ರಾಷ್ಟ್ರೀಯ ಆರೋಗ್ಯ ಮಿಷನ್ ಮಧ್ಯಪ್ರದೇಶ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 283 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳು ಖಾಲಿ ಇದೆ.
ಬೆಂಗಳೂರು(ಡಿ.31): ರಾಷ್ಟ್ರೀಯ ಆರೋಗ್ಯ ಮಿಷನ್ , ಮಧ್ಯಪ್ರದೇಶ (National Health Mission Madhya Pradesh) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 283 ಲ್ಯಾಬ್ ಟೆಕ್ನಿಷಿಯನ್ (Lab Technician) ಹುದ್ದೆಗಳು ಖಾಲಿ ಇದ್ದು, ಡಿಎಂಎಲ್ಟಿ, ಬಿಎಸ್ಸಿ, ಎಂಎಲ್ಟಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 1, 2022ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ nhmmp.gov.in ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ಆರೋಗ್ಯ ಸಂಸ್ಥೆ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಡಿಎಂಎಲ್ಟಿ, ಬಿಎಸ್ಸಿ, ಎಂಎಲ್ಟಿ ಪಡೆದಿರಬೇಕು.
undefined
ವಯೋಮಿತಿ ಮತ್ತು ವೇತನ: ರಾಷ್ಟ್ರೀಯ ಆರೋಗ್ಯ ಮಿಷನ್ ನೇಮಕಾತಿಯ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21- 40 ವರ್ಷದೊಳಗಿರಬೇಕು.
SSC CGL Notification 2022: ಸಿಬ್ಬಂದಿ ನೇಮಕಾತಿ ಆಯೋಗದ ಸಿಜಿಎಲ್ ಪರೀಕ್ಷಾ ದಿನಾಂಕ ಪ್ರಕಟ
ಉದ್ಯೋಗದ ಸ್ಥಳ & ಆಯ್ಕೆ ಪ್ರಕ್ರಿಯೆ: ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಬರೋಬ್ಬರಿ 2980 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಮುಂದಾದ ರಾಷ್ಟ್ರೀಯ ಆರೋಗ್ಯ ಸಂಸ್ಥೆ: ರಾಷ್ಟ್ರೀಯ ಆರೋಗ್ಯ ಸಂಸ್ಥೆ (National Health Mission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2980 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಎನ್‌ಎಂಎಚ್ ಮುಂದಾಗಿದ್ದು, 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 7, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದುಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ತಾಣ http://upnrhm.gov.in/ ಗೆ ಭೇಟಿ ನೀಡಲು ಕೋರಲಾಗಿದೆ.
Central Water Board Recruitment 2022: SSLC ಆದವರಿಗೆ ಕಾರ್ ಡ್ರೈವರ್ ಹುದ್ದೆಗೆ ಅವಕಾಶ
ಶೈಕ್ಷಣಿಕ ವಿದ್ಯಾರ್ಹತೆ: ಎನ್‌ಎಂಎಚ್ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ ಮತ್ತು ವೇತನ: ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 18,150 ರೂ ನಿಂದ 28,015 ರೂ ವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.
BEL Recruitment 2022: ಬೆಂಗಳೂರಿನ BELನಲ್ಲಿ ಟ್ರೈನಿ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
ಉದ್ಯೋಗದ ಸ್ಥಳ & ಆಯ್ಕೆ ಪ್ರಕ್ರಿಯೆ: ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
SIMS Shivamogga Recruitment 2022: ವಿವಿಧ ಹುದ್ದೆಗಳ ಭರ್ತಿಗೆ ಕರೆ ನೀಡಿದ ವೈದ್ಯಕೀಯ ವಿಜ್ಞಾನ ಸಂಸ್ಥೆ