NBCC Recruitment 2022: ವಿವಿಧ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಎನ್‌ಬಿಸಿಸಿ ನೇಮಕಾತಿ

By Suvarna News  |  First Published Mar 16, 2022, 2:14 PM IST

ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ ಖಾಲಿ ಇರುವ  ವಿವಿಧ ಜೂನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 14  ಆಗಿದೆ. 


ಬೆಂಗಳೂರು(ಮಾ.16):  ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ (National buildings construction corporation-NBCC) ಖಾಲಿ ಇರುವ ವಿವಿಧ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 81 ವಿವಿಧ ಜೂನಿಯರ್ ಇಂಜಿನಿಯರ್ () ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಎಪ್ರಿಲ್ 14 ಕೊನೆಯ ದಿನವಾಗಿದೆ.

ಒಟ್ಟು 81 ಜೂನಿಯರ್ ಇಂಜಿನಿಯರ್ ಹುದ್ದೆಗಳ ಮಾಹಿತಿ 
ಜೂನಿಯರ್ ಇಂಜಿನಿಯರ್ -ಸಿವಿಲ್: 60
ಜೂನಿಯರ್ ಇಂಜಿನಿಯರ್-ಎಲೆಕ್ಟ್ರಿಕಲ್: 20
ಡೆಪ್ಯೂಟಿ ಜನರಲ್ ಮ್ಯಾನೇಜರ್ - ಸಿವಿಲ್ ಇಂಜಿನಿಯರ್: 1 ಹುದ್ದೆ

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗನುಸಾರವಾಗಿ ಡಿಪ್ಲೋಮಾ ಇಂಜಿನಿಯರಿಂಗ್ ವಿದ್ಯಾರ್ಹತೆ  ಪಡೆದಿರಬೇಕು. ಜೊತೆಗೆ ಶೇ.60 ಅಂಕಗಳನ್ನು ಪಡೆದಿರಬೇಕು.

NTPC Recruitment 2022: ವಿವಿಧ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಎನ್‌ಟಿಪಿಸಿ ನೇಮಕಾತಿ

ಅರ್ಜಿ ಶುಲ್ಕ: ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ Gen/ OBC/ EWS ಅಭ್ಯರ್ಥಿಗಳು ₹500 ಅರ್ಜಿ ಶುಲ್ಕ ಪಾವತಿಸಬೇಕು.  SC/ST/ PwD ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ:  ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. ಸರಕಾರ ನಿಯಮಗಳಿಗೆ ಅನುಗುಣವಾಗಿ ವಯೋಮಿತಿ ಸಡಿಲಿಕೆ ನೀಡಲಾಗಿರುತ್ತದೆ. 

ವೇತನ ವಿವರ: ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ₹27,270 ರಿಂದ 2ಲಕ್ಷ ತನಕ ವೇತನ ದೊರೆಯಲಿದೆ.

ESCI Recruitment 2022: ರಾಜ್ಯ ನೌಕರರ ವಿಮಾ ನಿಗಮ ನೇಮಕಾತಿ 

ವಿವಿಧ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಎನ್‌ಟಿಪಿಸಿ ನೇಮಕಾತಿ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ (National Thermal Power Corporation) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ವಿವಿಧ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು ಖಾಲಿ ಇದ್ದು  ಒಟ್ಟು 60 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 21 ಆಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು NTPCಯ ಅಧಿಕೃತ ವೆಬ್‌ತಾಣ https://www.ntpc.co.in/ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ.

ಒಟ್ಟು 60 ಹುದ್ದೆಗಳ ಮಾಹಿತಿ ಇಂತಿದೆ
ಎಕ್ಸಿಕ್ಯೂಟಿವ್ ಟ್ರೈನಿ-ಹಣಕಾಸು (CA/CMA): 20 ಹುದ್ದೆಗಳು
ಎಕ್ಸಿಕ್ಯೂಟಿವ್ ಟ್ರೈನಿ-ಹಣಕಾಸು (MBA):10 ಹುದ್ದೆಗಳು
ಎಕ್ಸಿಕ್ಯೂಟಿವ್ ಟ್ರೈ-ಹೆಚ್‌ಆರ್ : 30 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ CA/CMA/MBA ಮಾಡಿರಬೇಕು.

ವಯೋಮಿತಿ:  ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾರ್ಚ್ 21 , 2022ಕ್ಕೆ ಸಂಬಂಧಿಸಿದಂತೆ  ಗರಿಷ್ಠ 29 ವರ್ಷಗಳಾಗಿರಬೇಕು.

ವೇತನ ವಿವರ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ  ₹40,000 ದಿಂದ ₹1,40,000 ವೇತನ ದೊರೆಯಲಿದೆ.

click me!