NIMHANS Recruitment 2022 ಖಾಲಿ ಇರುವ 9 ಹುದ್ದೆಗಳಿಗೆ ನೇಮಕಾತಿ

By Suvarna News  |  First Published Apr 3, 2022, 1:16 PM IST

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಖಾಲಿ ಇರುವ 9 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಏಪ್ರಿಲ್​ 15 ಕೊನೆಯ ದಿನವಾಗಿದೆ. 


ಬೆಂಗಳೂರು(ಎ.3): ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (National Institute of Mental Health and Neuro Sciences  -NIMHANS ) ಇಲ್ಲಿ ಖಾಲಿ ಇರುವ ವಿವಿಧ  ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.   ಲೆಕ್ಕಾಧಿಕಾರಿ ( Accountant), ಯೋಜನೆಯ ಸಂಯೋಜಕರು (Project Coordinator), ಯೋಜನಾ ಅಧಿಕಾರಿ (Project officer) ಹುದ್ದೆಗಳು ಸೇರಿ ಒಟ್ಟು 9 ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಮೇಲ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್​ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ apcnimhans@gmail.com   ಹೆಚ್ಚಿನ ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು  ಅಧಿಕೃತ ವೆಬ್‌ತಾಣ nimhans.ac.in ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಲು ಕೋರಲಾಗಿದೆ.

ಒಟ್ಟು 9 ಹುದ್ದೆಗಳ ಮಾಹಿತಿ
ಯೋಜನೆಯ ಸಂಯೋಜಕರು  : 2
ಯೋಜನಾ ಅಧಿಕಾರಿ: 6
ಲೆಕ್ಕಾಧಿಕಾರಿ​: 1

Tap to resize

Latest Videos

ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಜೊತೆಗೆ  ಸಂಶೋಧನೆ ಅಥವಾ ಕೆಲಸದಲ್ಲಿ ಕನಿಷ್ಠ 2 ವರ್ಷಗಳ ಅನುಭವವನ್ನು ಹೊಂದಿರಬೇಕು.

ಯೋಜನೆಯ ಸಂಯೋಜಕರು ಹುದ್ದೆಗೆ ಸಮಾಜಕಾರ್ಯ, ಮನೋವಿಜ್ಞಾನದಲ್ಲಿ ಪದವಿ, M.Phil ಮಾಡಿರಬೇಕು. 
ಪ್ರಾಜೆಕ್ಟ್ ಆಫೀಸರ್ ಹುದ್ದೆಗೆ ಸಮಾಜಕಾರ್ಯ, ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.
ಅಕೌಂಟೆಂಟ್​ ಹುದ್ದೆಗೆ ವಾಣಿಜ್ಯ ವಿಷಯದಲ್ಲಿ  ಪದವಿ ಪಡೆದಿರಬೇಕು. 

ECIL RECRUITMENT 2022: ಒಟ್ಟು 1625 ಕಿರಿಯ ತಂತ್ರಜ್ಞ ಹುದ್ದೆಗಳಿಗೆ ನೇಮಕಾತಿ

ವಯೋಮಿತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗನುಸಾರವಾಗಿ ವಯೋಮಿತಿನಿಗದಿಯಾಗಿದೆ.  ಪ್ರಾಜೆಕ್ಟ್ ಕೋಆರ್ಡಿನೇಟರ್ ಹುದ್ದೆಗೆ ಗರಿಷ್ಠ 30 ವರ್ಷ ಮತ್ತು ಮಿಕ್ಕುಳಿದ ಹುದ್ದೆಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿ ನಿಗದಿಪಡಿಲಾಗಿದೆ. ವರ್ಗಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

NIT Delhi Recruitment 2022 ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ

ವೇತನ ವಿವರ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ಮಾಸಿಕ ವೇತನ ದೊರೆಯಲಿದೆ.

ಯೋಜನೆಯ ಸಂಯೋಜಕರು ಹುದ್ದೆಗೆ ಮಾಸಿಕ ₹55,000 ದೊರೆಯಲಿದೆ.
ಯೋಜನಾ ಅಧಿಕಾರಿ ಹುದ್ದೆಗೆ ಮಾಸಿಕ ₹35,000 ದೊರೆಯಲಿದೆ.
ಲೆಕ್ಕಾಧಿಕಾರಿ ಹುದ್ದೆಗೆ ಮಾಸಿಕ ₹25,000 ದೊರೆಯಲಿದೆ.

ಅರ್ಜಿ ಶುಲ್ಕ: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿಧಿಸಲಾಗಿಲ್ಲ.

CPCL Recruitment 2022 ಚೆನ್ನೈನ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 

click me!