NIT Karnataka Recruitment 2022: ಫೀಲ್ಡ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Jan 16, 2022, 9:07 PM IST

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ  ಕರ್ನಾಟಕದಲ್ಲಿ  ಖಾಲಿ ಇರುವ ಒಟ್ಟು 5 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಫೆಬ್ರವರಿ 2, 2022ರಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತರು ಭಾಗವಹಿಸಬಹುದು.


ಬೆಂಗಳೂರು(ಜ.16): ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (National Institute of Technology - NIT) ಕರ್ನಾಟಕದಲ್ಲಿ  ಖಾಲಿ ಇರುವ ಒಟ್ಟು 5 ಹುದ್ದೆಗಳಿಗೆ ಅಧಿಸೂಚನೆ ಪ್ರಕಟಿಸಿದೆ. ಹಿರಿಯ ಸಂಶೋಧನಾ ಅಭ್ಯರ್ಥಿ (Senior Research Fellow), ಕಿರಿಯ ಸಂಶೋಧನಾ ಅಭ್ಯರ್ಥಿ (Junior Research Fellow) ಮತ್ತು ಕ್ಷೇತ್ರ ಸಹಾಯಕ (Field Assistant) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 2, 2022ರಂದು ನಡೆಯುವ ನೇರ ಸಂದರ್ಶನದಲ್ಲಿ (walk-in-interview) ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ಅಧಿಕೃತ ವೆಬ್‌ತಾಣ https://www.nitk.ac.in/ ಗೆ ಭೇಟಿ ನೀಡಬಹುದು.

ಹುದ್ದೆಗಳ ವಿವಿರ ಇಂತಿದೆ: 
ಹಿರಿಯ ಸಂಶೋಧನಾ ಅಭ್ಯರ್ಥಿ (Senior Research Fellow) -1 ಹುದ್ದೆ
ಕಿರಿಯ ಸಂಶೋಧನಾ ಅಭ್ಯರ್ಥಿ (Junior Research Fellow) -3 ಹುದ್ದೆಗಳು
ಕ್ಷೇತ್ರ ಸಹಾಯಕ (Field Assistant) -1 ಹುದ್ದೆ

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ:  ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್/ಸಂಸ್ಥೆ/ ಯಿಂದ ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು  ಪಡೆದಿರಬೇಕು.

ಹಿರಿಯ ಸಂಶೋಧನಾ ಅಭ್ಯರ್ಥಿ - M.E ಅಥವಾ M.Tech
ಕಿರಿಯ ಸಂಶೋಧನಾ ಅಭ್ಯರ್ಥಿ - B.E  ಅಥವಾ B.Tech
ಕ್ಷೇತ್ರ ಸಹಾಯಕ - SSLC

BSNL RECRUITMENT 2022: ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಜ.20 ಅರ್ಜಿ ಸಲ್ಲಿಸಲು ಕೊನೆಯ ದಿನ

ವಯೋಮಿತಿ: ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹಿರಿಯ ಸಂಶೋಧನಾ ಅಭ್ಯರ್ಥಿ, ಕಿರಿಯ ಸಂಶೋಧನಾ ಅಭ್ಯರ್ಥಿ, ಕ್ಷೇತ್ರ ಸಹಾಯಕ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳನ್ನು ಫೆಬ್ರವರಿ 2,2022 ರಂದು ಬೆಳಿಗ್ಗೆ 9 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಮೇಲ್ ಕೂಡ ಮಾಡಬಹುದು.  ಈ ಮೇಲ್ ವಿಳಾಸ : csd@nitk.edu.in 

DHFWS Chikkaballapur Recruitment 2022: ಮೆಡಿಕಲ್ ಆಫೀಸರ್ ಸೇರಿ ವಿವಿಧ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ವೇತನ ವಿವರ: ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ.
ಹಿರಿಯ ಸಂಶೋಧನಾ ಅಭ್ಯರ್ಥಿ - ₹18,000 
ಕಿರಿಯ ಸಂಶೋಧನಾ ಅಭ್ಯರ್ಥಿ  -₹16,000 
ಕ್ಷೇತ್ರ ಸಹಾಯಕ - ₹ 12,000

UAS Dharwad Recruitment 2022: ಕೃಷಿ ವಿಶ್ವವಿದ್ಯಾಲಯದ Senior Research Fellow ಹುದ್ದೆಗೆ ಅರ್ಜಿ ಆಹ್ವಾನ

ಸಂದರ್ಶನ ನಡೆಯುವ ಸ್ಥಳದ ವಿಳಾಸ: ಕರ್ನಾಟಕದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯು ಮಂಗಳೂರಿನ ಸುರತ್ಕಲ್‌ ನಲ್ಲಿದ್ದು, ಆಸಕ್ತರು ಮಂಗಳೂರಿಗೆ ತೆರಳಿ ಸಂದರ್ಶನದಲ್ಲಿ ಭಾಗವಹಿಸಬಹುದು.
The Registrar
National Institute Of Technology Karnataka
Surathkal, Mangaluru-575 025, Karnataka, India.

ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಪ್ರಕಟಿಸಿರುವ ಅಧಿಸೂಚನೆ ಓದಲು  ಮತ್ತು ಹೆಚ್ಚಿನ ಮಾಹಿತಿಗೆ ಈ ಲಿಂಕ್ ಕ್ಲಿಕ್ ಮಾಡಿ : https://www.nitk.ac.in/advertisement-for-the-post-of-srfjrffield-assistant-in-virtual-lab 

click me!