ಐಎಫ್ಎಸ್ ಅಧಿಕಾರಿ ನಿಧಿ ತಿವಾರಿಯವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಆದರೆ, ಈ ನಿಧಿ ಅವರ ಐಎಫ್‌ಎಸ್ ರ್ಯಾಂಕಿಂಗ್ ಎಷ್ಟಿದೆ ನೋಡಿ..
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿಯವರನ್ನು ನೇಮಿಸಲಾಗಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ, ನಿಧಿ ತಿವಾರಿಯವರನ್ನು ಪಿಎಂ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ.
ನಿಧಿ ತಿವಾರಿ ಯಾರು ಮತ್ತು ಈ ಹಿಂದೆ ಅವರು ಯಾವ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ. ಐಎಫ್‌ಎಸ್ ಅಧಿಕಾರಿ ನಿಧಿ ತಿವಾರಿಯವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ನೇಮಿಸಲು ಕ್ಯಾಬಿನೆಟ್ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ. ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ, ಈ ನೇಮಕಾತಿ (ಮಾ.31ರಿಂದ) ತಕ್ಷಣದಿಂದಲೇ ಜಾರಿಗೆ ಬರಲಿದೆ.
ಪ್ರಧಾನಿ ಕಚೇರಿಯಲ್ಲಿ ಡೆಪ್ಯೂಟಿ ಸೆಕ್ರೆಟರಿಯಾಗಿ ಸೇವೆ: ನಿಧಿ ತಿವಾರಿ ಪ್ರಸ್ತುತ ಪ್ರಧಾನಮಂತ್ರಿ ಕಚೇರಿಯಲ್ಲಿ (ಪಿಎಂಒ) ಡೆಪ್ಯೂಟಿ ಸೆಕ್ರೆಟರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರನ್ನು ನವೆಂಬರ್ 2022 ರಲ್ಲಿ ಪಿಎಂಒಗೆ ನೇಮಿಸಲಾಯಿತು. ಈ ಹಿಂದೆ, ಅವರು ವಿದೇಶಾಂಗ ಸಚಿವಾಲಯದಲ್ಲಿ (ಎಂಇಎ) ನಿಶ್ಯಸ್ತ್ರೀಕರಣ ಮತ್ತು ಅಂತರರಾಷ್ಟ್ರೀಯ ಭದ್ರತಾ ವ್ಯವಹಾರಗಳ ವಿಭಾಗದಲ್ಲಿ ಅಧೀನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರ ಅತ್ಯುತ್ತಮ ಆಡಳಿತಾತ್ಮಕ ಅನುಭವವನ್ನು ಗಮನದಲ್ಲಿಟ್ಟುಕೊಂಡು, ಈಗ ಅವರಿಗೆ ಪ್ರಧಾನ ಮಂತ್ರಿಯವರ ಖಾಸಗಿ ಕಾರ್ಯದರ್ಶಿಯಾಗಿ ಈ ಪ್ರಮುಖ ಜವಾಬ್ದಾರಿಯನ್ನು ವಹಿಸಲಾಗಿದೆ.
ಇದನ್ನೂ ಓದಿ: ಕೆಲಸದ ಟಾರ್ಗೆಟ್ ರೀಚ್ ಆಗದ ಉದ್ಯೋಗಿ ಕುತ್ತಿಗೆಗೆ ಬೆಲ್ಟ್ ಕಟ್ಟಿ ನಾಯಿಯಂತೆ ನಡೆಸಿಕೊಂಡ ಮ್ಯಾನೇಜರ್!
2014 ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಅಧಿಕಾರಿ ನಿಧಿ ತಿವಾರಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಅವರ ನೇಮಕಾತಿಯನ್ನು ಸಂಪುಟದ ನೇಮಕಾತಿ ಸಮಿತಿ ಅನುಮೋದಿಸಿದ್ದು, ಮಾರ್ಚ್ 29 ರಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಹೊರಡಿಸಿದ ಆದೇಶದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ದೃಢಪಡಿಸಲಾಗಿದೆ. ಮೂಲತಃ ಉತ್ತರ ಪ್ರದೇಶದ ವಾರಣಾಸಿಯ ಮೆಹಮುರ್ಗಂಜ್‌ನವರಾದ ತಿವಾರಿ ಆಡಳಿತ ಮತ್ತು ರಾಜತಾಂತ್ರಿಕತೆಯಲ್ಲಿ ಸ್ಥಿರವಾಗಿ ವೃತ್ತಿಜೀವನವನ್ನು ನಿರ್ಮಿಸಿಕೊಂಡಿದ್ದಾರೆ. 2013ರ ನಾಗರಿಕ ಸೇವಾ ಪರೀಕ್ಷೆಯಲ್ಲಿ ಅವರು 96ನೇ ರ್ಯಾಂಕ್ ಗಳಿಸಿದರು. ಈ ಹಿಂದೆ ಪರೀಕ್ಷೆಗೆ ತಯಾರಿ ನಡೆಸುವಾಗ ವಾರಣಾಸಿಯಲ್ಲಿ ಸಹಾಯಕ ಆಯುಕ್ತರಾಗಿ (ವಾಣಿಜ್ಯ ತೆರಿಗೆ) ಕೆಲಸ ಮಾಡಿದ್ದರು.