ರಾಷ್ಟ್ರೀಯ ಆರೋಗ್ಯ ಮಿಷನ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4000 ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.
ಬೆಂಗಳೂರು(ಜ.9): ರಾಷ್ಟ್ರೀಯ ಆರೋಗ್ಯ ಮಿಷನ್ (National Health Mission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4000 ಕಮ್ಯುನಿಟಿ ಹೆಲ್ತ್ ಆಫೀಸರ್ (Community Health Officer) ಹುದ್ದೆಗಳು ಖಾಲಿ ಇದ್ದು, ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು, ಜನವರಿ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ nhmmp.gov.in ವೀಕ್ಷಿಸಬಹುದಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಬಿಎಸ್ಸಿ ನರ್ಸಿಂಗ್ ಪೂರ್ಣಗೊಳಿಸಿರಬೇಕು.
undefined
ಆಯ್ಕೆ ಪ್ರಕ್ರಿಯೆ: ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟಿಂಗ್ ಮಾಡಿ ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
MINISTRY OF DEFENCE RECRUITMENT 2022: 97 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಕ್ಷಣಾ ಸಚಿವಾಲಯ
ವಯೋಮಿತಿ:ರಾಷ್ಟ್ರೀಯ ಆರೋಗ್ಯ ಮಿಷನ್ ನೇಮಕಾತಿಯ ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ.
ವೇತನ: ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಉದ್ಯೋಗ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಮಾಸಿಕ 20,500 ವೇತನದ ಜೊತೆಗೆ 15,000 ರೂ ಇನ್ಸೆಂಟಿವ್ ನೀಡಲಾಗುತ್ತದೆ.
Bank of Baroda Recruitment 2022: ಸಂಪತ್ತು ನಿರ್ವಹಣಾ ಸೇವೆಗಳ ವಿಭಾಗದಲ್ಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜ.30 ಕೊನೆ ದಿನ: ರಾಷ್ಟ್ರೀಯ ಆರೋಗ್ಯ ಮಿಷನ್ , ಮಧ್ಯಪ್ರದೇಶ (National Health Mission Madhya Pradesh) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 283 ಲ್ಯಾಬ್ ಟೆಕ್ನಿಷಿಯನ್ (Lab Technician) ಹುದ್ದೆಗಳು ಖಾಲಿ ಇದ್ದು, ಡಿಎಂಎಲ್ಟಿ, ಬಿಎಸ್ಸಿ, ಎಂಎಲ್ಟಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜನವರಿ 1, 2022ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ nhmmp.gov.in ಗೆ ಭೇಟಿ ನೀಡಬಹುದು.
GAIL India Recruitment 2022: ಗೈಲ್ ಇಂಡಿಯಾದಲ್ಲಿ MBBS, MD ಪದವೀಧರರಿಗೆ ಉದ್ಯೋಗಾವಕಾಶ
ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ಆರೋಗ್ಯ ಸಂಸ್ಥೆ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಡಿಎಂಎಲ್ಟಿ, ಬಿಎಸ್ಸಿ, ಎಂಎಲ್ಟಿ ಪಡೆದಿರಬೇಕು.
ವಯೋಮಿತಿ ಮತ್ತು ವೇತನ: ರಾಷ್ಟ್ರೀಯ ಆರೋಗ್ಯ ಮಿಷನ್ ನೇಮಕಾತಿಯ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 21- 40 ವರ್ಷದೊಳಗಿರಬೇಕು.
Central Railway Recruitment 2022: MBBS ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಸುವರ್ಣವಕಾಶ
ಉದ್ಯೋಗದ ಸ್ಥಳ & ಆಯ್ಕೆ ಪ್ರಕ್ರಿಯೆ: ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಮಧ್ಯಪ್ರದೇಶದ ಭೋಪಾಲ್ ನಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
TCS Recruitment 2022: ಬೆಂಗಳೂರಿನಲ್ಲಿ ಟೆರಾ ಡೆವಲಪರ್ ಹುದ್ದೆಗೆ ಅರ್ಜಿ ಆಹ್ವಾನ