Oil India Limited Recruitment 2022: ಗ್ರೇಡ್ III, V ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

By Suvarna News  |  First Published Feb 14, 2022, 7:56 PM IST

ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ  ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು  ಫೆಬ್ರವರಿ 25,2022ರೊಳಗೆ ಅರ್ಜಿ  ಸಲ್ಲಿಸಲು ಕೋರಲಾಗಿದೆ.


ಬೆಂಗಳೂರು(ಫೆ.14): ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ (Oil India Limited) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಗ್ರೇಡ್ III, V ಯಲ್ಲಿ ಒಟ್ಟು 62  ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ  ಫೆಬ್ರವರಿ 25,2022ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://www.oil-india.com/ ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಬಿ.ಎಸ್ಸಿ, 10+2, ವಿದ್ಯಾರ್ಹತೆಯನ್ನು  ಪಡೆದಿರಬೇಕು.

Tap to resize

Latest Videos

undefined

ವಯೋಮಿತಿ: ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ 31 ರಿಂದ 36 ವರ್ಷದ ಒಳಗಿನ ವಯೋಮಾನದವರಾಗಿರಬೇಕು.SC,ST,OBC ಅಭ್ಯರ್ಥಿಗಳಿಗೆ ಅರಕಾರದ ನಿಯಮದನ್ವಯ ವಯೋಮಿತಿ ಸಡಿಲಿಕೆ ನೀಡಲಾಗಿದೆ.

NDRI Recruitment 2022: ರಾಷ್ಟ್ರೀಯ ಹೈನು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಈ ಕೂಡಲೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ: ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ   (Computer Based Test-CBT) ಆನ್‌ಲೈನ್ ಪರೀಕ್ಷೆ ಮತ್ತು ನೇರ ಸಂದರ್ಶನದ  ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ : ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ/ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಅರ್ಜಿ ಸಲ್ಲಿಕೆ ವಿಧಾನ: ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ನೇಮಕಾತಿಯ ಗ್ರೇಡ್ III, V ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.oil-india.com/default.aspx ಗೆ ಭೇಟಿ ನೀಡಿ.  ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ  ಫೆಬ್ರವರಿ 25,2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ. https://www.oil-india.com/Document/Career/Advertisement_for_Multiple_Posts_2022.pdf

IISC Recruitment 2022: ಬೆಂಗಳೂರಿನ ಐಐಎಸ್‌ಸಿಯಲ್ಲಿ ಇಂಜಿನಿಯರಿಂಗ್, MBA ಮಾಡಿದವರಿಗೆ ಉದ್ಯೋಗವಕಾಶ

ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗೆ ಫೆ.15 ಅರ್ಜಿ ಸಲ್ಲಿಸಲು ಕೊನೆಯ ದಿನ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ (Telecommunications Consultants India Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 6 ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ (Technician Apprentice Trainee) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಲು ಕೋರಲಾಗಿದೆ. ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ dot.gov.in ಗೆ ಅಥವಾ https://tcilindia.com/ಗೆ ಭೇಟಿ ನೀಡಬಹುದು. 

ಅರ್ಜಿ ಸಲ್ಲಿಸಬೇಕಾದ ವಿಳಾಸ: ಟೆಲಿಕಮ್ಯುನಿಕೇಷನ್ಸ್​ ಕನ್ಸಲ್ಟೆಂಟ್ಸ್​ ಇಂಡಿಯನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೊದಲಿಗೆ http://www.mhrdnats.gov.in/ ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು.  https://tcilindia.com/ ನಲ್ಲಿ ಅಧಿಸೂಚನೆಯನ್ನು ಓದಿಕೊಂಡು ಬಳಿಕ ಅಗತ್ಯ ದಾಖಲಾತಿಗಳೊಂದಿಗೆ ಫೆ.15ಕ್ಕೆ ಮೊದಲು tcilapprentice2021@gmail.com ಈ ಮೇಲ್  ಮಾಡಬೇಕು.

click me!