NIMHANS Recruitment 2022: ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಆಹ್ವಾನಿಸಿದ ನಿಮ್ಹಾನ್ಸ್

By Suvarna News  |  First Published Feb 4, 2022, 8:58 PM IST

ಬೆಂಗಳೂರಿನ ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 8, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.


ಬೆಂಗಳೂರು (ಫೆ.4): ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ಬೆಂಗಳೂರು (National Institute of Mental Health and Neuro Sciences) ಇಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1 ಕಚೇರಿ ಆಡಳಿತಗಾರ ( Office Administrator ) ಹುದ್ದೆ ಖಾಲಿ ಇದ್ದು,  ಅಭ್ಯರ್ಥಿಗಳುಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 8, 2022 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು nimhans.ac.in ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ  ಬಿಎ, ಬಿಕಾಂ, ಬಿಸಿಎ, ಬಿಎಸ್ಸಿ ಪೂರ್ಣಗೊಳಿಸಿರಬೇಕು.

Tap to resize

Latest Videos

undefined

ಕೆಲಸದ ಅನುಭವ: ನಿಮ್ಹಾನ್ಸ್​​ನಲ್ಲಿ ಖಾಲಿ ಇರುವ ಕಚೇರಿ ಆಡಳಿತಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಫೀಸ್ ಕಮ್ಯುನಿಕೇಷನ್, ಬೇಸಿಕ್ ಅಕೌಂಟಿಂಗ್, ಟ್ಯಾಲಿ, ಎಂಎಸ್​ ಎಕ್ಸೆಲ್ ಮತ್ತು ಎಂಎಸ್ ಆಕ್ಸೆಸ್​ನಲ್ಲಿ ಡಾಟಾ ಎಂಟ್ರಿ ಯೂಸಿಂಗ್ ಮಾಡುವುದು ತಿಳಿದಿರಬೇಕು.  ಅಕೌಂಟ್ಸ್​ ಮತ್ತು ಆಫೀಸ್ ಅಡ್ಮಿನಿಸ್ಟ್ರೇಷನ್​​ನಲ್ಲಿ ಕನಿಷ್ಠ 6 ತಿಂಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ವಯೋಮಿತಿ: ಕಚೇರಿ ಆಡಳಿತಗಾರ   ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು  35 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಕಚೇರಿ ಆಡಳಿತಗಾರ  ಹುದ್ದೆಗೆ  ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗೆ  ತಿಂಗಳಿಗೆ 25,000ರೂ ವೇತನ ನೀಡಲಾಗುತ್ತದೆ. ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಾಗುತ್ತದೆ.

KEA ASSISTANT PROFESSOR EXAM SCHEDULE 2022: ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರಸ್ತಾವಿತ ವೇಳಾಪಟ್ಟಿ ಬಿಡುಗಡೆ

ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 9 ಕೊನೆಯ ದಿನ : ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ  6 ಸೀನಿಯರ್ ಎಂಜಿನಿಯರ್ (senior engineer) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಫೆಬ್ರವರಿ 9ರೊಳಗೆ ಅರ್ಜಿ ಸಲ್ಲಿಸಬಹುದು.  ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಬಿಇಎಲ್ ನಲ್ಲಿ ಖಾಲಿ ಇರುವ ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂಗಳ ವರೆಗೆ ವೇತನ ಸಿಗಲಿದೆ. ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ:  ಬಿಇಎಲ್ ನಲ್ಲಿ ಖಾಲಿ ಇರುವ ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಫೆಬ್ರವರಿ 9,2022ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಬೇಕು.

ಕಚೇರಿ ವಿಳಾಸ:
DGM (HR/MR,MS&ADSN)
Bharat Electronics Limited
Jalahalli Post, Bangalore-560013, Karnataka.

AAAL Recruitment 2022: ಕಮಾಂಡರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

click me!