ಮಂಗಳೂರಿನ ಸುರತ್ಕಲ್ ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆ ಖಾಲಿ ಇದ್ದು, ಈ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 30 ಕೊನೆಯ ದಿನವಾಗಿದೆ.
ಬೆಂಗಳೂರು(ಮಾ.16): ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (National Institute of Technology) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮಂಗಳೂರಿನ ಸುರತ್ಕಲ್ ನಲ್ಲಿರುವ ಸಂಸ್ಥೆಯಲ್ಲಿ ಸಮ್ಮರ್ ಇಂಟರ್ನ್‌ಶಿಪ್ (Internship) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 30 ಕೊನೆಯ ದಿನವಾಗಿದೆ. 2 ತಿಂಗಳು ಇಂಟರ್ನ್‌ಶಿಪ್ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ ಆಸಕ್ತರು https://www.nitk.ac.in/ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ B.Tech, M.E ಇಲ್ಲವೇ M.Tech, M.Sc ಮಾಡಿರಬೇಕು. 2 ತಿಂಗಳ ಈ ಇಂಟರ್ನ್ಶಿಪ್ನಲ್ಲಿ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 5 ಸಾವಿರ ಸ್ಟೆಫಂಡ್ ದೊರೆಯಲಿದೆ.
ವಯೋಮಿತಿ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ
jideshnitk@gmail.com ಅಥವಾ nitksanthosh@gmail.com
KARNATAKA APEX BANK RECRUITMENT 2022: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ ನೇಮಕಾತಿ
ಔಷಧ ವಿಶ್ಲೇಷಕರು ಹುದ್ದೆಗಳಿಗೆ ಕೆಪಿಎಸ್‌ಸಿ ನೇಮಕಾತಿ: ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission -KPSC) ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. 'ಗ್ರೂಪ್ ಸಿ' ವಿಭಾಗದಲ್ಲಿ ಒಟ್ಟು 2 ಔಷಧ ವಿಶ್ಲೇಷಕರು ( drug inspector ) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 21 ರಿಂದ ಎಪ್ರಿಲ್ 20ರವರೆಗೆ ಕಾಲಾವಕಾಶವಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://kpsc.kar.nic.in/ಗೆ ಭೇಟಿ ನೀಡಲು ಕೋರಲಾಗಿದೆ.
ಒಟ್ಟು 2 ಹುದ್ದೆಗಳ ಮಾಹಿತಿ
ಔಷಧ ವಿಶ್ಲೇಷಕರು (ಸಸ್ಯಶಾಸ್ತ್ರ-botany): 1ಹುದ್ದೆ
ಔಷಧ ವಿಶ್ಲೇಷಕರು (ರಸಾಯನಶಾಸ್ತ್ರ- Chemistry): 1ಹುದ್ದೆ
NTPC Recruitment 2022: ವಿವಿಧ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಎನ್‌ಟಿಪಿಸಿ ನೇಮಕಾತಿ
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಲೋಕಸೇವಾ ಆಯೋಗದ 'ಗ್ರೂಪ್ ಸಿ' ವಿಭಾಗದಲ್ಲಿ ಖಾಲಿ ಇರುವ ಔಷಧ ವಿಶ್ಲೇಷಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಬಿ.ಫಾರ್ಮ್ ಮತ್ತು ಡಿ.ಫಾರ್ಮ್ ಓದಿರಬೇಕು.
ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ 'ಗ್ರೂಪ್ ಸಿ' ವಿಭಾಗದಲ್ಲಿ ಖಾಲಿ ಇರುವ ಔಷಧ ವಿಶ್ಲೇಷಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು. ಸರಕಾರದ ನಿಯಮಗಳ ಪ್ರಕಾರ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, SC/ST,ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: ಕರ್ನಾಟಕ ಲೋಕಸೇವಾ ಆಯೋಗದ 'ಗ್ರೂಪ್ ಸಿ' ವಿಭಾಗದಲ್ಲಿ ಖಾಲಿ ಇರುವ ಔಷಧ ವಿಶ್ಲೇಷಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಅಭ್ಯರ್ಥಿಗಳು ₹600, 2ಎ/2ಬಿ/3ಎ/3ಬಿ ಗೆ ಸೇರಿದ ಅಭ್ಯರ್ಥಿಗಳು ₹300, ಮಾಜಿ ಸೈನಿಕ ಅಭ್ಯರ್ಥಿಗಳು ₹50 ಅರ್ಜಿ ಶುಲ್ಕ ಪಾವತಿಸಬೇಕು. SC/ST,ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಅರ್ಜಿಯನ್ನು ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಕಾಮನ್ ಸರ್ವಿಸ್ ಸೆಂಟರ್ ಮುಂಖಾಂತರ ಪಾವತಿಸಬಹುದು.