ರೈಲ್ವೆ ನೇಮಕಾತಿ ಮಂಡಳಿ 2019 ನೇ ಸಾಲಿನ ನಾನ್-ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ ( NTPC) ಹುದ್ದೆಗಳ ಅಧಿಸೂಚನೆಯ ಸಿಬಿಟಿ-1 ಪರೀಕ್ಷೆಯ ಫಲಿತಾಂಶವನ್ನು ಜನವರಿ 15 ರಂದು ಬಿಡುಗಡೆ ಮಾಡಲು ತೀರ್ಮಾನಿಸಿದೆ.
ನವದೆಹಲಿ(ಜ.10): ರೈಲ್ವೆ ನೇಮಕಾತಿ ಮಂಡಳಿ (Railway Recruitment Board)2019 ನೇ ಸಾಲಿನ ನಾನ್-ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ ( NTPC) ಹುದ್ದೆಗಳ ಅಧಿಸೂಚನೆಯ ಸಿಬಿಟಿ-1 ಪರೀಕ್ಷೆಯ ಫಲಿತಾಂಶವನ್ನು ಜನವರಿ 15 ರಂದು ಬಿಡುಗಡೆ ಮಾಡಲು ತೀರ್ಮಾನಿಸಿದೆ. ಆದರೆ ಪರೀಕ್ಷೆಯ ಫಲಿತಾಂಶದ ಸಮಯವನ್ನು ನೀಡಲಾಗಿಲ್ಲ. ಸುಮಾರು 1 ಕೋಟಿಗೂ ಹೆಚ್ಚು ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ನೇಮಕಾತಿಯ ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ ಸ್ಟೇಜ್-1) ಬರೆದು, ಫಲಿತಾಂಶಕ್ಕಾಗಿ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ https://www.rrbbnc.gov.in/ ಗೆ ಭೇಟಿ ನೀಡಿ.
ಆರ್‌ಆರ್‌ಬಿ ಎನ್‌ಟಿಪಿಸಿ ಸಿಬಿಟಿ-1 ಪರೀಕ್ಷೆ ಬರೆದ ಕರ್ನಾಟಕ ವಲಯದ ಅಭ್ಯರ್ಥಿಗಳು ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://www.rrbbnc.gov.in/ ಗೆ ಭೇಟಿ ನೀಡಿ ಪರಿಶೀಲನೆ ನಡೆಸಬಹುದು.
undefined
ರೈಲ್ವೆ ನೇಮಕಾತಿ ಮಂಡಳಿಯು 2019 ರಲ್ಲಿ 35,281 ಎನ್‌ಟಿಪಿಸಿ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿತ್ತು. ಟೈಮ್‌ಕೀಪರ್, ಟ್ರೈನ್ ಕ್ಲರ್ಕ್, ಟಿಕೆಟ್ ಕ್ಲರ್ಕ್, ಕ್ಲರ್ಕ್-ಕಮ್-ಟೈಪಿಸ್ಟ್ ಮುಂತಾದ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗಳಿಗೆ 7 ಹಂತಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. RRB NTPC ಪರೀಕ್ಷೆಯನ್ನು ಡಿಸೆಂಬರ್ 28, 2020 ರಿಂದ ಜುಲೈ 31, 2021 ರವರೆಗೆ ಏಳು ಹಂತಗಳಲ್ಲಿ ನಡೆಸಲಾಯಿತು. ಅಭ್ಯರ್ಥಿಗಳು ಅಪ್ಲಿಕೇಶನ್ ನಂಬರ್, ಜನ್ಮ ದಿನಾಂಕವನ್ನು ನಮೂದಿಸಿ ತಮ್ಮ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದು.
RRB NTPC CBT-1 ಪರೀಕ್ಷೆ ಫಲಿತಾಂಶ ಬಿಡುಗಡೆ ನಂತರದಲ್ಲಿ, CBT-2 ಪರೀಕ್ಷೆ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. CBT-1 ಪರೀಕ್ಷೆಯಲ್ಲಿ ಶಾರ್ಟ್‌ಲಿಸ್ಟ್ ಆದ ಅಭ್ಯರ್ಥಿಗಳು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ.
ECIL RECRUITMENT 2022: ಇಂಜಿನಿಯರ್ ಹುದ್ದೆಗಳ ಪದವೀಧರರಿಗೆ ಸುವರ್ಣಾವಕಾಶ, ಇಂದೇ ಅರ್ಜಿ ಸಲ್ಲಿಸಿ
ಸ್ಪೋರ್ಟ್ಸ್ ಕೋಟಾದಡಿ ಖಾಲಿ ಹುದ್ದೆಗಳ ಭರ್ತಿಗೆ ಮುಂದಾದ ಆಗ್ನೇಯ ರೈಲ್ವೆ: ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಆಗ್ನೇಯ ರೈಲ್ವೆ(South Eastern Railway) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ಪೋರ್ಟ್ಸ್ ಕೋಟಾ (Sports Quota) ಆಧಾರದಲ್ಲಿ ಒಟ್ಟು 21 ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 3ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 2, 2022. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣ https://www.rrcser.co.in/ ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾರ್ಹತೆ: ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ 10ನೇ ತರಗತಿ, 12 ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು. ಮತ್ತು ರಾಜ್ಯ ರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯ ಪ್ರಮಾಣ ಪತ್ರ ಹೊಂದಿರಬೇಕು.
IRFC Recruitment 2022: ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಯೋಮಿತಿ: ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್ ಕೋಟಾ ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2022ಕ್ಕೆ 18-25 ವರ್ಷದೊಳಗಿರಬೇಕು. ವರ್ಗಗಳ ಆಧಾರದಲ್ಲಿ ವಯೋಮಿತಿ ಸಡಿಲಿಕೆ ಇದೆ.
ಆಯ್ಕೆ ಪ್ರಕ್ರಿಯೆ: ಆಗ್ನೇಯ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ವೀಕೃತ ಅರ್ಜಿಯ ಆಧಾರದಲ್ಲಿ ಶಾರ್ಟ್ಲಿಸ್ಟಿಂಗ್ ಮಾಡಿ, ಕ್ರೀಡಾ ಪ್ರಯೋಗಗಳು, ಕ್ರೀಡಾ ಸಾಧನೆ ಮತ್ತು ಶೈಕ್ಷಣಿಕ ಅರ್ಹತೆಯ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಉದ್ಯೋಗ ದೊರೆಯಲಿದೆ.