SAIL Recruitment 2022: ವಿವಿಧ 245 ಮ್ಯಾನೇಜ್ ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿ

By Gowthami K  |  First Published Nov 3, 2022, 11:08 AM IST

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ತನ್ನ ಕಂಪೆನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ನವೆಂಬರ್ 23 ಕೊನೆಯ ದಿನವಾಗಿದೆ.


ಬೆಂಗಳೂರು (ನ.3): ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ತನ್ನ ಕಂಪೆನಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 245 ಮ್ಯಾನೇಜ್ ಮೆಂಟ್ ಟ್ರೈನಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನವೆಂಬರ್ 23ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಂಪೆನಿಯ ಅಧಿಕೃತ ವೆಬ್‌ತಾಣ www.sail.co.in ಗೆ ಭೇಟಿ ನೀಡಬಹುದು. 

ಒಟ್ಟು 245 ಮ್ಯಾನೇಜ್ ಮೆಂಟ್ ಟ್ರೈನೀ ಹುದ್ದೆಗಳ ಮಾಹಿತಿ ಇಲ್ಲಿದೆ
ಮ್ಯಾನೇಜ್‌ಮೆಂಟ್ ಟ್ರೈನಿ (ಮೆಕ್ಯಾನಿಕಲ್): 65 ಹುದ್ದೆಗಳು
ಮ್ಯಾನೇಜ್‌ಮೆಂಟ್ ಟ್ರೈನಿ (ಮೆಟಲರ್ಜಿಕಲ್) 52 ಹುದ್ದೆಗಳು
ಮ್ಯಾನೇಜ್‌ಮೆಂಟ್ ಟ್ರೈನಿ (ಎಲೆಕ್ಟ್ರಿಕಲ್) 59 ಹುದ್ದೆಗಳು
ಮ್ಯಾನೇಜ್‌ಮೆಂಟ್ ಟ್ರೈನಿ (ಇನ್‌ಸ್ಟ್ರುಮೆಂಟೇಶನ್) 13 ಹುದ್ದೆಗಳು
ಮ್ಯಾನೇಜ್‌ಮೆಂಟ್ ಟ್ರೈನಿ (ಗಣಿಗಾರಿಕೆ) 26  ಹುದ್ದೆಗಳು
ಮ್ಯಾನೇಜ್‌ಮೆಂಟ್ ಟ್ರೈನಿ (ರಾಸಾಯನಿಕ) 14 ಹುದ್ದೆಗಳು
ಮ್ಯಾನೇಜ್‌ಮೆಂಟ್ ಟ್ರೈನಿ (ಸಿವಿಲ್) 16 ಹುದ್ದೆಗಳು

Latest Videos

undefined

ಶೈಕ್ಷಣಿಕ ವಿದ್ಯಾರ್ಹತೆ: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಸಂಬಂಧಪಟ್ಟ  ಮೆಕ್ಯಾನಿಕಲ್, ಮೆಟಲರ್ಜಿ, ಎಲೆಕ್ಟ್ರಿಕಲ್, ಕೆಮಿಕಲ್, ಸಿವಿಲ್, ಇನ್ಸ್ಟ್ರುಮೆಂಟೇಶನ್ ಮತ್ತು ಗಣಿಗಾರಿಕೆ ವಿಷಯದಲ್ಲಿ ಇಂಜಿನಿಯರಿಂಗ್ ಪದವಿಯನ್ನು ಪೂರ್ಣಗೊಳಿಸಿರಬೇಕು. 

Bank of Baroda Recruitment 2022: ಖಾಲಿ ಇರುವ ವಿವಿಧ 60 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ:  ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 28 ವರ್ಷದ ಒಳಗಿರಬೇಕು.

ಆಯ್ಕೆ ಪ್ರಕ್ರಿಯೆ: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಗೇಟ್ 2022 ಪರೀಕ್ಷೆ, ಗುಂಪು ಚರ್ಚೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ರಾಜ್ಯದ ಯುವಕರಿಗೆ ರಾಜ್ಯೋತ್ಸವ ಗಿಫ್ಟ್ ; ಖಾಲಿ ಇರೋ 2.5 ಲಕ್ಷ ಸರ್ಕಾರಿ ಉದ್ಯೋಗ ಭರ್ತಿ

ಅರ್ಜಿ ಶುಲ್ಕ: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು  UR / OBC / EWS ಅಭ್ಯರ್ಥಿಗಳು 700 ರೂ ಅರ್ಜಿ ಶುಲ್ಕ ಮತ್ತು SC / ST / PwBD / EX-SM ಅಭ್ಯರ್ಥಿಗಳು 200 ರೂ ಅರ್ಜಿ ಶುಲ್ಕ ಪಾವತಿಸಬೇಕು. 

ವೇತನ ವಿವರ: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50000 ರೂ ನಿಂದ 1,80,000 ರೂ ವೇತನ ದೊರೆಯಲಿದೆ. 

click me!