ನಬಾರ್ಡ್ ನೇಮಕಾತಿ: SSLC ಮುಗಿಸಿದವರೂ ಅರ್ಜಿ ಹಾಕಬಹುದು

Published : Dec 29, 2019, 02:56 PM ISTUpdated : Dec 31, 2019, 08:57 PM IST
ನಬಾರ್ಡ್ ನೇಮಕಾತಿ: SSLC ಮುಗಿಸಿದವರೂ ಅರ್ಜಿ ಹಾಕಬಹುದು

ಸಾರಾಂಶ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ನಲ್ಲಿ ಕಚೇರಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. 

ಬೆಂಗಳೂರು, (ಡಿ.29):73 ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ (ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ) ನಬಾರ್ಡ್ ಅರ್ಜಿ ಆಹ್ವಾನಿಸಲಾಗಿದೆ. 

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 2020ರ ಜನವರಿ 12ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದಾದ್ಯಂತ ಗ್ರಾಮೀಣಾಭಿವೃದ್ಧಿ ಬ್ಯಾಂಕಿಂಗ್ ಸೇವೆ (RDBS)ಯ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತರಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. 

ಕರ್ನಾಟಕ: ಲ್ಯಾಂಡ್ ಸರ್ವೇಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: 10ನೇ ತರಗತಿ ಅಥವಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಡಿಸೆಂಬರ್ 1,2019ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ: ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿಯ ಕಚೇರಿ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 24,000 ರೂ. ವೇತನ ನಿಗದಿಪಡಿಸಲಾಗಿದೆ. 

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನೇಮಕಾತಿ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಭಾರತದ ಹೊಸ 4 ಕಾರ್ಮಿಕ ಸಂಹಿತೆ ಜಾರಿಗೆ, ಕನಿಷ್ಠ ವೇತನ, 1 ವರ್ಷದದಲ್ಲಿ ಗ್ರಾಚ್ಯುಟಿ, 40 ಕೋಟಿ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ
ಹುಷಾರಿಲ್ಲ ಅಂದ್ರೆ MLA, MP ಕೂಡ ರಜೆ ತೆಗೆದ್ಕೊಳ್ಬೇಕಾ? ಹಿಂಗಿದೆ ರೂಲ್ಸ್