ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರು. ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 28 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಬೆಂಗಳೂರು(ಫೆ.14): ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜೂನಿಯರ್ ರಿಸರ್ಚ್ ಫೆಲೋ (Junior Research Fellow) ಮತ್ತು ಪ್ರಾಜೆಕ್ಟ್ ಅಸೋಸಿಯೇಟ್ (Project Associate) ಸೇರಿ ಒಟ್ಟು 7 ಹುದ್ದೆ ಖಾಲಿ ಇದ್ದು, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಫೆಬ್ರವರಿ 28 ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಟ್ಟು 7 ಹುದ್ದೆಗಳ ಮಾಹಿತಿ ಇಂತಿದೆ:
ಜೂನಿಯರ್ ರಿಸರ್ಚ್ ಫೆಲೋ-2
ಪ್ರಾಜೆಕ್ಟ್ ಅಸೋಸಿಯೇಟ್-2
ಮೀಡಿಯಾ ಆಫೀಸರ್-1
ರಿಸರ್ಚ್ ಅಸಿಸ್ಟೆಂಟ್-2
undefined
ಶೈಕ್ಷಣಿಕ ವಿದ್ಯಾರ್ಹತೆ: ನಿಮ್ಹಾನ್ಸ್ನಲ್ಲಿ ಖಾಲಿ ಇರುವ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಆಯಾಯ ಹುದ್ದೆಗೆ ಸಂಬಂಧಿಸಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಜೂನಿಯರ್ ರಿಸರ್ಚ್ ಫೆಲೋ-ಸೈಕಿಯಾಟ್ರಿಕ್ ಸೋಶಿಯಲ್ ವರ್ಕ್ನಲ್ಲಿ ಎಂ.ಫಿಲ್
ಪ್ರಾಜೆಕ್ಟ್ ಅಸೋಸಿಯೇಟ್- ಬಯೋಟೆಕ್ನಾಲಜಿ/ಜೆನೆಟಿಕ್ಸ್/ಬಯೋಕೆಮಿಸ್ಟ್ರಿಯಲ್ಲಿ ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್/ಟೆಕ್ನಾಲಜಿಯಲ್ಲಿ ಎಂ.ಟೆಕ್, ಕಾಗ್ನಿಟಿವ್ ಸೈನ್ಸ್ನಲ್ಲಿ ಮಾಸ್ಟರ್ ಆಫ್ ಸೈನ್ಸ್
ಮೀಡಿಯಾ ಆಫೀಸರ್-ಮಾಸ್ ಕಮ್ಯುನಿಕೇಷನ್ಸ್/ಮಾಸ್ ಮೀಡಿಯಾ/ ಜರ್ನಲಿಸಂ/ಸೋಶಿಯಲ್ ವರ್ಕ್ನಲ್ಲಿ ಸ್ನಾತಕೋತ್ತರ ಪದವಿ
ರಿಸರ್ಚ್ ಅಸಿಸ್ಟೆಂಟ್-ಎಲ್ಎಲ್ಬಿ, ಸೋಶಿಯಲ್ ವರ್ಕ್/ಪಬ್ಲಿಕ್ ಹೆಲ್ತ್/ಸೈಕಾಲಜಿಯಲ್ಲಿ ಸ್ನಾತಕೋತ್ತರ ಪದವಿ
INDIAN AIR FORCE RECRUITMENT 2022: ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳಿಗೆ ಭಾರತೀಯ ವಾಯುಪಡೆ ಅರ್ಜಿ ಆಹ್ವಾನ
ವಯೋಮಿತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಕಿಲ್ ಟೆಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಜೂನಿಯರ್ ರಿಸರ್ಚ್ ಫೆಲೋ-ಫೆಬ್ರವರಿ 27, 2022
ಪ್ರಾಜೆಕ್ಟ್ ಅಸೋಸಿಯೇಟ್-ಫೆಬ್ರವರಿ 27, 2022
ಮೀಡಿಯಾ ಆಫೀಸರ್-ಫೆಬ್ರವರಿ 28, 2022
ರಿಸರ್ಚ್ ಅಸಿಸ್ಟೆಂಟ್-ಫೆಬ್ರವರಿ 28, 2022
Oil India Limited Recruitment 2022: ಗ್ರೇಡ್ III, V ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವೇತನ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ಮಾಸಿಕ ವೇತನ ದೊರೆಯಲಿದೆ.
ಜೂನಿಯರ್ ರಿಸರ್ಚ್ ಫೆಲೋ : 31,000 ರೂ
ಪ್ರಾಜೆಕ್ಟ್ ಅಸೋಸಿಯೇಟ್ 25,000 ರಿಂದ 31,000 ರೂ
ಮೀಡಿಯಾ ಆಫೀಸರ್ : 65,000 ರೂ
ರಿಸರ್ಚ್ ಅಸಿಸ್ಟೆಂಟ್ : 35,000 ರೂ
ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ- pradaud@gmail.com ಗೆ ಜನವರಿ 2, 2022ರೊಳಗೆ ಕಳುಹಿಸಲು ಕೋರಲಾಗಿದೆ.
TCIL Recruitment 2022: ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನ