ಕೇಂದ್ರ ರೈಲ್ವೆಯ ರೈಲ್ವೆ ನೇಮಕಾತಿ ಕೋಶ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 2422 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 16, ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಬೆಂಗಳೂರು(ಜ.17): ಕೇಂದ್ರ ರೈಲ್ವೆಯ (Central Railway), ರೈಲ್ವೆ ನೇಮಕಾತಿ ಕೋಶ (Railway Recruitment Cell -RRC), ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 2422 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಫೆಬ್ರವರಿ 16, 2022ರ ಸಂಜೆ 5 ಗಂಟೆಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು https://rrccr.com/ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಒಟ್ಟು 2422 ಹುದ್ದೆಗಳ ವಿಂಗಡಣೆ ಇಂತಿದೆ.
ಮುಂಬೈ -1659
ಭುಸ್ವಾಲ್ ಕ್ಲಸ್ಟರ್ -418
ಪುಣೆ ಕ್ಲಸ್ಟರ್ -152
ನಾಗ್ಪುರ್ ಕ್ಲಸ್ಟರ್ -114
ಸೋಲಾಪುರ್ ಕ್ಲಸ್ಟರ್ -79
undefined
ಶೈಕ್ಷಣಿಕ ವಿದ್ಯಾರ್ಹತೆ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶೈಕ್ಷಣಿಕ ಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಶೇಕಡ.50 ಅಂಕಗಳಿಗೆ ಕಡಿಮೆ ಇಲ್ಲದಂತೆ ಪಾಸ್ ಮಾಡಿರಬೇಕು, ಜತೆಗೆ ಸಂಬಂಧಿತ ವಿಭಾಗದಲ್ಲಿ ಐಟಿಐ ಪಾಸ್ ಮಾಡಿರಬೇಕು.
FACT RECRUITMENT 2022: ಡೈರೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ, 1ಲಕ್ಷ ರೂ ವೇತನ
ವಯೋಮಿತಿ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಗರಿಷ್ಠ 24 ವರ್ಷ ವಯೋಮಿತಿ ಮೀರಿರಬಾರದು.
ಅರ್ಜಿ ಶುಲ್ಕ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ರೂ.100 ಪಾವತಿಸಬೇಕು. ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
ಮಾಸಿಕ ವೇತನ: ರೈಲ್ವೆ ನೇಮಕಾತಿ ಕೋಶದ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 8000 ದಿಂದ 10000 ರೂ ವೇತನ ದೊರೆಯಲಿದೆ.
RCF Recruitment 2022:10th,12th ಐಟಿಐ ಆದವರಿಗೆ ರೈಲು ಕೋಚ್ ಫ್ಯಾಕ್ಟರಿಯಲ್ಲಿ ಉದ್ಯೋಗವಕಾಶ
ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಭಾರತೀಯ ರೈಲ್ವೆ ಹಣಕಾಸು ನಿಗಮ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಿಂದಿ ಅನುವಾದಕ, ಅಸಿಸ್ಟೆಂಟ್(ಫೈನಾನ್ಸ್), ಅಸಿಸ್ಟೆಂಟ್ (ಅಡ್ಮಿನಿಸ್ಟ್ರೇಷನ್) ಸೇರಿ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 28 ಆಗಿದೆ. ಈಶಾನ್ಯ, ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಲಕ್ಷದ್ವೀಪದ ಅಭ್ಯರ್ಥಿಗಳಿಗೆ ಫೆಬ್ರವರಿ 1 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ವಿದ್ಯಾರ್ಹತೆ:ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ನಿಂದ ಕಡ್ಡಾಯವಾಗಿ ಇಂಗ್ಲಿಷ್ ಜೊತೆಗೆ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಖಾಲಿ ಇರುವ ಎರಡು ಸಹಾಯಕ (ಫೈನಾನ್ಸ್) ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
ಸಹಾಯಕ (ಅಡ್ಮಿನಿಸ್ಟ್ರೇಷನ್): ಯಾವುದೇ ವಿಷಯದಲ್ಲಿ ಶೇ.55ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು.
ಆಯ್ಕೆ ಪ್ರಕ್ರಿಯೆ: ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರು ನವದೆಹಲಿಯಲ್ಲಿ ಕೆಲಸ ಮಾಡಬೇಕಾಗುತ್ತದೆ.