ಭಾರತೀಯ ಉಕ್ಕು ಪ್ರಾಧಿಕಾರ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫೆಬ್ರವರಿ 9 ರಿಂದ 11 ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಲು ಅಧಿಸೂಚನೆಯಲ್ಲಿ ಕೋರಲಾಗಿದೆ.
ಬೆಂಗಳೂರು(ಜ.29): ಭಾರತೀಯ ಉಕ್ಕು ಪ್ರಾಧಿಕಾರ (Steel Authority of India- SAIL) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ . ಸ್ಪೆಷಲಿಸ್ಟ್ ಮತ್ತು ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಸೇರಿ ಒಟ್ಟು 24 ಹುದ್ದೆಗಳು ಖಾಲಿ ಇದ್ದು, ಎಂಬಿಬಿಎಸ್, ಎಂಎಸ್, ಎಂಡಿ ಪೂರ್ಣಗೊಳಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 9 ರಿಂದ 11 ರವರೆಗೆ ನಡೆಯುವ ನೇರ ಸಂದರ್ಶನದಲ್ಲಿ (Walk-in-Interview)ಭಾಗವಹಿಸಲು ಅಧಿಸೂಚನೆಯಲ್ಲಿ ಕೋರಲಾಗಿದೆ.
ಒಟ್ಟು 24 ಹುದ್ದೆಗಳ ವಿವರ:
ಸ್ಪೆಷಲಿಸ್ಟ್ - 08
ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್- 16
undefined
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಉಕ್ಕು ಪ್ರಾಧಿಕಾರ (SAIL)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಕಾಲೇಜಿನಿಂದ ಕಡ್ಡಾಯವಾಗಿ ಎಂಬಿಬಿಎಸ್, ಎಂಎಸ್, ಎಂಡಿ ಪೂರ್ಣಗೊಳಿಸಿರಬೇಕು.
ಸ್ಪೆಷಲಿಸ್ಟ್ ಹುದ್ದೆಗಳಿಗೆ ಪಿಜಿ ಡಿಪ್ಲೋಮಾ/ ಪದವಿ, ಎಂಬಿಬಿಎಸ್ ಪದವಿ ಮತ್ತು
ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಎಂಬಿಬಿಎಸ್ ಪದವಿ ಮಾಡಿರಬೇಕು.
ವಯೋಮಿತಿ: ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ 69 ವರ್ಷ ಮೀರಿರಬಾರದು.
ಉದ್ಯೋಗದ ಸ್ಥಳ: ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗುವ ಅಭ್ಯರ್ಥಿಗಳು ಪಶ್ಚಿಮ ಬಂಗಾಳದ ಕೆಲಸ ಮಾಡಬೇಕಾಗುತ್ತದೆ.
ವೇತನ ವಿವರ: ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗನುಸಾರ ವೇತನ ನಿಗದಿಯಾಗಿದೆ.
ಜಿಡಿಎಂಒ- ಮಾಸಿಕ 70,000 ರೂ
ಸ್ಪೆಷಲಿಸ್ಟ್(ಪಿಜಿ ಡಿಪ್ಲೊಮಾ)- ಮಾಸಿಕ 90,000 ರೂ
ಸ್ಪೆಷಲಿಸ್ಟ್(ಪಿಜಿ ಡಿಗ್ರಿ)- ಮಾಸಿಕ 1,20,000 ರೂ
ಆಯ್ಕೆ ಪ್ರಕ್ರಿಯೆ: ಭಾರತೀಯ ಉಕ್ಕು ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗಿದೆ.
ಸಂದರ್ಶನ ನಡೆಯುವ ಸ್ಥಳ:
ED ಕಚೇರಿ (M&HS)
DSP ಮುಖ್ಯ ಆಸ್ಪತ್ರೆ ದುರ್ಗಾಪುರ- 713205
ಪಶ್ಚಿಮ್ ಬರ್ಧಮಾನ್