NTPC Limited Recruitment 2022: ಜನರಲ್ ಸರ್ಜನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Jan 22, 2022, 7:07 PM IST

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌  ಖಾಲಿ ಇರುವ ಜನರಲ್ ಸರ್ಜನ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 27, 2022 ಆಗಿದೆ. 


ಬೆಂಗಳೂರು(ಜ.22): ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌ (National Thermal Power Corporation) ಖಾಲಿ ಇರುವ ಜನರಲ್ ಸರ್ಜನ್ ಮತ್ತು ಸ್ಪೆಷಲಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 15 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಜನವರಿ 27, 2022 ಆಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು NTPCಯ ಅಧಿಕೃತ ವೆಬ್‌ತಾಣ https://www.ntpc.co.in/ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ.

ಒಟ್ಟು 15 ಹುದ್ದೆಗಳ ಮಾಹಿತಿ:
ಜನರಲ್ ಸರ್ಜನ್: 8 ಹುದ್ದೆಗಳು
ಸ್ಪೆಷಲಿಸ್ಟ್ (ಜನರಲ್ ಮೆಡಿಸಿನ್): 7 ಹುದ್ದೆಗಳು

Tap to resize

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಜನರಲ್ ಸರ್ಜನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನರಲ್ ಸರ್ಜರಿಯಲ್ಲಿ MS/DNB ಜೊತೆಗೆ MBBS ಮಾಡಿರಬೇಕು. ಸ್ಪೆಷಲಿಸ್ಟ್ (ಜನರಲ್ ಮೆಡಿಸಿನ್) ಹುದ್ದೆಗೆ MD/DNB ಜೊತೆಗೆ MBBS ಮಾಡಿರಬೇಕು.

ದೇಶದ ನಿರುದ್ಯೋಗಿಗಳ ಸಂಖ್ಯೆ 5.3 ಕೋಟಿ, ಮಹಿಳೆಯರೇ ಹೆಚ್ಚು!

ಅರ್ಜಿ ಶುಲ್ಕ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌  ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ  ಸಾಮಾನ್ಯ/ಇಡಬ್ಲ್ಯೂಎಸ್/ಒಬಿಸಿ ವರ್ಗಕ್ಕೆ ಸೇರಿದವರು 300 ರೂ ಅರ್ಜಿ ಶುಲ್ಕ. SC/ST/PwBD/XSM ಮತ್ತು ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ವಯೋಮಿತಿ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌  ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳ ಗರಿಷ್ಠ ವಯಸ್ಸು 37. ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ವೇತನ ವಿವರ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಷನ್‌ ಲಿಮಿಟೆಡ್‌  ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗನುಸಾರ ವೇತನ ದೊರೆಯಲಿದೆ.
ಜನರಲ್ ಸರ್ಜನ್:  60,000  ರಿಂದ 1,80,000 ರೂ
ಸ್ಪೆಷಲಿಸ್ಟ್ (ಜನರಲ್ ಮೆಡಿಸಿನ್): 70,000 ದಿಂದ 2,00,000 ರೂ

SAKALA RECRUITMENT 2022: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ನೇಮಕಕ್ಕೆ ಅರ್ಜಿ ಆಹ್ವಾನ

ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು (university of agricultural sciences raichur) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. 2 ಸೀನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 25,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.  ಹೆಚ್ಚಿನ ಮಾಹಿತಿಗೆ  ಆಸಕ್ತರು https://uasraichur.edu.in/index.php/en/ ಗೆ ಭೇಟಿ ನೀಡಿ.

ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ, ಪಿಹೆಚ್‌ಡಿ ಪಡೆದಿರಬೇಕು.

ಅರ್ಜಿ ಸಲ್ಲಿಸಬೇಕಾದ ವಿಧಾನ: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://uasraichur.edu.in/index.php/en/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 25,2022 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
Pesticide Residue & Food Quality Analysis Laboratory,
University of Agricultural Sciences,
Raichur - 584104

click me!