NIFT Recruitment 2021: ಸಂಸ್ಥೆಯಲ್ಲಿ 190 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ

By Suvarna News  |  First Published Dec 11, 2021, 4:57 PM IST

* ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ(NIFT) ನೇಮಕಾತಿ
* ಖಾಲಿ ಇರುವ 190 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಭರ್ತಿ 
* ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು


(ನವದೆಹಲಿ ಡಿ.11) ನೀವೇನಾದ್ರೂ ಫ್ಯಾಷನ್ ಟೆಕ್ನಾಲಜಿ ಪರಿಣಿತರಾ? ಕೋರ್ಸ್ ಮುಗಿಸಿ ವಿವಿಧೆಡೆ ಕೆಲಸ ಮಾಡಿದ್ದೀರಾ? ಸಾಕಷ್ಟು ಅನುಭವವಿದ್ದರೂ ಉತ್ತಮ ಚಾನ್ಸ್ ಸಿಗದೇ ಒದ್ದಾಡುತ್ತಿದ್ದೀರಾ? ಅಂಥವರಿಗಾಗಿಯೇ ಇಲ್ಲೊಂದು ಬಂಪರ್ ಆಫರ್ ಇದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (National Institute of Fashion Technology-NIFT)ಯಲ್ಲಿ ಉದ್ಯೋಗದ ಬಾಗಿಲು ತೆರೆದಿದೆ.  ಕೇಂದ್ರ ಸರ್ಕಾರದ ಟೆಕ್ಸ್ ಟೈಲ್ ಇಲಾಖೆಯಡಿ(Ministry of Textiles) ಬರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯಲ್ಲಿ 190 ಸಹಾಯಕ ಪ್ರಾಧ್ಯಾಪಕ (Assistant Professor) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತಿಯುಳ್ಳ ಅಭ್ಯರ್ಥಿಗಳು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿಯ ಅಧಿಕೃತ ವೆಬ್‌ಸೈಟ್‌ https://www.cmsnift.com ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿಯಬಹುದು.

ಈ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಅರ್ಜಿ ಹಾಕಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಶುರುವಾಗಿದ್ದು, ಜನವರಿ 31,2022ರ ಸಂಜೆ 5:30ರವರೆಗೂ ಅರ್ಜಿ ಸಲ್ಲಿಕೆಗೆ ಕಾಲಾವಕಾಶವಿದೆ. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿ ತಿಳಿಯಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ಬೀಡಿ ಅಧಿಸೂಚನೆಯನ್ನು ಪರಿಶೀಲಿಸಬಹುದು.ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ (Assistant Professor)  ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್‌.ಡಿ ವಿದ್ಯಾರ್ಹತೆಯನ್ನು  ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Tap to resize

Latest Videos

undefined

190 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ!

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಯು ಜನವರಿ 31,2022ರ ಅನ್ವಯಿಸುವಂತೆ ಗರಿಷ್ಟ 40 ವರ್ಷದೊಳಗಿನವರಾಗಿ ಇರಬೇಕು. ಇನ್ನು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Bank of Baroda Recruitment 2021: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ, ತಿಂಗಳಿಗೆ 63,840 ರೂ ಸಂಬಳ

ಎನ್‌ಐಎಫ್‌ಟಿಯಲ್ಲಿ ಖಾಲಿ ಇರುವ ಬರೋಬ್ಬರಿ 190 ಸಹಾಯಕ ಪ್ರಾಧ್ಯಾಪಕ (Assistant Professor) ಹುದ್ದೆಗಳಿಗೆ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100ರೂ. ವೇತನವನ್ನು ನೀಡಲಾಗುವುದು. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (ಎನ್‌ಐಎಫ್‌ಟಿ) ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಗೆ ಜನವರಿ 31, 2022 ಕೊನೆಯ ದಿನಾಂಕ!

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 1,180/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. 

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಷನ್ ಟೆಕ್ನಾಲಜಿ (National Institute of Fashion Technology-NIFT) ನೇಮಕಾತಿಯ ಸಹಾಯಕ ಪ್ರಾಧ್ಯಾಪಕ (Assistant Professor) ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ https://www.cmsnift.comಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ. ಬಳಿಕ ನಿಗದಿತ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅಂದಹಾಗೆ ಅರ್ಜಿ ಸಲ್ಲಿಕೆಗೆ ಜನವರಿ 31, 2022 ಕೊನೆಯ ದಿನಾಂಕವಾಗಿದ್ದು, ಅಂದು ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಹಾಗಾಗಿ ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ಈ ಸಹಾಯಕ ಪ್ರಾಧ್ಯಪಕ ಹುದ್ದಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

IOCL Recruitment 2021: 300 ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ ಇಂಡಿಯನ್ ಆಯಿಲ್

ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿದ ಬಳಿಕ ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಅಗತ್ಯ ದಾಖಲೆಗಳನ್ನು ಲಗತ್ತಿಸಿ  ಫೆಬ್ರುವರಿ 15ರೊಳಗೆ ಅರ್ಜಿಯನ್ನು ಕಚೇರಿಗೆ ತಲುಪಿಸಬಹುದು. ರಿಜಿಸ್ಟ್ರಾರ್ ಕಚೇರಿ,  ಮುಖ್ಯ ಕಚೇರಿ, ಎನ್ ಐಎಫ್ ಟಿ ಕ್ಯಾಂಪಸ್, ಹೌಸ್ ಖಾಸ್, ನವದೆಹಲಿ- 110016 ಈ ವಿಳಾಸಕ್ಕೆ ದಾಖಲೆಗಳನ್ನು ರವಾನಿಸಬಹುದು. 

click me!