟು 52 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಇದೇ ನ.30ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಬೋರ್ಡ್‌ನಿಂದ 12ನೇ ತರಗತಿ ಉತ್ತೀರ್ಣರಾಗಿರಬೇಕು. 

ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20 ರಿಂದ 25 ಸಾವಿರ ರೂ. ತನಕ ವೇತನ ನಿಗದಿಪಡಿಸಲಾಗಿದೆ.

ವಯೋಮಿತಿ: ಅರ್ಜಿ ಹಾಕುವ ಅಭ್ಯರ್ಥಿಗಳ ವಯೋಮಿತಿ 30 ವರ್ಷ ಮೀರಿರಬಾರದು. 

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 20 ಡಿಸೆಂಬರ್ 2020ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕಿದೆ. ಅರ್ಜಿ ಸಲ್ಲಿಸಲು ವಿಳಾಸ cpmgre@gmail.com / rectt.ka@indiapost.gov.in
 

click me!