ಈಶಾನ್ಯ ಗಡಿನಾಡು ರೈಲ್ವೆ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಹತ್ತನೇ ತರಗತಿ ಪಾಸ್ ಆಗಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಇದು ಸುವರ್ಣವಕಾಶ
ನವದೆಹಲಿ (ಆ.30): ಈಶಾನ್ಯ ಗಡಿನಾಡು ರೈಲ್ವೆಯಲ್ಲಿ ಅಪ್ರೆಂಟಿಸ್ ಕಾಯ್ದೆ ಅನ್ವಯ ಅಗತ್ಯ 4499 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈಶಾನ್ಯ ಗಡಿನಾಡು ರೈಲ್ವೆಯ ಒಟ್ಟು 7 ಘಟಕಗಳು ಮತ್ತು ವರ್ಕ್‌ಶಾಪ್‌ಗಳಲ್ಲಿ 4499 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ ಸೆಪ್ಟೆಂಬರ್ 15 ,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ನಿರುದ್ಯೋಗಿಗಳಿಗೆ ಗುಡ್ ಆಫರ್: 3348 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿದ್ಯಾರ್ಹತೆ: ಅಭ್ಯರ್ಥಿಗಳು ಕಡ್ಡಾಯವಾಗಿ 10 ತರಗತಿಯಲ್ಲಿ ಶೇಕಡಾ 50 ಅಂಕಗಳೊಂದಿಗೆ ಉತ್ತೀರ್ಣರಾಗಿದ್ದು, ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣಪತ್ರ ಪಡೆದಿರಬೇಕು.
ಅರ್ಜಿ ಶುಲ್ಕ: ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿ ನೀಡಲಾಗಿದ್ದು, ಇನ್ನುಳಿದಂತೆ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕ 100 ರೂಪಾಯಿ ನಿಗದಿಪಡಿಸಲಾಗಿದೆ. ಇನ್ನು ಈ ಅರ್ಜಿ ಶುಲ್ಕವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಅಥವಾ ಎಸ್‌ಬಿಐ ಚಲನ್ ಮೂಲಕ ಪಾವತಿಸಬಹುದು.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಯೋಮಿತಿ: ಅಭ್ಯರ್ಥಿಗಳ ವಯಸ್ಸು ಕನಿಷ್ಠ 15 ಮತ್ತು ಗರಿಷ್ಠ 24 ವರ್ಷಗಳು ಆಗಿರಬೇಕು. ಕಾಯ್ದಿರಿಸಿದ ತರಗತಿಗಳಿಗೆ ಮೀಸಲಾತಿ ವರ್ಗಕ್ಕೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ವಿಶ್ರಾಂತಿ ಇರುತ್ತದೆ. ಆದ್ರೆ, ವಯಸ್ಸನ್ನ 1 ಜನವರಿ 2020 ರವರೆಗೆ ಲೆಕ್ಕಹಾಕಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ನೇಮಕಾತಿಗಾಗಿ ಯಾವುದೇ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. 10 ಮತ್ತು ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಿ ಹುದ್ದೆಗಳನ್ನು ಹಂಚಲಾಗುತ್ತದೆ.
ಆಸಕ್ತರು Www.nfr.indianrailways.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.