Railtel Corporation of India Recruitment 2022: 69 ಮ್ಯಾನೇಜರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ ಹುದ್ದೆಗಳು

By Suvarna News  |  First Published Jan 16, 2022, 10:37 PM IST

ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್  ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 23 ಆಗಿದೆ.


ನವದೆಹಲಿ(ಜ.8): ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Railtel Corporation of India Limited) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಮ್ಯಾನೇಜರ್ , ಸೀನಿಯರ್ ಮ್ಯಾನೇಜರ್ ಸೇರಿ ಒಟ್ಟು 69 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 23 ಆಗಿದೆ.   ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ http://railtelindia.com/ ಗೆ ಭೇಟಿ ನೀಡಬಹುದು.

69 ಹುದ್ದೆಗಳ ವಿವರ:
ಉಪ ವ್ಯವಸ್ಥಾಪಕ (Deputy Manager):52 ಹುದ್ದೆಗಳು
ಮ್ಯಾನೇಜರ್ (Manager):10 ಹುದ್ದೆಗಳು
ಹಿರಿಯ ಮ್ಯಾನೇಜರ್ (Senior Manager):7 ಹುದ್ದೆಗಳು

Tap to resize

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ:
 ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​ನಿಂದ ಕಡ್ಡಾಯವಾಗಿ  ಸ್ನಾತಕೋತ್ತರ ಪದವಿ ಪಡೆದಿರಬೇಕು. ಹುದ್ದೆಗನುಸಾರವಾಗಿ BE/BTech/BSc/MBA/PG Diploma/CA/ICWA (CMA)/LLB (Full time)/MSc/MCA ಮಾಡಿರಬೇಕು.

BSNL Recruitment 2022: ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಜ.20 ಅರ್ಜಿ ಸಲ್ಲಿಸಲು ಕೊನೆಯ ದಿನ

ವೇತನ ವಿವರ:  ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಮಾಸಿಕ  ₹40,000 ದಿಂದ ₹1,80,000 ತನಕ ವೇತನ ಪಡೆಯಲಿದ್ದಾರೆ.

ಆಯ್ಕೆ ಪ್ರಕ್ರಿಯೆ: ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ  ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳಿಗೆ ಮೊದಲು ಆನ್‌ಲೈನ್ ಪರೀಕ್ಷೆ  ಮೂಲಕ ಆಯ್ಕೆ ಮಾಡಲಾಗುತ್ತದೆ.  ಪರೀಕ್ಷೆಯಲ್ಲಿ ಶೇ.60 ರಷ್ಟು ಅಂಕ ಪಡೆದು ಆಯ್ಕೆಯಾದವರನ್ನು   ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆಮಾಡಲಾಗುತ್ತದೆ.  ಆಯ್ಕೆಯಾದವರು ನವದೆಹಲಿಯಲ್ಲಿ ಕೆಲಸ ಮಾಡಬೇಕಾಗುತ್ತದೆ.

ಅರ್ಜಿ ಶುಲ್ಕ: ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಾಮಾನ್ಯ ಅಭ್ಯರ್ಥಿಗಳು ₹1200 ಮತ್ತು  SC/ST/PwBDs ಅಭ್ಯರ್ಥಿಗಳು ₹600ರೂ  ಅರ್ಜಿ ಶುಲ್ಕ ಪಾವತಿಸಬೇಕು.

NIT KARNATAKA RECRUITMENT 2022: ಫೀಲ್ಡ್ ಅಸಿಸ್ಟೆಂಟ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ:  ಭಾರತೀಯ ರೈಲ್ವೆ ಹಣಕಾಸು ನಿಗಮ (Indian Railway Finance Corporation Limited -IRFC) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಿಂದಿ ಅನುವಾದಕ, ಅಸಿಸ್ಟೆಂಟ್(ಫೈನಾನ್ಸ್​), ಅಸಿಸ್ಟೆಂಟ್ (ಅಡ್ಮಿನಿಸ್ಟ್ರೇಷನ್) ಸೇರಿ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 28 ಆಗಿದೆ. 

ವಿದ್ಯಾರ್ಹತೆ:
ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​ನಿಂದ ಕಡ್ಡಾಯವಾಗಿ ಇಂಗ್ಲಿಷ್​ ಜೊತೆಗೆ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಖಾಲಿ ಇರುವ ಎರಡು ಸಹಾಯಕ (ಫೈನಾನ್ಸ್​) ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
ಸಹಾಯಕ (ಅಡ್ಮಿನಿಸ್ಟ್ರೇಷನ್): ಯಾವುದೇ ವಿಷಯದಲ್ಲಿ ಶೇ.55ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು.
ವೇತನ ವಿವರ:
ಹಿಂದಿ ಅನುವಾದಕ-  ತಿಂಗಳಿಗೆ 21,000-74,000 ರೂ
ಅಸಿಸ್ಟೆಂಟ್ (ಫೈನಾನ್ಸ್​)-ತಿಂಗಳಿಗೆ  21,000-74,000 ರೂ
ಅಸಿಸ್ಟೆಂಟ್ (ಅಡ್ಮಿನಿಸ್ಟ್ರೇಷನ್)-ತಿಂಗಳಿಗೆ  21,000-74,000 ರೂ

ಆಯ್ಕೆ ಪ್ರಕ್ರಿಯೆ: ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.  ಆಯ್ಕೆಯಾದವರು ನವದೆಹಲಿಯಲ್ಲಿ ಕೆಲಸ ಮಾಡಬೇಕಾಗುತ್ತದೆ.

click me!