ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 60 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಪ್ರಿಲ್ 29 ಕೊನೆಯ ದಿನಾಂಕವಾಗಿದೆ.
ಬೆಂಗಳೂರು (ಎ.2): ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (National Institute of Technology)ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 60 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಎಪ್ರಿಲ್ 29 ಕೊನೆಯ ದಿನಾಂಕವಾಗಿದೆ. ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ, ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ರಿಜಿಸ್ಟ್ರಾರ್, ವೈದ್ಯಕೀಯ ಅಧಿಕಾರಿ, ತಾಂತ್ರಿಕ ಸಹಾಯಕ, ಅಧೀಕ್ಷಕ, ವೈಯಕ್ತಿಕ ಸಹಾಯಕ, ತಂತ್ರಜ್ಞ, ಸಹಾಯಕ, ಕಛೇರಿ ಪರಿಚಾರಕ ಹುದ್ದೆಗಳು ಖಾಲಿ ಇದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://home.iitd.ac.in/ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ 10 ನೇ ತರಗತಿ, ಪಿಯುಸಿ, ಡಿಪ್ಲೊಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿರಬೇಕು.
ಅರ್ಜಿ ಶುಲ್ಕ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು ₹1000 ಮತ್ತು SC/ST ಅಭ್ಯರ್ಥಿಗಳು ₹500 ಪಾವತಿಸಬೇಕು.
SC/ST ನೌಕರರ ಬಡ್ತಿ ಮೀಸಲಾತಿ ರದ್ದು ಮಾಡಿದ್ರೆ ಅಶಾಂತಿಗೆ ಕಾರಣ: ಸುಪ್ರೀಂಗೆ ಕೇಂದ್ರ
ವೇತನ ವಿವರ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹5,200 ರಿಂದ 34,800 ವೇತನ ದೊರೆಯಲಿದೆ.
ವಯೋಮಿತಿ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 56 ವರ್ಷದ ಒಳಗಿನವರಾಗಿರಬೇಕು. SC/ ST /OBC/PWD/ PH ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
CPCL RECRUITMENT 2022 ಚೆನ್ನೈನ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ
ಸಂಶೋಧನಾ ವಿಭಾಗದ ವಿವಿಧ ಹುದ್ದೆಗಳಿಗೆ ನೇಮಕಾತಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation - DRDO) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕಿರಿಯ ಸಂಶೋಧಕ (Junior Research Fellow) ಮತ್ತು ಸಂಶೋಧನಾ ಸಹಾಯಕ (Research Associate) ಸೇರಿ ಒಟ್ಟು 8 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಎಪ್ರಿಲ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ
ಒಟ್ಟು 8 ಹುದ್ದೆಗಳ ಮಾಹಿತಿ ಇಂತಿದೆ
ಸಂಶೋಧನಾ ಸಹಾಯಕ: 1 ಹುದ್ದೆ
ಕಿರಿಯ ಸಂಶೋಧಕ: 7 ಹುದ್ದೆಗಳು
ಶೈಕ್ಷಣಿಕ ಅರ್ಹತೆ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.
ರಿಸರ್ಚ್ ಅಸೋಸಿಯೇಟ್ ಹುದ್ದೆಗೆ ಪಿಎಚ್‌ಡಿ ಅಥವಾ ರಸಾಯನಶಾಸ್ತ್ರದಲ್ಲಿ ತತ್ಸಮಾನ ಪದವಿ ಅಥವಾ ರಸಾಯನಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಮಾಡಿರಬೇಕು.
ಕಿರಿಯ ಸಂಶೋಧಕ (ರಸಾಯನಶಾಸ್ತ್ರ, ಭೌತಶಾಸ್ತ್ರ) ಹುದ್ದೆಗೆ ರಸಾಯನಶಾಸ್ತ್ರ / ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ NET ಪರೀಕ್ಷೆ ಪಾಸಾಗಿರಬೇಕು.
ಕಿರಿಯ ಸಂಶೋಧಕ (ಮೆಕ್ಯಾನಿಕಲ್) ಹುದ್ದೆಗೆ ಮೆಕ್ಯಾನಿಕಲ್ ನಲ್ಲಿ BE/ B.Tech ಪದವಿ/ಸ್ನಾತಕೋತ್ತರ ಪದವಿ ಮಾಡಿರಬೇಕು. NET/ GATE ಪರೀಕ್ಷೆ ಪಾಸಾಗಿರಬೇಕು.