NHM Recruitment 2022: ಬರೋಬ್ಬರಿ 2980 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಮುಂದಾದ ರಾಷ್ಟ್ರೀಯ ಆರೋಗ್ಯ ಸಂಸ್ಥೆ

By Suvarna News  |  First Published Dec 19, 2021, 9:15 PM IST
  • 2980  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಷ್ಟ್ರೀಯ ಆರೋಗ್ಯ ಸಂಸ್ಥೆ
  • ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಜನವರಿ 7 ಕೊನೆ ದಿನ.
  • 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಆದವರಿಗೆ ಅವಕಾಶ
     

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಸಂಸ್ಥೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2980 ಲ್ಯಾಬ್​​ ಟೆಕ್ನಿಷಿಯನ್ ಹುದ್ದೆಗಳ ಭರ್ತಿಗೆ ಎನ್‌ಎಂಎಚ್ ಮುಂದಾಗಿದ್ದು, 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ಜನವರಿ 7, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದುಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ತಾಣ http://upnrhm.gov.in/ ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:  ಎನ್‌ಎಂಎಚ್  ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ಡಿಪ್ಲೋಮಾ, ಎಂಎಸ್ಸಿ, ಪದವಿ ಪೂರ್ಣಗೊಳಿಸಿರಬೇಕು.

Tap to resize

Latest Videos

undefined

ವಯೋಮಿತಿ ಮತ್ತು ವೇತನ: ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 18,150 ರೂ ನಿಂದ 28,015 ರೂ ವರೆಗೆ ವೇತನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು  40 ವರ್ಷದೊಳಗಿರಬೇಕು.

KUIDFC RECRUITMENT 2022: ರಾಜ್ಯದ ಕೆಯುಐಡಿಎಫ್‌ಸಿಯಲ್ಲಿ ಖಾಲಿ ಇರುವ 30 ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಿ

ಉದ್ಯೋಗದ ಸ್ಥಳ & ಆಯ್ಕೆ ಪ್ರಕ್ರಿಯೆ: ಲ್ಯಾಬ್​ ಟೆಕ್ನಿಷಿಯನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತರ ಪ್ರದೇಶದ ಲಕ್ನೋದಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ. ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

KIMS Koppal Recruitment 2022: ಕೊಪ್ಪಳದ ಕಿಮ್ಸ್ ನಲ್ಲಿ 17 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

ಬಿಇ, ಬಿ.ಟೆಕ್​ ಆದವರಿಗೆ UPSCಯಲ್ಲಿ ಉದ್ಯೋಗ: ಕೇಂದ್ರ ಲೋಕ ಸೇವಾ ಆಯೋಗ (Union Public Service Commission) ಖಾಲಿ ಇರುವ ಹುದ್ದೆಗಳ ಭರ್ತಿಗೆ  ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಸಬ್​​​ ಡಿವಿಷನಲ್ ಎಂಜಿನಿಯರಿಂಗ್ (Sub Divisional Engineering)​​ ಹುದ್ದೆಗಳು ಖಾಲಿ ಇದ್ದು, ಬಿಇ (BE), ಬಿ.ಟೆಕ್​ (B.Tech) ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಡಿಸೆಂಬರ್ 11 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು,  ಡಿಸೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಆನ್​ಲೈನ್( Online)​ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ UPSC ಅಧಿಕೃತ ವೆಬ್​ಸೈಟ್​ www.upsc.gov.in ಗೆ ಭೇಟಿ ನೀಡಬಹುದು.

Indian Air Force recruitment 2022: ವಾಯುಸೇನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ

ವಿದ್ಯಾರ್ಹತೆ ಮತ್ತು ಅರ್ಜಿ ಶುಲ್ಕ: ಸಬ್​ ಡಿವಿಶಿನಲ್​ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ ಪಾಸಾಗಿರಬೇಕು. ಸಾಮಾನ್ಯ/ಒಬಿಸಿ-25 ರೂ. SC/ST/ಮಾಜಿ ಸೈನಿಕ-ಯಾವುದೇ ಅರ್ಜಿ ಶುಲ್ಕ ಇಲ್ಲ

ವೇತನ ವಿವರ: ಸಬ್​ ಡಿವಿಶಿನಲ್​ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 15,600 ರಿಂದ 39,100 ರೂ ವೇತನ ಪಡೆಯಲಿದ್ದಾರೆ.

ವಯೋಮಿತಿ: ಸಬ್​​​ ಡಿವಿಷನಲ್ ಎಂಜಿನಿಯರಿಂಗ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ- 35 ವರ್ಷ, SC/ST-5 ವರ್ಷಗಳ ವಯೋಮಿತಿ ಸಡಿಲಿಕೆ, OBC- 3 ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಉದ್ಯೋಗದ ಸ್ಥಳ: ವೈಯಕ್ತಿಕ ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಅಭ್ಯರ್ಥಿಯನ್ನು  ಆಯ್ಕೆ ಮಾಡಲಾಗುತ್ತದೆ. ಸಬ್​ ಡಿವಿಶಿನಲ್​ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಂಡೀಘಡದಲ್ಲಿ ಉದ್ಯೋಗ ಮಾಡಬೇಕು.

click me!