ONGC Director Recruitment 2022: ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನಿಸಿದ ಒಎನ್‌ಜಿಸಿ

By Suvarna News  |  First Published Feb 26, 2022, 4:51 PM IST

ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಹಲವು  HR ಡೈರೆಕ್ಟರ್   ಹುದ್ದೆಗಳು ಖಾಲಿ ಇದ್ದು,  ಮೇ 5 ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 


ಬೆಂಗಳೂರು(ಫೆ.26): ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ (Oil and Natural Gas Corporation Limited-ONGC) ಸಾರ್ವಜನಿಕ ಉದ್ಯಮಗಳ ಆಯ್ಕೆ ಮಂಡಳಿಯ ಅಧಿಸೂಚನೆಯಂತೆ ಹಲವಾರು ಮಾನವ ಸಂಪನ್ಮೂಲ ನಿರ್ದೇಶಕ (Director Human Resources) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮತ್ತು ಆನ್‌ಲೈನ್ ಎರಡೂ ಪ್ರಕಾರವಾಗಿ ಕೂಡ ಅರ್ಜಿ ಸಲ್ಲಿಸಬಹುದು. ಈ ಹುದ್ದಗೆ ಅರ್ಜಿ ಸಲ್ಲಿಸಲು ಮೇ 5, 2022ರವೆಗೂ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಇಲಾಖೆ ಅಧಿಕೃತ ವೆಬ್‌ತಾಣ ongcindia.com ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಡೈರೆಕ್ಟರ್   ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಡಿಪ್ಲೋಮಾ, ಪದವಿ, ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು.

Latest Videos

undefined

ಅನುಭವ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಡೈರೆಕ್ಟರ್   ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಪ್ರತಿಷ್ಠಿತ ಸಂಸ್ಥೆಯಲ್ಲಿ ಮಾನವ ಸಂಪನ್ಮೂಲ/ ಸಿಬ್ಬಂದಿ ನಿರ್ವಹಣೆ/ ಕೈಗಾರಿಕಾ ಸಂಬಂಧಗಳ ವಿವಿಧ ವಿಷಯಗಳಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಕನಿಷ್ಠ ಐದು ವರ್ಷಗಳ  ಅನುಭವವನ್ನು ಹೊಂದಿರಬೇಕು.

ವಯೋಮತಿ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಡೈರೆಕ್ಟರ್   ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾರ್ಚ್ 24, 2022ಕ್ಕೆ ಅನ್ವಯವಾಗುವಂತೆ 45 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಡೈರೆಕ್ಟರ್   ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಡೈರೆಕ್ಟರ್   ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ವೇತನ ವಿವರ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಡೈರೆಕ್ಟರ್   ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,80,000 ರೂ ನಿಂದ 3,40,000ರವರೆಗೂ ವೇತನ ದೊರೆಯಲಿದೆ.

ಉದ್ಯೋಗ ಸ್ಥಳ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ಡೈರೆಕ್ಟರ್   ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ನವದೆಹಲಿಯಲ್ಲಿ ತಮ್ಮ ಕರ್ತವ್ಯ ನಿರ್ವಹಿಸಬೇಕಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ ಮತ್ತು ವಿಳಾಸ: ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೋರೇಷನ್‌‌‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ನಿರ್ದೇಶಕ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ONGC ವೆಬ್‌ಸೈಟ್ www.ongcindia.com ಗೆ  ಭೇಟಿ ನೀಡಿ. ಬಳಿಕ ಡೈರೆಕ್ಟರ್ ಉದ್ಯೋಗದ ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಡೌನ್‌ಲೋಡ್ ಮಾಡಿ. ಅಗತ್ಯ ಮಾಹಿತಿಗಳನ್ನು ತುಂಬಿ. ಅಗತ್ಯ ದಾಖಲೆಗಳನ್ನು ಇಟ್ಟು ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ ಕೊಡಿ. 
Smt Kimbuong Kipgen Secretary
Public Enterprises Selection Board
Public Enterprises Bhawan
Block No. 14, CGO Complex
Lodhi Road, New Delhi-110003

click me!