ಬೆಂಗಳೂರು(ಜ.14): ರೈಲ್ವೆ ಇಲಾಖೆ (Railway Department) ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಈಶಾನ್ಯ ರೈಲ್ವೆ (North Eastern Railway - NER) ಯಲ್ಲಿ ಖಾಲಿ ಇರುವ 323 ಗೇಟ್ ಮ್ಯಾನ್ (Gateman) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಾಜಿ ಸೈನಿಕರು (Ex-Serviceman) ಈ ಉದ್ಯೋಗಕ್ಕೆ ಅರ್ಜಿ ಹಾಕಲು ಅರ್ಹರಾಗಿರುತ್ತಾರೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 20 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣ https://ner.indianrailways.gov.in/ ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಈಶಾನ್ಯ ರೈಲ್ವೆಯಲ್ಲಿ ಖಾಲಿ ಇರುವ ಗೇಟ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ 10ನೇ ತರಗತಿ ಪಾಸಾಗಿರಬೇಕು. ಅಥವಾ ಸಮಾನಾದ ವಿದ್ಯಾರ್ಹತೆ ಪಡೆದಿರಬೇಕು
undefined
ಆಯ್ಕೆ ಪ್ರಕ್ರಿಯೆ: ಈಶಾನ್ಯ ರೈಲ್ವೆಯಲ್ಲಿ ಖಾಲಿ ಇರುವ ಗೇಟ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸೇನಾ ಸೇವೆಯಲ್ಲಿ ಇರುವ ಅನುಭವದ ಮೇಲೆ ಆಯ್ಕೆ ಮಾಡಲಾಗುತ್ತದೆ.
Prasar Bharati Recruitment 2022: ಮಲ್ಟಿ ಮೀಡಿಯಾ ಜರ್ನಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
ವೇತನ ಮತ್ತು ವಯೋಮಿತಿ: ಈಶಾನ್ಯ ರೈಲ್ವೆಯಲ್ಲಿ ಖಾಲಿ ಇರುವ ಗೇಟ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ವಯಸ್ಸು ಜುಲೈ 1, 2022ಕ್ಕೆ ಅನುಗುಣವಾಗಿ 65 ವರ್ಷಗಳ ಒಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 25,000 ರೂ ವೇತನ ಪಡೆಯಲಿದ್ದಾರೆ.
ಈಶಾನ್ಯ ರೈಲ್ವೆಯಲ್ಲಿ ಖಾಲಿ ಇರುವ ಗೇಟ್‌ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಸೂಕ್ತ ದಾಖಲೆಗೋಂದಿಗೆ ಜನವರಿ 20ರೊಳಗೆ ಸಲ್ಲಿಸಬೇಕು.
Infosys Off Campus Drive 2022: 55,000 ಫ್ರೆಶರ್ ಹುದ್ದೆಗಳ ನೇಮಕಾತಿ
ಕ್ರೀಡಾ ಕೋಟದಡಿ SSLC, PUC ಪಾಸಾದವರಿಗೆ ಉದ್ಯೋಗವಕಾಶ: ದಕ್ಷಿಣ ಮಧ್ಯ ರೈಲ್ವೆ (South Central Railway) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕ್ರೀಡಾ ಕೋಟಾದ (Sports Quota) ಒಟ್ಟು 21 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಜನವರಿ 17 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ scr.indianrailways.gov.in ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ದಕ್ಷಿಣ ಮಧ್ಯ ರೈಲ್ವೆ ನೇಮಕಾತಿಯ ಕ್ರೀಡಾ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ, 12 ನೇ ತರಗತಿ, ಐಟಿಐ ಪಾಸಾಗಿರಬೇಕು.
ವಯೋಮಿತಿ: ದಕ್ಷಿಣ ಮಧ್ಯ ರೈಲ್ವೆ ನೇಮಕಾತಿಯ ಕ್ರೀಡಾ ಕೋಟಾ (Sports Quota) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2022ಕ್ಕೆ 18-25 ವರ್ಷದೊಳಗಿರಬೇಕು.
ಅರ್ಜಿ ಶುಲ್ಕ: SC/ST/ಮಹಿಳೆ/ಅಲ್ಪಸಂಖ್ಯಾತ/EBC ಅಭ್ಯರ್ಥಿಗಳ ಕುಟುಂಬದ ಆದಾಯವು ವಾರ್ಷಿಕ 50000/- ಕ್ಕಿಂತ ಕಡಿಮೆ ಇದ್ದರೆ 250 ರೂ. ಅರ್ಜಿ ಶುಲ್ಕ. ಎಲ್ಲಾ ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕ
ಆಯ್ಕೆ ಪ್ರಕ್ರಿಯೆ: ಕ್ರೀಡಾ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕ್ರೀಡಾ ಪ್ರಯೋಗಗಳು, ಕ್ರೀಡಾ ಸಾಧನೆ ಮತ್ತು ಶೈಕ್ಷಣಿಕ ಅರ್ಹತೆ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.